Monday, August 3, 2026
spot_img
More
    spot_img
    HomeBreaking News5 ವರ್ಷ ಮಾತ್ರವಲ್ಲ ಮುಂದಿನ 15 ವರ್ಷಗಳವರೆಗೂ ಸಿದ್ದರಾಮಯ್ಯನವರೇ ಸಿಎಂ ಎಂಬುದು ನಮ್ಮ ಅಭಿಲಾಷೆ: ಕೆಎನ್‌...

    5 ವರ್ಷ ಮಾತ್ರವಲ್ಲ ಮುಂದಿನ 15 ವರ್ಷಗಳವರೆಗೂ ಸಿದ್ದರಾಮಯ್ಯನವರೇ ಸಿಎಂ ಎಂಬುದು ನಮ್ಮ ಅಭಿಲಾಷೆ: ಕೆಎನ್‌ ರಾಜಣ್ಣ

    ಬೆಂಗಳೂರು: ಕೇವಲ 5 ವರ್ಷ ಮಾತ್ರವಲ್ಲ. ಮುಂದಿನ 15 ವರ್ಷಗಳವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿರಬೇಕು ಎಂಬುದು ನಮ ಅಭಿಲಾಷೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರಿ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.

    Advertisement

    ಹಾಸನದಲ್ಲಿ ನಡೆಯುತ್ತಿರುವ ಜನಕಲ್ಯಾಣ ಸಮಾವೇಶದ ನಡುವೆ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸಿದ್ದರಾಮಯ್ಯ ಶಕ್ತಿಹೀನರಲ್ಲ. ಅವರಿಗೆ ಈಗಿರುವ ಶಕ್ತಿ ತುಂಬಿ ತುಳುಕುತ್ತಿದೆ. ಹೀಗಾಗಿ ಅವರಿಗೆ ಶಕ್ತಿ ತುಂಬುವ ಸಲುವಾಗಿ ಸಮಾವೇಶ ನಡೆಯುತ್ತಿದೆ ಎಂಬುದು ಅವಾಸ್ತವಿಕ ಎಂದರು.

    ಕಾಂಗ್ರೆಸ್‍ನಲ್ಲಿ ಅಧಿಕಾರ ಕೊಡುವುದು ಅಥವಾ ತೆಗೆದುಕೊಳ್ಳುವುದು ಹೈಕಮಾಂಡ್‍ನ ನಿರ್ಧಾರಕ್ಕೆ ಬಿಟ್ಟ ವಿಚಾರ. ನಮ ಅನಿಸಿಕೆ ಪ್ರಕಾರ, ಇನ್ನೂ 15 ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಬೇಕು ಎಂಬುದಾಗಿದೆ ಎಂದು ಹೇಳಿದರು.

    ಕಾಂಗ್ರೆಸ್ ಪಕ್ಷದಿಂದ ಸಮಾವೇಶ ನಡೆಸಲಾಗುತ್ತಿದೆ. ಇದರಲ್ಲಿ ಅಧಿಕಾರ ದುರುಪಯೋಗಪಡಿಸಿಕೊಳ್ಳುವ ಪ್ರಶ್ನೆಯೇ ಇಲ್ಲ. ಹಾಸನ ಜೆಡಿಎಸ್‍ನ ಭದ್ರಕೋಟೆಯಲ್ಲ. ಲೋಕಸಭೆ ಚುನಾವಣೆಯಲ್ಲಿ ಫಲಿತಾಂಶ ಏನಾಗಿದೆ? ಅನಗತ್ಯವಾಗಿ ಭದ್ರಕೋಟೆ ಎಂಬ ಭ್ರಮೆ ಹುಟ್ಟಿಸುವುದು ಬೇಡ ಎಂದರು.

    ಅಧಿಕಾರದಲ್ಲಿದ್ದಾಗ ಎಲ್ಲರೂ ಅವರದೇ ಆದ ರೀತಿಯಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಾರೆ. ರಾಜಕಾರಣಕ್ಕೆ ಬಂದವರು ಕೆಲಸ ಮಾಡಬಾರದು ಎಂದು ಇರುವುದಿಲ್ಲ. ಕಾಲಕ್ಕನುಗುಣವಾಗಿ ಸಾಮಥ್ರ್ಯನುಸಾರ ಕೆಲಸಗಳಾಗಿರುತ್ತವೆ. ಯಾರ ಕೊಡುಗೆಯನ್ನು ಯಾರೂ ಮರೆಮಾಚಲು ಸಾಧ್ಯವಿಲ್ಲ ಎಂದು ಹೇಳಿದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading