ಹೈದರಾಬಾದ್: ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ವಿರುದ್ಧ ಪ್ರಕರಣ ದಾಖಲು ಮಾಡುವುದಾಗಿ ಹೈದರಾಬಾದ್ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸಿನಿಮಾದ ಪ್ರೀಮಿಯರ್ ಶೋ ವೇಳೆಯಲ್ಲಿ ಯಾವುದೇ ಮಾಹಿತಿ ನೀಡದೇ ಅಲ್ಲು ಅರ್ಜುನ್ ಅವರು ಹೈದರಾಬಾದ್ ಥಿಯೇಟರ್ ಒಂದಕ್ಕೆ ಭೇಟಿ ನೀಡಿದ್ದರು.
ಈ ವೇಳೆ ಅಭಿಮಾನಿಗಳು ನೆಚ್ಚಿನ ನಟನನ್ನು ನೋಡಲು ಮುಗಿಬಿದ್ದರು. ಈ ವೇಳೆ ಕಾಲ್ತುಳಿತ ಉಂಟಾಗಿ ಓರ್ವ ಮಹಿಳೆ ಮೃತಪಟ್ಟಿದ್ದರು.
ಈ ಘಟನೆ ಸಂಬಂಧ ನಟ ಅಲ್ಲು ಅರ್ಜುನ್ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಹೈದರಾಬಾದ್ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಇದರ ಜೊತೆಗೆ ಹೆಚ್ಚುವರಿ ಭದ್ರತೆ ವ್ಯವಸ್ಥೆ ಮಾಡದ, ಜನದಟ್ಟಣೆ ನಿರ್ವಹಣೆಗೆ ಕ್ರಮ ಕೈಗೊಳ್ಳದ ಥಿಯೇಟರ್ನ ಆಡಳಿತ ಮಂಡಳಿತ ವಿರುದ್ಧವೂ ಪ್ರಕರಣ ದಾಖಲಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹೈದರಾಬಾದ್ ಪೊಲೀಸ್ ಕಮಿಷನರ್ ಸಿವಿ ಆನಂದ್ ಹೇಳಿಕೆ ನೀಡಿದ್ದು, ಥಿಯೇಟರ್ಗೆ ಭೇಟಿ ನೀಡುವ ಕುರಿತು ಥಿಯೇಟರ್ ಆಡಳಿತ ಅಥವಾ ನಟರ ತಂಡದಿಂದ ಯಾವುದೇ ಸೂಚನೆ ಬಂದಿಲ್ಲ ಎಂದು ತಿಳಿಸಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


