Thursday, November 5, 2026
spot_img
More
    spot_img
    HomeStateಕಾಂಗ್ರೆಸ್‌ನವರ ಒಳಜಗಳಗಳಿಂದ ಯಾವುದೇ ಕ್ಷಣದಲ್ಲಿ ವಿಧಾನಸಭೆ ಚುನಾವಣೆ ಬರಬಹುದು: ರೇಣುಕಾಚಾರ್ಯ

    ಕಾಂಗ್ರೆಸ್‌ನವರ ಒಳಜಗಳಗಳಿಂದ ಯಾವುದೇ ಕ್ಷಣದಲ್ಲಿ ವಿಧಾನಸಭೆ ಚುನಾವಣೆ ಬರಬಹುದು: ರೇಣುಕಾಚಾರ್ಯ

    ರಾಯಚೂರು: ಕಾಂಗ್ರೆಸ್‌ನವರ ಒಳಜಗಳಗಳಿಂದ ಯಾವುದೇ ಕ್ಷಣದಲ್ಲಿ ವಿಧಾನಸಭೆ ಚುನಾವಣೆ ಬರಬಹುದು ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಭವಿಷ್ಯ ನುಡಿದಿದ್ದಾರೆ.

    ಈ ಕುರಿತು ರಾಯಚೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿ.ವೈ.ವಿಜಯೇಂದ್ರ ಸಿಎಂ ಆಗಲು ಎಲ್ಲರ ಸಹಕಾರ ಬೇಕು ಎಂದರು.

    ರಾಯಚೂರಿನಲ್ಲಿ ಜನರನ್ನೇ ಪ್ರಶ್ನೆ ಮಾಡಿದ ರೇಣುಕಾಚಾರ್ಯ ಅವರು, ವಿಜಯೇಂದ್ರ ಸಿಎಂ ಆಗಬೇಕಾ ಬೇಡ್ವಾ? ಅಧ್ಯಕ್ಷರಾಗಿ ಮುಂದುವರೆಯಬೇಕಾ ಬೇಡ್ವಾ? ಎಂದರು. ಬಳಿಕ ಮಾತನಾಡಿದ ಅವರು, ವಿಜಯೇಂದ್ರ ಸಿಎಂ ಆಗಲು ನಿಮ್ಮೆಲ್ಲರ ಸಹಕಾರ ಮುಖ್ಯ. ಅದಕ್ಕಾಗಿ ನೀವೆಲ್ಲಾ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

    ಇನ್ನು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಸರ್ಕಾರ ಹಳ್ಳಿಗಳಿಗೆ ಬಸ್‌ ಬಿಟ್ಟಿಲ್ಲ. ಹೆಣ್ಣುಮಕ್ಕಳು ಬಸ್‌ನಲ್ಲಿ ಓಡಾಡಲು ತುಂಬಾ ಕಷ್ಟಪಡುತ್ತಿದ್ದಾರೆ. ಸರ್ಕಾರವೇ ಟೇಕ್‌ ಆಫ್‌ ಆಗಿಲ್ಲ. ರಾಜ್ಯದ ಜನರಿಗೆ ಟೋಪಿ ಹಾಕಿದ್ದಾರೆ. ಅಯೋಗ್ಯ ಜಮೀರ್‌ ಅಹಮ್ಮದ್‌ ಖಾನ್‌ಗೆ ನೀವೆಲ್ಲಾ ತಕ್ಕ ಉತ್ತರ ಕೊಡಬೇಕು ಎಂದು ಕಿಡಿಕಾರಿದರು.

    ಇನ್ನು ಮುಂದುವರಿದು ಮಾತನಾಡಿದ ಅವರು, ಮೈಸೂರು ಮುಡಾ ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಅವರು, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲೇಬೇಕು ಎಂದು ಆಗ್ರಹಿಸಿದರು. ಸೂರ್ಯ, ಚಂದ್ರ ಇರುವುದು ಎಷ್ಟು ಸತ್ಯವೋ, ಮುಡಾ ಹಗರಣದಲ್ಲಿ ಸಿಲುಕಿರುವ ಸಿದ್ದರಾಮಯ್ಯ ರಾಜೀನಾಮೆ ಕೊಡುವುದು ಅಷ್ಟೇ ಸತ್ಯ ಎಂದು ಭವಿಷ್ಯ ನುಡಿದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search