Sunday, November 8, 2026
spot_img
More
    spot_img
    HomeStateಅಧಿಕಾರ ಬಿಟ್ಟು ಕೊಡಿ ಎಂದು ಡಿಕೆಶಿ ತೊಡೆ ತಟ್ಟಿ ಹೊರಟಿದ್ದಾರೆ; ಬಿವೈ ವಿಜಯೇಂದ್ರ ಲೇವಡಿ

    ಅಧಿಕಾರ ಬಿಟ್ಟು ಕೊಡಿ ಎಂದು ಡಿಕೆಶಿ ತೊಡೆ ತಟ್ಟಿ ಹೊರಟಿದ್ದಾರೆ; ಬಿವೈ ವಿಜಯೇಂದ್ರ ಲೇವಡಿ

    ಯಾದಗಿರಿ: ಸಿದ್ದರಾಮಯ್ಯ ಅವರ ಸಿಎಂ ಅವಧಿ ಮುಗಿದಿದೆ. ಅಧಿಕಾರ ಬಿಟ್ಟು ಕೊಡಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತೊಡೆ ತಟ್ಟಿ ಹೊರಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಲೇವಡಿ ಮಾಡಿದ್ದಾರೆ.

    ಈ ಕುರಿತು ಯಾದಗಿರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷದಲ್ಲಿ ಬಡಿಗೆ ಹಿಡಿದುಕೊಂಡು ಹೊಡೆದಾಡಿಕೊಳ್ಳುತ್ತಾರೆ. ಹಿರಿಯ ನಾಯಕರು ಒಳಗೊಂಡಂತೆ ಶಾಸಕರುಗಳು ಬಡಿಗೆ ತೆಗೆದುಕೊಂಡು ರಸ್ತೆಯಲ್ಲಿ ಹೊಡೆದಾಡಿಕೊಳ್ಳುತ್ತಿದ್ದಾರೆ. ಅಂತಹ ಪರಿಸ್ಥಿತಿ ಈಗ ಕಾಂಗ್ರೆಸ್‌ನಲ್ಲಿ ನಿರ್ಮಾಣ ಆಗಿದೆ. ಸಿಎಂ ಅವರು ತಮ್ಮ ಸ್ಥಾನ ತ್ಯಜಿಸಬೇಕು. ತಾನೇ ಸಿಎಂ ಆಗಬೇಕೆಂದು ಡಿಕೆಶಿ ಹೋರಾಟ ಪ್ರಾರಂಭ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಯಾವ ಮಟ್ಟಕ್ಕೆ ಹೋಗುತ್ತದೆ ಇದನ್ನು ಊಹಿಸಿಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ ಎಂದು ಭವಿಷ್ಯ ನುಡಿದರು.

    ಇನ್ನು ಹಾಸನದಲ್ಲಿ ನಡೆದ ಕಾಂಗ್ರೆಸ್‌ ಸಮಾವೇಶದ ಬಗ್ಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು ತಮ್ಮ ಕುರ್ಷಿ ಉಳಿಸಿಕೊಳ್ಳಲು ಸಮಾವೇಶ ಮಾಡುತ್ತಿದ್ದಾರೆ. ಡಿಕೆಶಿ ಅವರನ್ನು ಬದಿಗಿಟ್ಟು ಶಕ್ತಿ ಪ್ರದರ್ಶನ ಮಾಡಿದ್ದಾರೆ. ಡಿಕೆಶಿ ಅವರು ಕೋಟೆಗೆ ನುಗ್ಗಿ ಸಮಾವೇಶದಲ್ಲಿ ಭಾಗಿಯಾಗಿದ್ದಾರೆ. ಬರುವ ದಿನಗಳಲ್ಲಿ ಕಾಂಗ್ರೆಸ್‌ನಲ್ಲಿ ಯಾವ ರೀತಿ ಬದಲಾವಣೆ ಆಗುತ್ತದೆ ನೋಡಿ, ಸಿದ್ದರಾಮಯ್ಯ ಸಿಎಂ ಅವಧಿ ಮುಗಿದಿದೆ ಅಧಿಕಾರ ಬಿಟ್ಟು ಕೊಡಿ ಎಂದು ಡಿ.ಕೆ.ಶಿವಕುಮಾರ್‌ ಅವರು ತೊಡೆ ತಟ್ಟಿಕೊಂಡು ಹೊರಟಿದ್ದಾರೆ ಎಂದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search