ಶಿವಮೊಗ್ಗ: ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಯಲ್ಲಿ ಈಶ್ವರಪ್ಪ ವಿರುದ್ಧ ಸ್ವಯಂ ಪ್ರೇರಿತ ಕೇಸು ದಾಖಲಾಗಿದೆ.
ಬಾಂಗ್ಲಾದೇಶದಲ್ಲಿ ಚಿನ್ಮಯಿ ಕೃಷ್ಣದಾಸ್ ಬಂಧನ ಖಂಡಿಸಿ ಶಿವಮೊಗ್ಗದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರು ದ್ವೇಷ ಭಾಷಣ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಈ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ.
ಶಿವಮೊಗ್ಗದ ಮಥುರಾ ಪ್ಯಾರಡೈಸ್ ಮುಂಭಾಗ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಈಶ್ವರಪ್ಪ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಅವರು ಅನ್ಯ ಧರ್ಮದ ವಿರುದ್ಧ ಕೋಮು ಭಾವನೆ ಕೆರಳಿಸುವ ಹಾಗೂ ದ್ವೇಷದ ಭಾವನೆ ಮೂಡಿಸುವ ಭಾಷಣ ಮಾಡಿದ್ದಾರೆ ಎಂದು ಪ್ರಕರಣ ದಾಖಲಿಸಲಾಗಿದೆ.
20 ದಿನಗಳ ಹಿಂದೆ ಮಾಜಿ ಡಿಸಿಎಂ ಈಶ್ವರಪ್ಪ ವಿರುದ್ಧ ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಕೇಸು ದಾಖಲಾಗಿತ್ತು.
ಈಗ ಈಶ್ವರಪ್ಪ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದ್ದು, ಈಶ್ವರಪ್ಪಗೆ ಮತ್ತೊಂದು ಸಂಕಷ್ಟ ಎದುರಾಗಿದೆ ಎನ್ನಲಾಗಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


