ಬೆಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕರ್ನಾಟಕ ಸೇರಿದಂತೆ ತಮಿಳುನಾಡಿನ 16 ಕಡೆ ಇಂದು ಎನ್‌ಐಎ ದಾಳಿ ನಡೆಸಿತ್ತು. ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳು, ಶಂಕಾಸ್ಪದ ವ್ಯಕ್ತಿಗಳು, ಆರೋಪಿಗಳ ಸಹಚರರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ನಡೆದಿದ್ದ ದಾಳಿಯಲ್ಲಿ ಕೆಲವು ಡಿಜಿಟಲ್ ಡಿವೈಸ್, ದಾಖಲೆಗಳನ್ನು ಜಪ್ತಿ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
2022ರ ಜುಲೈ.22ರಂದು ದುಷ್ಕರ್ಮಿಗಳು ಪ್ರವೀಣ್ ನೆಟ್ಟಾರು ಹತ್ಯೆಗೈದಿದ್ದರು. ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಈವರೆಗೆ 19 ಜನರನ್ನು ಬಂಧಿಸಲಾಗಿದೆ. ಒಟ್ಟು 23 ಜನರ ವಿರುದ್ಧ ಎನ್‌ಐಎ ಅಧಿಕಾರಿಗಳ ತಂಡ ಚಾರ್ಜ್‌ಶೀಟ್ ಸಲ್ಲಿಸಿದೆ. ತಲೆಮರೆಸಿಕೊಂಡಿರುವ ಆರೋಪಿಗಳಿಗೆ ಎನ್‌ಐಎ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಹೊರಡಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಬೆಳ್ಳಾರೆಯ ಸಿದ್ದೀಕ್, ನಾಪತ್ತೆಯಾಗಿರುವ ಮೂವರು ಆರೋಪಿಗಳಲ್ಲಿ ಓರ್ವನಾದ ಅಬೂಬಕ್ಕರ್ ಸಿದ್ಧೀಕ್ ಪತ್ನಿ ಸಹೋದರ ಉಮ್ಮರ್ ಮನೆ ಮೇಲೆ ಕೂಡ ಬೆಂಗಳೂರಿನಿಂದ ಎನ್‌ಐಎ ಅಧಿಕಾರಿಗಳ ತಂಡ ದಾಳಿ ಮಾಡಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


