Saturday, November 7, 2026
spot_img
More
    spot_img
    HomeBreaking Newsಮೆಟ್ರೋ ನಿಲ್ದಾಣದಲ್ಲಿ ರೈಲಿಗೆ ತಲೆಕೊಟ್ಟ ವ್ಯಕ್ತಿ: ನೇರಳೆ ಮಾರ್ಗದ ಮೆಟ್ರೋ ಸಂಚಾರ ವ್ಯತ್ಯಯ

    ಮೆಟ್ರೋ ನಿಲ್ದಾಣದಲ್ಲಿ ರೈಲಿಗೆ ತಲೆಕೊಟ್ಟ ವ್ಯಕ್ತಿ: ನೇರಳೆ ಮಾರ್ಗದ ಮೆಟ್ರೋ ಸಂಚಾರ ವ್ಯತ್ಯಯ

    ನಮ್ಮ ಮೆಟ್ರೋ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ಹಳಿಯ ಮೇಲೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನ ನಡೆಸಿದ್ದಾನೆ. ಇದರಿಂದಾಗಿ ನಮ್ಮ ಮೆಟ್ರೋ ನೇರಳೆ ಮಾರ್ಗದ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.

    ನೇರಳೆ ಮಾರ್ಗದ ಅಪ್‌ಡೇಟ್: ನಮ್ಮ ಮೆಟ್ರೋ ನೇರಳೆ ಮಾರ್ಗದ ರೈಲು ಸಂಚಾರದ ಸಮಸ್ಯೆ ಬಗೆಹರಿಸಲಾಗಿದೆ. 9.40 ರಿಂದ ರೈಲುಗಳು ಚಲ್ಲಘಟ್ಟದಿಂದ ವೈಟ್‌ಫೀಲ್ಡ್‌ ತನಕ ಸಂಚಾರವನ್ನು ನಡೆಸುತ್ತಿವೆ ಎಂದು ಬಿಎಂಆರ್‌ಸಿಎಲ್ ಹೇಳಿದೆ.

    ಇಂದು ಬೆಳಗ್ಗೆ 8.15ರ ಸುಮಾರಿಗೆ ನಮ್ಮ ಮೆಟ್ರೋ ನೇರಳೆ ಮಾರ್ಗದ ಕೆಂಗೇರಿ ರೈಲು ನಿಲ್ದಾಣದಲ್ಲಿ ವ್ಯಕ್ತಿ ಹಳಿಯ ಮೇಲೆ ಹಾರಿ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದಾನೆ. ಸದ್ಯದ ಮಾಹಿತಿ ಪ್ರಕಾರ ವ್ಯಕ್ತಿ ಸಾವನ್ನಪ್ಪಿದ್ದು, ಗುರುತು ಪತ್ತೆಯಾಗಿಲ್ಲ.

    ಇದರಿಂದಾಗಿ ನಮ್ಮ ಮೆಟ್ರೋ ನೇರಳೆ ಮಾರ್ಗದ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಈ ಕುರಿತು ಬಿಎಂಆರ್‌ಸಿಎಲ್ ಸಹ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದು, ‘ನೇರಳೆ ಮಾರ್ಗದ ಮೆಟ್ರೋ ರೈಲುಗಳು ಪ್ರಸ್ತುತ ಮೈಸೂರು ರಸ್ತೆ ನಿಲ್ದಾಣದವರೆಗೆ ಮಾತ್ರ ಸಂಚರಿಸುತ್ತಿವೆ. ಮೈಸೂರು ರಸ್ತೆ ಮತ್ತು ಚಾಲಘಟ್ಟ ನಡುವಿನ ಸೇವೆಗಳು ಕೆಂಗೇರಿ ನಿಲ್ದಾಣದಲ್ಲಿ ಸಂಭವಿಸಿದ ಆತ್ಮಹತ್ಯೆ ಪ್ರಯತ್ನದ ಕಾರಣ ತಾತ್ಕಾಲಿಕವಾಗಿ ಸ್ಥಗಿತಗೊಂಡಿವೆ. ಪ್ರಯಾಣಿಕರಿಗೆ ಉಂಟಾದ ತೊಂದರೆಗೆ ವಿಷಾದ ವ್ಯಕ್ತಪಡಿಸುತ್ತೇವೆ’ ಎಂದು ಹೇಳಿದೆ.

    ನಮ್ಮ ಮೆಟ್ರೋ ನೇರಳೆ ಮಾರ್ಗ ಚಲ್ಲಘಟ್ಟ-ವೈಟ್‌ಫೀಲ್ಡ್ ನಡುವೆ ಸಂಪರ್ಕವನ್ನು ಕಲ್ಪಿಸುತ್ತದೆ. ಆದರೆ ಈಗ ರೈಲುಗಳು ವೈಟ್‌ಫೀಲ್ಡ್‌ ಮತ್ತು ಮೈಸೂರು ರಸ್ತೆ ನಿಲ್ದಾಣದ ತನಕ ಮಾತ್ರ ಓಡುತ್ತಿವೆ.

    ಮೈಸೂರು ರಸ್ತೆ ನಿಲ್ದಾಣದಿಂದ ಚಲ್ಲಘಟ್ಟ ತನಕ ನಮ್ಮ ಮೆಟ್ರೋ ರೈಲು ಸೇವೆಯನ್ನು ಸದ್ಯಕ್ಕೆ ಸ್ಥಗಿತಗೊಳಿಸಲಾಗಿದೆ. ರೈಲು ಸಂಚಾರ ಪುನಃ ಆರಂಭವಾದ ಬಳಿಕ ಮಾಹಿತಿ ನೀಡಲಾಗುತ್ತದೆ ಎಂದು ಬಿಎಂಆರ್‌ಸಿಎಲ್ ಹೇಳಿದೆ.

    ವ್ಯಕ್ತಿಯ ತಲೆ ನಮ್ಮ ಮೆಟ್ರೋ ರೈಲಿಗೆ ಸಿಲುಕಿದ್ದು ಆತ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆಯನ್ನು ನಡೆಸುತ್ತಿದ್ದಾರೆ. ವ್ಯಕ್ತಿಯ ಮೃತದೇಹ ಇನ್ನೂ ನಿಲ್ದಾಣದಲ್ಲಿಯೇ ಇದ್ದು, ಪೊಲೀಸರು ಗುರುತು ಪತ್ತೆ ಹಚ್ಚುವ ಕೆಲಸವನ್ನು ಮಾಡುತ್ತಿದ್ದಾರೆ.

    ನಮ್ಮ ಮೆಟ್ರೋ ನಿಲ್ದಾಣದಲ್ಲಿ ಹಳಿಯ ಸಮೀಪ ಜನರು ಬರುವುದನ್ನು ತಡೆಯಲು ಭದ್ರತಾ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಅಲ್ಲದೇ ಸಿಸಿಟಿವಿ ಕಣ್ಗಾವಲು ಇದೆ. ಆದರೂ ಸಹ ವ್ಯಕ್ತಿ ಹೇಗೆ ರೈಲು ಬರುವ ಸಮಯಕ್ಕೆ ಸರಿಯಾಗಿ ಹಳಿಗೆ ಜಿಗಿದ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    ನಮ್ಮ ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವುದು, ಆತ್ಮಹತ್ಯೆಗೆ ಪ್ರಯತ್ನ ನಡೆಸುವ ಮೊದಲ ಪ್ರಕರಣ ಇದಲ್ಲ. ಬಿಎಂಆರ್‌ಸಿಎಲ್ ಅಧಿಕಾರಿಗಳು ಇದನ್ನು ತಡೆಯಲು ಇನ್ನಷ್ಟು ಕ್ರಮಗಳನ್ನು ಕೈಗೊಳ್ಳಬೇಕು ಎಂಬುದು ಮತ್ತೆ ಸಾಬೀತಾಗಿದೆ.

    ಬೆಂಗಳೂರು ನಗರದಲ್ಲಿ ನೇರಳೆ, ಹಸಿರು ಮತ್ತು ಹಳದಿ ಮಾರ್ಗದಲ್ಲಿ ನಮ್ಮ ಮೆಟ್ರೋ ರೈಲುಗಳು ಸಂಚಾರವನ್ನು ನಡೆಸುತ್ತವೆ. ಸದ್ಯ ನೇರಳೆ ಮಾರ್ಗದಲ್ಲಿ ಕೆಲವು ನಿಲ್ದಾಣಗಳ ನಡುವೆ ಮಾತ್ರ ಸಂಚಾರ ವ್ಯತ್ಯಯವಾಗಿದೆ. ಹಸಿರು ಮತ್ತು ಹಳದಿ ಮಾರ್ಗದಲ್ಲಿ ಎಂದಿನಂತೆ ರೈಲುಗಳು ಸಂಚಾರವನ್ನು ನಡೆಸುತ್ತಿವೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search