Wednesday, November 4, 2026
spot_img
More
    spot_img
    HomeLatest newsಡಿ.ಕೆ.ಶಿವಕುಮಾರ್, ಸತೀಶ್ ಜಾರಕಿಹೊಳಿ ಭೇಟಿ: ಅಧ್ಯಕ್ಷರಾಗೋದು ಖಚಿತ ಆಯ್ತಾ?

    ಡಿ.ಕೆ.ಶಿವಕುಮಾರ್, ಸತೀಶ್ ಜಾರಕಿಹೊಳಿ ಭೇಟಿ: ಅಧ್ಯಕ್ಷರಾಗೋದು ಖಚಿತ ಆಯ್ತಾ?

    ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಿಟ್ಟು ಕೊಡಲು ತಯಾರಾಗಿದ್ದಾರೆ. ಕೆಪಿಸಿಸಿ ಸಾರಥ್ಯ ಯಾರಿಗೆ ಸಿಗಲಿದೆ? ಎನ್ನುವ ಕುತೂಹಲದ ನಡುವೆಯೇ ಸತೀಶ್ ಜಾರಕಿಹೊಳಿಯನ್ನು ಡಿ.ಕೆ.ಶಿವಕುಮಾರ್ ಭೇಟಿಯಾಗಿದ್ದಾರೆ.

    ಕಳೆದ ವಾರ ಡಿ.ಕೆ.ಶಿವಕುಮಾರ್ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ್ದರು. ಗುರುವಾರ ರಾತ್ರಿ ಖಾಸಗಿ ಸ್ಥಳದಲ್ಲಿ ಡಿ.ಕೆ.ಶಿವಕುಮಾರ್ ಮತ್ತು ಸತೀಶ್ ಜಾರಕಿಹೊಳಿ ಮತ್ತೆ ಭೇಟಿಯಾಗಿದ್ದಾರೆ.

    ಅಲ್ಲದೇ ಕೋಲಾರ ಜಿಲ್ಲೆಯ ಕೆಲವು ಹಲವು ಮುಖಂಡರು ಸತೀಶ್ ಜಾರಕಿಹೊಳಿ ಭೇಟಿ ಮಾಡಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ. ಮಾಲೂರು ಕ್ಷೇತ್ರದ ಹಲವು ಮುಖಂಡರು ಶಾಸಕ ಕೆ. ವೈ.‌ನಂಜೇಗೌಡ ನೇತೃತ್ವದಲ್ಲಿ ಸತೀಶ್ ಜಾರಕಿಹೊಳಿ ಭೇಟಿಯಾಗಿ ಅವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರಿದ್ದಾರೆ.

    ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷರು ಅಲ್ಲ, ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರೂ ಅಲ್ಲ. ಆದರೆ ಏಕೆ ಅವರ ಸಮ್ಮುಖದಲ್ಲಿ ಪಕ್ಷ ಸೇರಿದ್ದಾರೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಇದು ಕೆಪಿಸಿಸಿ ಅಧ್ಯಕ್ಷ ಪಟ್ಟ ಸತೀಶ್ ಜಾರಕಿಹೊಳಿ ಅವರಿಗೆ ಸಿಗಲಿದೆ? ಎಂಬ ಚರ್ಚೆಯನ್ನು ಹುಟ್ಟಿಹಾಕಿದೆ.

    ಸಚಿತ ಸತೀಶ್ ಜಾರಕಿಹೊಳಿ, ‘ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದ ಮುಖಂಡರಾದ ಶ್ರೀ ಎನ್. ವೆಂಕಟರಾಮ್ ಅವರೊಂದಿಗೆ ಹಲವು ಪ್ರಮುಖರು ಇಂದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು. ಬೆಂಗಳೂರು ಗೃಹಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರನ್ನು ಶಾಸಕರಾದ ಶ್ರೀ ಕೆ. ವೈ.‌ನಂಜೇಗೌಡ ಅವರ ಜೊತೆಗೂಡಿ ಆತ್ಮೀಯವಾಗಿ ಸ್ವಾಗತಿಸಿ, ಅಭಿನಂದನೆ ಸಲ್ಲಿಸಲಾಯಿತು. ಈ ಸೇರ್ಪಡೆ ಮಾಲೂರು ತಾಲೂಕಿನಲ್ಲಿ ಪಕ್ಷದ ಶಕ್ತಿ ಮತ್ತು ಸಂಘಟನೆಯ ಬಲವರ್ಧನೆಗೆ ಮತ್ತಷ್ಟು ಹೊಸ ಉತ್ಸಾಹ ತುಂಬಲಿದೆ’ ಎಂದು ಪೋಸ್ಟ್ ಹಾಕಿದ್ದಾರೆ.

    ಹಲವಾರು ಚರ್ಚೆ ನಡೆದಿದೆ ಎಂದ ಡಿಕೆಶಿ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾಗಿದ್ದು ನಿಜ ಎಂದು ಡಿ.ಕೆ.ಶಿವಕುಮಾರ್ ಶುಕ್ರವಾರ ಹೇಳಿದ್ದಾರೆ. ಶುಕ್ರವಾರ ಬೆಳಗ್ಗೆ ಸದಾಶಿವನಗರದ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಸಚಿವ ಪ್ರಿಯಾಂಕ್ ಖರ್ಗೆ, ಡಿ.ಕೆ.ಸುರೇಶ್ ಆಗಮಿಸಿ ಸುಮಾರು 1 ತಾಸು ಚರ್ಚೆ ನಡೆಸಿದ್ದಾರೆ. ಈ ಬೆಳವಣಿಗೆಗಳು ಕುತೂಹಲಕ್ಕೆ ಕಾರಣವಾಗಿದೆ.

    ಸತೀಶ್ ಜಾರಕಿಹೊಳಿ ಭೇಟಿ ಕುರಿತು ಮಾತನಾಡಿದ ಡಿ.ಕೆ.ಶಿವಕುಮಾರ್, ‘ನಾನು ಸತೀಶ್ ರಾತ್ರಿ ಸೇರಿದ್ದು ನಿಜ. ಯಾವುದೋ ಮದುವೆಯಲ್ಲಿ ಸೇರಿಕೊಂಡು ರಾಜ್ಯದ, ಪಕ್ಷದ ವಿಚಾರ ಮಾತಾಡಿಕೊಂಡಿದ್ದೇವೆ. ನಾವೆಲ್ಲ ಕೊಲೀಗ್‌ಗಳು, ವೈರಿಗಳ ತರಹ ಲೆಕ್ಕ ಹಾಕುತ್ತೀರಿ ನೀವು?. ಏನು ಕುತೂಹಲ ಇಲ್ಲ. ರಾಜಕಾರಣದಲ್ಲಿ ಬಾಂಧವ್ಯ, ನೆಂಟಸ್ತನ, ಸ್ನೇಹ ಎಲ್ಲಾ ಇದ್ದೇ ಇರುತ್ತದೆ” ಎಂದು ತಿಳಿಸಿದರು.

    “ನಾನು ಸತೀಶ್ ಭೇಟಿ ಆಗಿದ್ದು ನಿಜ. ಕ್ಯಾಬಿನೆಟ್‌ನಲ್ಲಿ ಇರ್ತೀವಿ, ರಾತ್ರಿ ಊಟಕ್ಕೆ ಸೇರ್ತೀವಿ, ಬೆಳಗ್ಗೆ ತಿಂಡಿಗೆ ಸೇರ್ತೀವಿ ಇದೆಲ್ಲ ಇದ್ದೇ ಇರುತ್ತದೆ. ನಾನು ಎಂ.ಬಿ.ಪಾಟೀಲ್ ಒಂದು ಗಂಟೆ ಚರ್ಚೆ ಮಾಡಿದ್ದೇವೆ. ಅದೇ ರೀತಿ ಸತೀಶ್ ಜಾರಕಿಹೊಳಿ ಭೇಟಿಯಾಗಿ ಮಾತಾಡಿದ್ದೇನೆ” ಎಂದು  ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

    2023ರಲ್ಲಿ ದೆಹಲಿಯಲ್ಲಿ ಮುಖ್ಯಮಂತ್ರಿ ಆಯ್ಕೆ ಸಂದರ್ಭದಲ್ಲಿ ಹೈಕಮಾಂಡ್ ನಾಯಕರು ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಮುಂದುವರೆಯಬೇಕು ಎಂದು ಸೂಚನೆ ನೀಡಿತ್ತು. ಆದರೆ 2024ರ ಲೋಕಸಭೆ ಚುನಾವಣೆ ಬಳಿಕ ಅಧ್ಯಕ್ಷರನ್ನು ಬದಲಾವಣೆ ಮಾಡಬಹುದು ಎಂದು ಅಂದಾಜಿಸಲಾಗಿತ್ತು.

    ಆದರೆ ಲೋಕಸಭೆ ಚುನಾವಣೆ ಬಳಿಕವೂ ಡಿ.ಕೆ.ಶಿವಕುಮಾರ್ ಅಧ್ಯಕ್ಷರಾಗಿ ಮುಂದುವರೆದಿದ್ದಾರೆ. ಸಿದ್ದರಾಮಯ್ಯ ಆಪ್ತರು ಸಹ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಾಡಬೇಕು ಎಂದು ಹೈಕಮಾಂಡ್ ಮುಂದೆ ಬೇಡಿಕೆ ಇಟ್ಟಿದ್ದರು. ಕೆಪಿಸಿಸಿ ಅಧ್ಯಕ್ಷ ಪಟ್ಟಕ್ಕೆ ಪ್ರಬಲವಾಗಿ ಕೇಳಿ ಬರುತ್ತಿರುವ ಹೆಸರು ಸತೀಶ್ ಜಾರಕಿಹೊಳಿ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search