Sunday, November 1, 2026
spot_img
More
    spot_img
    HomeLatest newsದೇಶದಾದ್ಯಂತ ಮಾಂಸಹಾರ ಬ್ಯಾನ್‌ ಮಾಡಬೇಕು; ವಿವಾದಾತ್ಮಕ ಹೇಳಿಕೆ ನೀಡಿ ಕೆಂಗಣ್ಣಿಗೆ ಕುರಿಯಾದ ಶತ್ರುಘ್ನ ಸಿನ್ಹಾ

    ದೇಶದಾದ್ಯಂತ ಮಾಂಸಹಾರ ಬ್ಯಾನ್‌ ಮಾಡಬೇಕು; ವಿವಾದಾತ್ಮಕ ಹೇಳಿಕೆ ನೀಡಿ ಕೆಂಗಣ್ಣಿಗೆ ಕುರಿಯಾದ ಶತ್ರುಘ್ನ ಸಿನ್ಹಾ

    ನವದೆಹಲಿ: ದೇಶದಾದ್ಯಂತ ಮಾಂಸಾಹಾರ ಬ್ಯಾನ್ ಮಾಡಬೇಕು ಎಂಬ ಶತ್ರುಘ್ನ ಸಿನ್ಹಾ ಹೇಳಿಕೆ ನೀಡುವ ಮೂಲಕ ಮಾಂಸಾಹಾರಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.


    ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುನಿಫಾರ್ಮ್ ಸಿವಿಲ್ ಕೋಡ್) ಜಾರಿಗೆ ಬಂದ ಬಗ್ಗೆ ಮಾತನಾಡುವ ಸಂದರ್ಭದಲ್ಲಿ ದೇಶಾದ್ಯಂತ ಮಾಂಸಾಹಾರವನ್ನು ಬ್ಯಾನ್ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ಅವರ ಹೇಳಿಕೆ ಈಗ ಸಾಕಷ್ಟು ಟೀಕೆಗಳಿಗೆ ಗುರಿಯಾಗಿದೆ.


    ಉತ್ತರಾಖಂಡ ಸರ್ಕಾರ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತಂದ ಬಗ್ಗೆ ಶತ್ರುಘ್ನ ಸಿನ್ಹಾಗೆ ಪ್ರಶ್ನೆ ಮಾಡಲಾಯಿತು. ಈ ವೇಳೆ ಅವರು ಪ್ರತಿಕ್ರಿಯೆ ನೀಡಿದ್ದಾರೆ.

    ಯುಸಿಸಿಯನ್ನು ಉತ್ತರಾಖಂಡದಲ್ಲಿ ಪ್ರಾಥಮಿಕ ಹಂತದಲ್ಲಿ ಜಾರಿಗೆ ತಂದಿದ್ದು ಖುಷಿ ಇದೆ. ಇದು ದೇಶದಾದ್ಯಂತ ಬರಬೇಕು ಎಂಬುದು ನನ್ನ ಆಗ್ರಹ ಎಂದು ಅವರು ಹೇಳಿದ್ದಾರೆ.


    ಏಕರೂಪ ನಾಗರಿಕ ಸಂಹಿತೆಯಲ್ಲಿ ಹಲವು ಸೂಕ್ಷ್ಮ ವಿಚಾರ ಮತ್ತು ಲೋಪದೋಷಗಳಿವೆ. ಕೇವಲ ಗೋಮಾಂಸವಲ್ಲ, ಒಟ್ಟಾರೆಯಾಗಿ ಮಾಂಸಾಹಾರವನ್ನೇ ದೇಶದಲ್ಲಿ ನಿಷೇಧಿಸಬೇಕು. ಆದರೆ ಉತ್ತರ ಭಾರತದಲ್ಲಿ ಹೇರಬಹುದಾದ ನಿಯಮಗಳನ್ನು ಈಶಾನ್ಯ ರಾಜ್ಯಗಳಲ್ಲಿ ಹೇರಲು ಸಾಧ್ಯವಿಲ್ಲ. ಯುಸಿಸಿ ನಿಬಂಧನೆಗಳನ್ನು ರಚಿಸುವ ಮೊದಲು ಸರ್ವಪಕ್ಷ ಸಭೆ ನಡೆಸಬೇಕು ಎಂದು ಅವರು ಹೇಳಿದ್ದಾರೆ.


    ಶತ್ರುಘ್ನ ಅವರ ಹೇಳಿಕೆ ಚರ್ಚೆಗೆ ಕಾರಣ ಆಗಿದೆ. ಯುಸಿಸಿಯಲ್ಲಿ ಯಾವ ಆಹಾರ ತಿನ್ನಬೇಕು, ಯಾವುದನ್ನು ತಿನ್ನಬಾರದು ಎಂಬುದನ್ನು ಹೇಳುತ್ತಾರಾ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ. ಯುಸಿಸಿ ಆಹಾರ ಮತ್ತು ಅಭ್ಯಾಸಗಳ ಬಗ್ಗೆ ಇಲ್ಲ. ಇದು ಮದುವೆ ಮತ್ತು ಆಸ್ತಿಗಳ ಹಕ್ಕಿನ ಬಗ್ಗೆ ಇರುವ ಕಾಯ್ದೆ ಎಂದು ಕೆಲವರು ತಿರುಗೇಟು ನೀಡಿದ್ಧಾರೆ.


    ಈ ವಿಚಾರದಲ್ಲಿ ಶತ್ರುಘ್ನ ಸಿನ್ಹಾ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ಮೊದಲು ಶತ್ರುಘ್ನ ಸಿನ್ಹಾ ಮಗಳು ಸೋನಾಕ್ಷಿ ಸಿನ್ಹಾ ಜಹೀರ್ ಇಕ್ಬಾಲ್‍ನ ವಿವಾಹ ಆದಾಗ ಸಾಕಷ್ಟು ಚರ್ಚೆಗಳು ನಡೆದಿದ್ದವು. ಈ ಮದುವೆಗೆ ಶತ್ರುಘ್ನ ಅವರ ಒಪ್ಪಿಗೆ ಇಲ್ಲ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ, ಅವರು ಒಪ್ಪಿ ವಿವಾಹ ಮಾಡಿಕೊಟ್ಟರು. ಈ ಬಗ್ಗೆ ಟೀಕೆ ಮಾಡಿದವರ ವಿರುದ್ಧ ಶತ್ರುಘ್ನ ಸಿನ್ಹಾ ಕಿಡಿಕಾರಿದ್ದರು


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search