Wednesday, November 4, 2026
spot_img
More
    spot_img
    HomeChampions Trophy 202567 ಎಸೆತಗಳಲ್ಲಿ ಶತಕ ಬಾರಿಸಿದರೂ ಸೋತ ದಕ್ಷಿಣ ಆಫ್ರಿಕಾ; ಮೈದಾನದಲ್ಲೇ ಕಣ್ಣೀರಿಟ್ಟ ಮಿಲ್ಲರ್

    67 ಎಸೆತಗಳಲ್ಲಿ ಶತಕ ಬಾರಿಸಿದರೂ ಸೋತ ದಕ್ಷಿಣ ಆಫ್ರಿಕಾ; ಮೈದಾನದಲ್ಲೇ ಕಣ್ಣೀರಿಟ್ಟ ಮಿಲ್ಲರ್

    ಲಾಹೋರ್: ನಿನ್ನೆ ( ಮಾರ್ಚ್ 5 ) ಗಡ್ಡಾಫಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ದಕ್ಷಿಣ ಆಫ್ರಿಕಾ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವೆ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ 50 ರನ್‌ಗಳ ಗೆಲುವು ಸಾಧಿಸಿ ಫೈನಲ್ ಪ್ರವೇಶಿಸಿದೆ.

    ಭಾನುವಾರ ( ಮಾರ್ಚ್ 9 ) ದುಬೈನಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಕಿವೀಸ್ ಭಾರತದ ವಿರುದ್ಧ ಟ್ರೋಫಿಗಾಗಿ ಅಂತಿಮ ಸೆಣಸಾಟ ನಡೆಸಲಿದೆ.

    ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 50 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 362 ರನ್ ಕಲೆಹಾಕಿ ದಕ್ಷಿಣ ಆಫ್ರಿಕಾಗೆ 363 ರನ್‌ಗಳ ಕಠಿಣ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾದ ದಕ್ಷಿಣ ಆಫ್ರಿಕಾ 50 ಓವರ್‌ಗಳಲ್ಲಿ 9 ವಿಕೆಟ್ 312 ರನ್ ಕಲೆಹಾಕಿತು.

    ಇನ್ನು ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಸೋತರೆ ಡೇವಿಡ್ ಮಿಲ್ಲರ್ ಎಲ್ಲರ ಮನ ಗೆದ್ದಿದ್ದಾರೆ. ಒಂದೆಡೆ ತಂಡದ ವಿಕೆಟ್‌ಗಳು ಸಾಲು ಸಾಲಾಗಿ ಉರುಳುತ್ತಿದ್ದರೆ ಮತ್ತೊಂದೆಡೆ ಏಕಾಂಗಿ ಹೋರಾಟ ನಡೆಸಿದ ಮಿಲ್ಲರ್ ತಂಡವನ್ನು ಗೆಲ್ಲಿಸಲಾಗದ ಹತಾಶೆಯಲ್ಲಿ ಕಣ್ಣೀರಿಡುತ್ತಾ ಮೈದಾನದಿಂದ ಹೊರನಡೆದಿದ್ದಾರೆ. ಕಳೆದ ಏಕದಿನ ವಿಶ್ವಕಪ್‌ನ ಸೆಮಿಫೈನಲ್ ಪಂದ್ಯದಲ್ಲೂ ಸಹ ಇದೇ ರೀತಿ ಶತಕ ಬಾರಿಸಿ ತಂಡ ಸೋತಿದ್ದಾಗ ಮಿಲ್ಲರ್ ಕಣ್ಣೀರು ಹಾಕಿದ್ದರು.

    67 ಎಸೆತಗಳಲ್ಲಿ 10 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ ಅಜೇಯ 100 ರನ್ ಬಾರಿಸಿದ ಮಿಲ್ಲರ್ ಸದ್ಯ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಉತ್ತಮ ಬ್ಯಾಟಿಂಗ್ ಕಾರಣಕ್ಕಾಗಿ ಟ್ರೆಂಡ್ ಆಗುತ್ತಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search