ಥಾಣೆ: ಚಿಕಿತ್ಸೆ ಕೊಡಿಸುವ ನೆಪದಲ್ಲಿ ವ್ಯಕ್ತಿಯೊಬ್ಬ 13 ವರ್ಷದ ಕ್ಯಾನ್ಸರ್ ರೋಗಿ ಮೇಲೆ ಅತ್ಯಾಚಾರ ನಡೆಸಿ, ಗರ್ಭಿಣಿ ಮಾಡಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ.
ಕ್ಯಾನ್ಸರ್ ಚಿಕಿತ್ಸೆಗೆಂದು ಮಹಾರಾಷ್ಟ್ರಕ್ಕೆ ಬಂದಿದ್ದ ಬಿಹಾರದ ಬಾಲಕಿ ಮೇಲೆ ಬಿಹಾರದವನೇ ಆದ ಆರೋಪಿ ಅತ್ಯಾಚಾರ ನಡೆಸಿದ್ದಾನೆ ಎಂದು ವರದಿಯಾಗಿದ್ದು, ಕಾಮುಕನನ್ನು ಬಿಹಾರದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕಿಗೆ ನೆರವು ನೀಡುವ ನೆಪದಲ್ಲಿ ಆಕೆ ಮನೆಯಲ್ಲಿ ಒಬ್ಬಂಟಿಯಾಗಿದ್ದಾಗ ಆ ವ್ಯಕ್ತಿ ಆಕೆಯ ಮೇಲೆ ಮೂರು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಮುಂಬೈ ಆಸ್ಪತ್ರೆಯಲ್ಲಿ, ಅಪ್ರಾಪ್ತ ಬಾಲಕಿಯೊಬ್ಬಳು ಕಿಮೊಥೆರಪಿ ಪಡೆಯುತ್ತಿದ್ದಾಗ ನಿಯಮಿತ ತಪಾಸಣೆಯ ಸಮಯದಲ್ಲಿ ಅವಳು ಗರ್ಭಿಣಿಯಾಗಿರುವುದು ಪತ್ತೆಯಾಗಿದೆ.ಆರೋಪಿ ಸಂತ್ರಸ್ತೆಯ ಕುಟುಂಬಕ್ಕೆ ಸಹಾಯ ಮಾಡಿದ್ದ, ಈ ಸಮಯದಲ್ಲಿ, ಅವನು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಗರ್ಭ ಧರಿಸುವಂತೆ ಮಾಡಿದ್ದಾನೆಂದು ಆರೋಪಿಸಲಾಗಿದೆ.
ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತಾ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


