ಹಾಸನ: ಇನ್ನೆರಡು ತಿಂಗಳಿನಲ್ಲಿ ಏನು ಬೇಕಾದರೂ ಆಗಬಹುದು ಎಂದು ಸೆಪ್ಟೆಂಬರ್ ಕ್ರಾಂತಿ ಬಗ್ಗೆ ಸಚಿವ ಕೆ.ಎನ್.ರಾಜಣ್ಣ ಪುನರುಚ್ಚರಿಸಿದ್ದಾರೆ.
ಪದೇ ಪದೇ ರಾಜ್ಯದಲ್ಲಿ ಸೆಪ್ಟೆಂಬರ್ ಕ್ರಾಂತಿ ಆಗಲಿದೆ ಎಂದು ಹೇಳಿಕೆ ನೀಡುತ್ತಿರುವ ಸಚಿವ ರಾಜಣ್ಣ ಅವರು, ಇದೀಗ ಮತ್ತೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿ ಆಗೋದು ನಿಜ ಎಂದು ಪುನರುಚ್ಛರಿಸಿದ್ದಾರೆ.
ಇದೀಗ ಹಾಸನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜಕಾರಣದಲ್ಲಿ ವೈಯಕ್ತಿಕ ಅಭಿಪ್ರಾಯಗಳಿಗೆ ಮಹತ್ವವಿದ್ದು, ತಮ್ಮ ಅಭಿಪ್ರಾಯಗಳನ್ನು ಪಕ್ಷ ಹಾಗೂ ಸರ್ಕಾರ ನೋಡಿಕೊಳ್ಳುತ್ತದೆ ಎಂದು ಹೇಳಿದ್ದಾರೆ.
ಮುಂದುವರಿದು ಮಾತನಾಡಿದ ಅವರು, ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಭೇಟಿಯ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಸುರ್ಜೇವಾಲಾ ಅವರ ಕಾರ್ಯವೈಖರಿಯಲ್ಲಿ ವಿಶೇಷತೆ ಹುಡುಕಬಾರದು. ಸೆಪ್ಟೆಂಬರ್‌ಗೆ ಇನ್ನೂ ಎರಡು ತಿಂಗಳು ಬಾಕಿಯಿದೆ. ಆಗ ನೋಡೋಣ ಎಂದು ಹೇಳಿದ್ದಾರೆ.
ನಾನು ಹೇಳಿರೋದು ಸೆಪ್ಟೆಂಬರ್‌ಗೆ ಅಲ್ವಾ, ಈಗ ನಾವೆಲ್ಲಾ ಇನ್ನೂ ಕೂಡ ಜುಲೈನಲ್ಲಿದ್ದೇವೆ. ಈಗಲೇ ಎಲ್ಲವನ್ನೂ ಹೇಳಿಬಿಟ್ಟರೆ ನಿಮಗೆ ಆಸಕ್ತಿ ಕಡಿಮೆಯಾಗಿಬಿಡುತ್ತದೆ. ಇನ್ನೂ ಎರಡು ತಿಂಗಳು ಬಾಕಿಯಿದೆ. ಅಷ್ಟರಲ್ಲಿ ದೇಶವನ್ನೇ ತಲೆಕೆಳಗಾಗಿಸಬಹುದು ಎಂದು ಉತ್ತರಿಸಿದ್ದಾರೆ.
ಈ ಮೂಲಕ ರಾಜ್ಯ ರಾಜಕಾರಣದಲ್ಲಿ ಸೆಪ್ಟೆಂಬರ್ ವೇಳೆಗೆ ಮಹತ್ವದ ಬದಲಾವಣೆ ಆಗುವುದು ಖಚಿತ ಎಂದು ಹೇಳಲಾಗುತ್ತಿದ್ದು, ರಾಜಣ್ಣ ಅವರ ಹೇಳಿಕೆ ಭಾರೀ ಮಹತ್ವ ಪಡೆದುಕೊಂಡಿದೆ.
ಒಂದೇ ಪಂದ್ಯದಲ್ಲಿ ದ್ವಿಶತಕ ಹಾಗೂ ಶತಕ ಬಾರಿಸಿದ 9ನೇ ಆಟಗಾರ ಗಿಲ್; ಮೊದಲು ಬಾರಿಸಿದ್ದು ಯಾರು?
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


