Sunday, September 20, 2026
spot_img
More
    spot_img
    HomeStateDistrictಶಿವಮೊಗ್ಗ: ಗಣಪತಿ ವಿಗ್ರಹ ಚರಂಡಿಗೆ ಎಸೆದಿದ್ದ ಪ್ರಕರಣ; ಇಬ್ಬರ ಬಂಧನ

    ಶಿವಮೊಗ್ಗ: ಗಣಪತಿ ವಿಗ್ರಹ ಚರಂಡಿಗೆ ಎಸೆದಿದ್ದ ಪ್ರಕರಣ; ಇಬ್ಬರ ಬಂಧನ

    ಶಿವಮೊಗ್ಗ: ನಗರದ ರಾಗಿಗುಡ್ಡದಲ್ಲಿನ ನಾಗರ ಕಟ್ಟೆಯ ಮೇಲಿದ್ದ ಗಣಪತಿ ಹಾಗೂ ಶೇಷನಾಗ ವಿಗ್ರಹಗಳನ್ನು ವಿರೂಪಗೊಳಿಸಿ ಕಾಲಿನಿಂದ ಒದ್ದು ಚರಂಡಿಗೆ ಎಸೆದು ದುಷ್ಟತನ ಮೆರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

    Advertisement

    ಬಡಾವಣೆಯ ಮುಖ್ಯರಸ್ತೆಯಲ್ಲಿ ಇತ್ತೀಚೆಗೆ ಪ್ರತಿಷ್ಠಾಪನೆ ಮಾಡಿದ್ದ ಗಣಪತಿ ವಿಗ್ರಹಕ್ಕೆ ಒದ್ದು, ನಾಗರ ಕಲ್ಲನ್ನು ಚರಂಡಿಗೆ ಎಸೆದಿರುವ ಆರೋಪ ಕೇಳಿಬಂದಿತ್ತು. ಅನ್ಯಕೋಮಿನ ಯುವಕರಿಂದ ದುಷ್ಕೃತ್ಯ ನಡೆದಿದೆ ಎನ್ನಲಾಗಿದ್ದು, ಹಿಂದೂ ಮುಖಂಡರು ಇದರಿಂದ ಕೆರಳಿದ್ದರು. ಇದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

    ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧನಕ್ಕೊಳಪಡಿಸಿ ವಿಚಾರಣೆ ನಡೆಸುತ್ತಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮುನ್ನಚ್ಚರಿಕಾ ಕ್ರಮವಾಗಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಘಟನಾ ಸ್ಥಳದಲ್ಲಿ ಪೊಲೀಸ್ ಬಿಗಿ ಭದ್ರತೆ ನಿಯೋಜಿಸಲಾಗಿದೆ.

    ಈ ಘಟನೆಯಿಂದ ಕೆರಳಿದ ಸ್ಥಳೀಯ ಮಹಿಳೆಯರು ತಕ್ಷಣ ಪ್ರತಿರೋಧ ವ್ಯಕ್ತಪಡಿಸಿದ್ದರಿಂದ, ಯುವಕರು ವಿಗ್ರಹಗಳನ್ನು ಪುನಃ ಕಟ್ಟೆಯ ಮೇಲೆ ಇರಿಸಿ ತೆರಳಿದ್ದಾರೆ.

    ಘಟನೆ ಹಿನ್ನೆಲೆ: ಶಿವಮೊಗ್ಗ ಹೊರವಲಯ ರಾಗಿಗುಡ್ಡದ ಬಂಗಾರಪ್ಪ ಬಡಾವಣೆಯಲ್ಲಿ ಶನಿವಾರ ಸಂಜೆ ಸ್ಥಳೀಯರು ಪಾರ್ಕ್‌ನಂತಹ ಜಾಗದಲ್ಲಿ ಗಣಪತಿ ಹಾಗೂ ನಾಗ ದೇವರ ವಿಗ್ರಹವನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿಕೊಂಡು ಬರುತ್ತಿದ್ದರು. ಈ ವೇಳೆ ವ್ಯಕ್ತಿಯೋರ್ವ ಬಂದು ಏಕಾಏಕಿ ಎರಡು ವಿಗ್ರಹಗಳನ್ನು ಕಟ್ಟೆಯಿಂದ ಕೆಳಗೆ ಹಾಕಿ ಕಾಲಿನಿಂದ ಒದ್ದು ವಿಗ್ರಹಗಳನ್ನು ವಿರೂಪಗೊಳಿಸಲು ಯತ್ನಿಸಿದ್ದಾನೆ. ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಂತೆಯೇ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಆರೋಪಿಯನ್ನು ಬಂಧಿಸಬೇಕು ಎಂದು ಆಗ್ರಹಿಸಿ ಸ್ಥಳೀಯರು ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವಿಗ್ರಹಗಳನ್ನು ನೆಲಕ್ಕೆ ಹಾಕಿ ವಿರೂಪಗೊಳಿಸಿ, ಪರಾರಿಯಾಗುವ ದೃಶ್ಯ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ.

    ಒಂದೇ ಪಂದ್ಯದಲ್ಲಿ ದ್ವಿಶತಕ ಹಾಗೂ ಶತಕ ಬಾರಿಸಿದ 9ನೇ ಆಟಗಾರ ಗಿಲ್;‌ ಮೊದಲು ಬಾರಿಸಿದ್ದು ಯಾರು?

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading