ಜಾರ್ಖಂಡ್: ಕಳೆದ 2018ರ ರ್ಯಾಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್‍ಗಾಂಧಿ ಅವರಿಗೆ ಜಾರ್ಖಂಡ್‍ನ ಚೈಬಾಸಾದ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಜಾರ್ಖಂಡ್ ಹೈಕೋರ್ಟ್ ನಿರ್ದೇಶನದಂತೆ ಇಂದು ಬೆಳಗ್ಗೆ 10.55ರ ಸುಮಾರಿಗೆ ನ್ಯಾಯಾಲಯದ ಮುಂದೆ ಹಾಜರಾದ ರಾಹುಲ್ ಗಾಂಧಿ ಅವರು ಜಾಮೀನು ಕೋರಿದ್ದರು. ಅದು ಮಂಜೂರಾಗಿದೆ. ನಾವು ಈಗ ಪ್ರಕ್ರಿಯೆಯನ್ನು ಮುಂದುವರಿಸುತ್ತೇವೆ ಎಂದು ಕಾಂಗ್ರೆಸ್ ಸಂಸದರ ಪರ ವಕೀಲರು ಹೇಳಿದ್ದಾರೆ.
ಜೂನ್ 2ರಂದು ರಾಹುಲ್ ಗಾಂಧಿ ಅವರು ಜಾರ್ಖಂಡ್ ಹೈಕೋರ್ಟ್‍ನ ಮೊರೆ ಹೋಗಿದ್ದರು. ಇಲ್ಲಿನ ವಿಶೇಷ ನ್ಯಾಯಾಲಯದ ಹಿಂದಿನ ಆದೇಶವನ್ನು ಪ್ರಶ್ನಿಸಿ, ಜೂನ್ 26ರಂದು ತನ್ನ ಮುಂದೆ ಹಾಜರಾಗುವಂತೆ ಸೂಚಿಸಿತ್ತು. ಕಾಂಗ್ರೆಸ್ ಸಂಸದರ ವಕೀಲರು ತಮ್ಮ ಕಕ್ಷಿದಾರರು ನಿಗದಿತ ದಿನದಂದು ಹಾಜರಾಗಲು ಸಾಧ್ಯವಾಗುವುದಿಲ್ಲ ಎಂದು ಜೂನ್ 10ರಂದು ಹೈಕೋರ್ಟ್‍ಗೆ ತಿಳಿಸಿದ್ದರು ಮತ್ತು ಬದಲಿಗೆ ಆಗಸ್ಟ್ 6ರಂದು ಹಾಜರಾಗಲು ಅವಕಾಶ ನೀಡುವಂತೆ ಮನವಿ ಮಾಡಿದರು. ಅವರ ಮನವಿಯನ್ನು ಹೈಕೋರ್ಟ್ ಪುರಸ್ಕರಿಸಿತ್ತು.
2018ರಲ್ಲಿ ಚೈಬಾಸಾದಲ್ಲಿ ನಡೆದ ರ್ಯಾಲಿಯಲ್ಲಿ ಕೇಂದ್ರ ಗೃಹ ಸಚಿವರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಪ್ರತಾಪ್‍ಕುಮಾರ್ ಎಂಬ ವ್ಯಕ್ತಿ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು.
ಕುಮಾರ್ ಅವರು ಚೈಬಾಸಾದ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯಲ್ಲಿ, ಗಾಂಧಿಯವರ ಹೇಳಿಕೆಗಳು ಮಾನಹಾನಿಕರ ಮತ್ತು ಉದ್ದೇಶಪೂರ್ವಕವಾಗಿ ಷಾ ಅವರ ಘನತೆಗೆ ಧಕ್ಕೆ ತರಲು ಮಾಡಲಾಗಿದೆ ಎಂದು ಆರೋಪಿಸಿದ್ದರು.
ಆರ್‌ಬಿಐ : ಸಾಲಗಾರರಿಗೆ ಶುಭ ಸುದ್ದಿ RBI ರೆಪೋ ದರ ಯಥಾಸ್ಥಿತಿ 5.5% ಮುಂದುವರಿಕೆ
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


