Saturday, September 19, 2026
spot_img
More
    spot_img
    HomeLatest newsದೇಶದ ಹಲವೆಡೆ ಮೂರು ದಿನ ಭಾರಿ ಮಳೆ

    ದೇಶದ ಹಲವೆಡೆ ಮೂರು ದಿನ ಭಾರಿ ಮಳೆ

    ಹೊಸದಿಲ್ಲಿ: ದೆಹಲಿ, ಉತ್ತರಪ್ರದೇಶ, ಬಿಹಾರ ಸಹಿತ ಉತ್ತರ ಹಾಗೂ ಈಶಾನ್ಯ ಭಾರತದಲ್ಲಿ ಮುಂದಿನ 3 ದಿನ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಂಗಳವಾರ ಮುನ್ಸೂಚನೆ ನೀಡಿದೆ.

    Advertisement

    ಮುಂಗಾರು ಚುರುಕಾಗಿ ದೇಶಾದ್ಯಂತ ಧಾರಾಕಾರ ಮಳೆಯಾಗಿದ್ದು ಕೆಲವು ದಿನ ಮುಂದುವರಿಯಲಿದೆ ಎಂದು ಐಎಂಡಿ ಹೇಳಿದೆ. ದೆಹಲಿ-ಎನ್‌ಸಿಆರ್‌ನಲ್ಲಿ ಮಂಗಳವಾರದಿಂದ ಗುರುವಾರದವರೆಗೆ ಕುಂಭದ್ರೋಣ ಮಳೆಯಾಗಲಿದೆ.

    ಆ.10ರ ವರೆಗೆ ಪಶ್ಚಿಮ ಬಂಗಾಳ, ಮೇಘಾಲಯದಲ್ಲೂ ಭಾರಿ ಮಳೆಯಾಗಲಿದೆ. ಸತತವಾಗಿ ಧಾರಾಕಾರ ಮಳೆ ಸುರಿಯುತ್ತಿರುವ ಹಿಮಾಚಲಪ್ರದೇಶದಲ್ಲಿ ರಸ್ತೆಗಳು ಹದಗೆಟ್ಟಿರುವುದರಿಂದ ಸಂಚಾರಯೋಗ್ಯವಲ್ಲದ 451 ರಸ್ತೆಗಳನ್ನು ಬಂದ್ ಮಾಡಲಾಗಿದೆ. ಅವುಗಳಲ್ಲಿ 4 ಹೆದ್ದಾರಿಗಳೂ ಇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಮಳೆ ಆರ್ಭಟ ಜೋರಾಗಿದ್ದು ಕೇರಳ-ತಮಿಳುನಾಡು ಗುಡ್ಡಗಾಡು ಪ್ರದೇಶಗಳಲ್ಲಿ ಬುಧವಾರದವರೆಗೆ ಜಾಸ್ತಿ ಮಳೆ ಆಗಲಿದೆ. ಕೇರಳದ ನದಿ ಅಣಿಕಟ್ಟುಗಳು ತುಂಬಿದ್ದು 4 ಜಿಲ್ಲೆಗಳಿಗೆ ರೆಡ್‌ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕೇರಳ ಮತ್ತು ಬಂಗಾಳ ಕೊಲ್ಲಿಯಿಂದ ಹಿಡಿದು ತಮಿಳುನಾಡು ಕರಾವಳಿವರೆಗೆ ಚಂಡಮಾರುತದ ಪರಿಸ್ಥಿತಿ ಸೃಷ್ಟಿ ಆಗಿರುವುದು ಹವಾಮಾನ ತೀವ್ರತೆಗೆ ಕಾರಣವೆಂದು ಐಎಂಡಿ ಹೇಳಿದೆ.

    ಧರ್ಮಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ: ಕಲ್ಲು ತೂರಿದವರಿಗೆ ಲಾಠಿ ರುಚಿ ತೋರಿಸಿದ ಪೊಲೀಸರು; ವಿಡಿಯೊ

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading