Monday, August 31, 2026
spot_img
More
    spot_img
    HomeNational/ Internationalಮತ್ತೆ ಪಾಕಿಸ್ಥಾನದಿಂದ ಕದನ ವಿರಾಮ ಉಲ್ಲಂಘನೆ? ಭಾರತೀಯ ಸೇನೆ ಹೇಳಿಕೆ ಇಲ್ಲಿದೆ

    ಮತ್ತೆ ಪಾಕಿಸ್ಥಾನದಿಂದ ಕದನ ವಿರಾಮ ಉಲ್ಲಂಘನೆ? ಭಾರತೀಯ ಸೇನೆ ಹೇಳಿಕೆ ಇಲ್ಲಿದೆ

    ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತ ನಡೆಸಿದ್ದ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆದು 3 ತಿಂಗಳಾಗಿದೆ. ಭಾರತೀಯ ಸೇನೆಯ ದಾಳಿಗೆ ಹೆದರಿ ಪಾಕಿಸ್ತಾನವೇ ಕದನವಿರಾಮಕ್ಕೆ ಮನವಿ ಮಾಡಿತ್ತು. ಆದರೆ, ಕದನವಿರಾಮ ಘೋಷಿಸಿದ ದಿನ ಸಂಜೆಯೇ ಮತ್ತೆ ದಾಳಿ ನಡೆಸುವ ಮೂಲಕ ಪಾಕಿಸ್ತಾನ ತನ್ನ ಬುದ್ಧಿಯನ್ನು ತೋರಿಸಿತ್ತು.

    Advertisement

    ಇದೀಗ ಮತ್ತೆ ಪಾಕಿಸ್ಥಾನ ಕದನ ವಿರಾಮ ಉಲ್ಲಂಘನೆ ಮಾಡಿದೆ ಎಂದು ಹೇಳಲಾಗುತ್ತಿದೆ.‌
    ಪೂಂಚ್‌ನ ಕೃಷ್ಣ ಘಾಟಿ ವಲಯದಲ್ಲಿ ಪಾಕಿಸ್ತಾನದ ಕದನ ವಿರಾಮ ಉಲ್ಲಂಘನೆಗೆ ಭಾರತೀಯ ಸೇನೆಯು ಪ್ರತಿದಾಳಿ ನಡೆಸಿದೆ ಎನ್ನಲಾಗಿತ್ತು. ಗುಂಡಿನ ಚಕಮಕಿ 15 ನಿಮಿಷಗಳ ಕಾಲ ಮುಂದುವರೆದಿದ್ದು, ಯಾವುದೇ ಸಾವುನೋವು ಸಂಭವಿಸಿಲ್ಲ ಎನ್ನಲಾಗಿತ್ತು. ಆದರೆ, ‘ಗಡಿ ನಿಯಂತ್ರಣ ರೇಖೆಯಲ್ಲಿ ಯಾವುದೇ ಕದನ ವಿರಾಮ ಉಲ್ಲಂಘನೆಯಾಗಿಲ್ಲ’ ಎಂದು ಭಾರತೀಯ ಸೇನೆ ಸ್ಪಷ್ಟಪಡಿಸಿದೆ.

    ಆದರೆ, ಈ ಸುದ್ದಿಯನ್ನು ಭಾರತೀಯ ಸೇನೆ ನಿರಾಕರಿಸಿದೆ. ನಿನ್ನೆ ಸಂಜೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ವಲಯದಲ್ಲಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಕದನ ವಿರಾಮ ಉಲ್ಲಂಘನೆಯ ವರದಿಗಳನ್ನು ಭಾರತೀಯ ಸೇನೆ ತಳ್ಳಿ ಹಾಕಿದೆ. ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಯಾವುದೇ ಕದನ ವಿರಾಮ ಉಲ್ಲಂಘನೆಯಾಗಿಲ್ಲ ಎಂದು ಭಾರತೀಯ ಸೇನೆ ಸ್ಪಷ್ಟನೆ ನೀಡಿದೆ.

    ,ರಾಜ್ಯಾದ್ಯಂತ ಸಾರಿಗೆ ಮುಷ್ಕರ: ಪ್ರಯಾಣಿಕರ ಪರದಾಟ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading