Sunday, November 1, 2026
spot_img
More
    spot_img
    HomeNational/ Internationalಈ ದೇಶದಲ್ಲಿ ಮರ್ಯಾದ ಪುರುಷೋತ್ತಮ ಶ್ರೀರಾಮನ ಅತೀ ಎತ್ತರದ ಪ್ರತಿಮೆ ನಿರ್ಮಾಣ

    ಈ ದೇಶದಲ್ಲಿ ಮರ್ಯಾದ ಪುರುಷೋತ್ತಮ ಶ್ರೀರಾಮನ ಅತೀ ಎತ್ತರದ ಪ್ರತಿಮೆ ನಿರ್ಮಾಣ

    ಹಿಂದೂಗಳ ಆರಾಧ್ಯ ದೈವ ಮರ್ಯಾದ ಪುರುಷೋತ್ತಮ ಶ್ರೀರಾಮಚಂದ್ರನ ಅತೀ ಎತ್ತರದ ಪ್ರತಿಮೆಯನ್ನು ಈ ದೇಶದಲ್ಲಿ ಲೋಕಾರ್ಪಣೆ ಮಾಡಲಾಗಿದೆ.! ಉತ್ತರ ಅಮೆರಿಕಾದ ಕೆನಡಾದಲ್ಲಿ ಶ್ರೀರಾಮನ ಅತೀ ಎತ್ತರದ ಮೂರ್ತಿಯನ್ನು ಭಾನುವಾರ ಲೋಕಾರ್ಪಣೆ ಮಾಡಲಾಗಿದೆ.

    51 ಅಡಿ ಎತ್ತರದ ಶ್ರೀರಾಮನ ಸನಾತನ ಧರ್ಮದ ಅತ್ಯುನ್ನತ ಸಂಕೇತವಾಗಿದೆ. ದೆಹಲಿಯಲ್ಲಿ ಫೈಬರ್‌ಗ್ಲಾಸ್ ಮತ್ತು ಉಕ್ಕಿನ ಮೇಲ್ಪದರವನ್ನು ಬಳಸಿ ಈ ಪ್ರತಿಮೆಯನ್ನು ನಿರ್ಮಿಸಲಾಗಿದೆ.‌ಭಾರತದ ದೆಹಲಿಯಲ್ಲಿ ತಯಾರಿಸಲಾದ ಈ ವಿಗ್ರಹವನ್ನು ಕೆನಡಾದಲ್ಲಿ ನುರಿತ ಕುಶಲಕರ್ಮಿಗಳು ಜೋಡಿಸಿದ್ದಾರೆ.
    ಗಂಟೆಗೆ 200 ಕಿ.ಮೀ. ವೇಗದ ಗಾಳಿಯನ್ನು ತಡೆದುಕೊಳ್ಳುವ ಸಾಮರ್ಥ್ಯ ಈ ಪ್ರತಿಮೆಗೆ ಇದೆ.

    2024 ರಲ್ಲಿ ಅಯೋಧ್ಯೆಯಲ್ಲಿ ನಡೆದ ರಾಮ ಜನ್ಮಭೂಮಿ ದೇವಾಲಯ ಉದ್ಘಾಟನೆಯಿಂದ ಪ್ರೇರಿತವಾಗಿ ಕೆನಡಾದಲ್ಲಿ ಶ್ರೀರಾಮನ ಭಾರಿ ಗಾತ್ರದ ಪ್ರತಿಮೆಯನ್ನು ನಿರ್ಮಿಸಲಾಗಿದೆ. ಇಂಡೋ-ಕೆನಡಿಯನ್‌ ಉದ್ಯಮಿ (Indo-Canadian businessman)ಲಾಜ್ ಪ್ರಶೇರ್ ಅವರು ಈ ಬೃಹತ್‌ ಪ್ರತಿಮೆ ನಿರ್ಮಾಣಕ್ಕಾಗಿ ಉದಾರ ದೇಣಿಗೆ ನೀಡಿದ್ದಾರೆ. ಅವರ ನೆರವಿನಿಂದಲೇ ನಾಲ್ಕು ವರ್ಷಗಳ ದೀರ್ಘಾವಧಿಯ ಯೋಜನೆಯ ಪೂರ್ಣಗೊಂಡಿದೆ.

    ಈ ಶ್ರೀರಾಮನ ಪ್ರತಿಮೆಯೂ ಟೊರೊಂಟೊ ಪಿಯರ್ಸನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದಲ್ಲಿ ಇದ್ದು ಇಲ್ಲಿ ವಿಮಾನಗಳ ಲ್ಯಾಂಡಿಂಗ್ ವೇಳೆ ಹಾಗೂ ಟೇಕಾಫ್ ವೇಳೆ ಕಾಣುತ್ತದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search