ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಗೆ ಒಂದು ದಿನದ ಕಾಫಿ, ಟೀಗೆ 11 ಲಕ್ಷ ಖರ್ಚು ಮಾಡಿದ್ದಾರೆ. ಅದೇನು ವಿಶೇಷ ಕಾಫಿಯೇ? ಎಂದು ಸಿ.ಟಿ.ರವಿ ಹೇಳಿದ್ದಾರೆ. ಹೆಲಿಕಾಪ್ಟರ್ ಓಡಾಟ ಕಡಿಮೆ ಆಗಿಲ್ಲ. ಮಂತ್ರಿಗಳಿಗೆ ಹೊಸ ಕಾರು ಬಂದಿದೆ. ಬಡಪಾಯಿ ದುಡಿದು ತಿನ್ನುವ ಕೆಎಸ್‌ಆರ್‌ಟಿಸಿ ನೌಕರರಿಗೇಕೆ ಸಂಯಮದ ಪಾಠ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು 26 ನೇ ತಿಂಗಳು ನಡೆಯುತ್ತಿದೆ. ನಿನ್ನೆ ಮೊನ್ನೆ ಅಧಿಕಾರಕ್ಕೆ ಬಂದವರ ಥರ ನೀವು ಮಾತನಾಡುತ್ತಿದ್ದೀರಿ. ನಿಮ್ಮದೇನು ಬದ್ಧತೆ? ನಿಮ್ಮ ಜವಾಬ್ದಾರಿ ಏನು? ಎಂದು ಕೇಳಿದರು. 12 ತಿಂಗಳ ಬಾಕಿ ಮಾತ್ರ ಬಿಜೆಪಿ ಸರಕಾರದ್ದು, ಕಳೆದ 26 ತಿಂಗಳ ಬಾಕಿ ನಿಮ್ಮ ಸರಕಾರದ ಅವಧಿಯದು. ವೇತನ ಹಿಂಬಾಕಿ ಪಾವತಿಸಿ ಮುಷ್ಕರ ನಿಲ್ಲಿಸಲು ಸಕಾರಾತ್ಮಕ ಕ್ರಮ ಕೈಗೊಳ್ಳಿ. ನೀವು ಯಾವ ಖರ್ಚು ಉಳಿಸಿದ್ದೀರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಸಿ ಟಿ ರವಿ ಅವರು ಪ್ರಶ್ನಿಸಿದರು.
ಉಳಿದ ಸರಕಾರಿ ನೌಕರರಿಗೆ ವೇತನ ಪರಿಷ್ಕರಿಸಿದ ಮಾದರಿಯಲ್ಲೇ ಇವರಿಗೂ ವೇತನ ಪರಿಷ್ಕರಿಸಿದರೆ ತಪ್ಪೇನಿದೆ ಎಂದು ಕೇಳಿದರು. ಒಬ್ಬರಿಗೊಂದು ನ್ಯಾಯ; ಇನ್ನೊಬ್ಬರಿಗೆ ಇನ್ನೊಂದು ಸರಿಯೇ ಎಂದು ಪ್ರಶ್ನಿಸಿದರು. ನಮಗೆ ಕೋವಿಡ್ ಸಂಕಷ್ಟ ಇತ್ತು. ನಿಮಗ್ಯಾವ ಸಂಕಷ್ಟ ಎಂದು ಪ್ರಶ್ನೆ ಮಾಡಿದ್ದಾರೆ ಸಿ ಟಿ ರವಿ.
,ರಾಜ್ಯದಲ್ಲಿ 3 ಹೊಸ ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


