ಬೆಳಗಾವಿ ಲೋಕಸಭಾ ಕ್ಷೇತ್ರದ ಸಂಸದ ಜಗದೀಶ್ ಶೆಟ್ಟರ್ ಅವರು, ಬೆಂಗಳೂರು – ಬೆಳಗಾವಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರ ಸೇರಿದಂತೆ ಕರ್ನಾಟಕದ ವಿವಿಧ ವಿಚಾರಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಚರ್ಚೆ ಮಾಡಿದ್ದಾರೆ.
ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಕೋರಿಕೆಯಂತೆ ಬೆಂಗಳೂರು-ಬೆಳಗಾವಿ ನೂತನ ʼವಂದೇ ಭಾರತ್ʼ ರೈಲು ಸಂಚಾರ ಸೇರಿದಂತೆ ಮೂರು ವಂದೇ ಭಾರತ್ ರೈಲು ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆ.10ರಂದು ಚಾಲನೆ ನೀಡಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಆ.10ರ ಭಾನುವಾರ ಕರ್ನಾಟಕ ಪ್ರವಾಸ ಕೈಗೊಂಡ ವೇಳೆ ರಾಜ್ಯದಲ್ಲಿ 3 ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ. ಬೆಂಗಳೂರು-ಬೆಳಗಾವಿ, ನಾಗ್ಪುರದ ಅಜ್ನಿ-ಪುಣೆ ಹಾಗೂ ಅಮೃತಸರ-ಶ್ರೀಮಾತಾ ವೈಷ್ಣೋದೇವಿ-ಕಾತ್ರಾ ಮಧ್ಯೆ ನೂತನ ವಂದೇ ಭಾರತ್ ರೈಲುಗಳು ಸಂಚಾರ ಆರಂಭಿಸಲಿವೆ.
ಈ ನೂತನ ವಂದೇ ಭಾರತ್ ರೈಲು ಬೆಳಗಾವಿಯಿಂದ ಬೆಳಗ್ಗೆ 5.20ಕ್ಕೆ ಹೊರಟು ಬೆಂಗಳೂರಿಗೆ ಮಧ್ಯಾಹ್ನ 1.50ಕ್ಕೆ ತಲುಪಲಿದೆ. ವಾಪಸ್ ಬೆಂಗಳೂರಿನಿಂದ ಮಧ್ಯಾಹ್ನ 2.20ಕ್ಕೆ ಹೊರಟು ರಾತ್ರಿ 10.40ಕ್ಕೆ ಬೆಳಗಾವಿ ತಲುಪಲಿದೆ.
,LPG cylinder latest price update
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


