ಭಾರತ ಹಾಗೂ ಇಂಗ್ಲೆಂಡ್ ನಡುವಣ ಐದನೇ ಟೆಸ್ಟ್ ಮುಕ್ತಾಯವಾಗಿದೆ. ಟೀಮ್ ಇಂಡಿಯಾ ಈ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿ ಜಯ ಸಾಧಿಸಿದೆ. ಕೊನೆಯ ಟೆಸ್ಟ್ ಪಂದ್ಯವನ್ನು 6 ರನ್ಗಳಿಂದ ಗೆಲ್ಲುವ ಮೂಲಕ ಟೀಮ್ ಇಂಡಿಯಾ ದಾಖಲೆ ಬರೆದಿದೆ. ಟೀಮ್ ಇಂಡಿಯಾ ಆಟಗಾರರ ಮುಂದೆ ಮುಂದಿನ ದೊಡ್ಡ ಸವಾಲು ಏಷ್ಯಾ ಕಪ್ ಆಗಿದೆ.
ಈ ಬಾರಿ ಏಷ್ಯಾ ಕಪ್ನ್ನು ಟಿ20 ಸ್ವರೂಪದಲ್ಲಿ ಆಡಿಸಲು ನಿರ್ಧರಿಸಲಾಗಿದೆ. ಏಷ್ಯಾ ಕಪ್ ಟೂರ್ನಿಯಲ್ಲಿ ಒಟ್ಟು 8 ತಂಡಗಳು ಭಾಗವಹಿಸಲಿವೆ.
ಈ ಮೆಗಾ ಟೂರ್ನಿ ಸೆಪ್ಟೆಂಬರ್ನಲ್ಲಿ ಆರಂಭವಾಗಿವೆ. ಒಂದು ತಿಂಗಳ ವಿಶ್ರಾಂತಿ ಪಡೆಯಲಿರುವ ಆಟಗಾರರು ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗೆ ಸಜ್ಜಾಗಲಿದ್ದಾರೆ.
ಏಷ್ಯಾದ ಪ್ರತಿಷ್ಠಿತ ತಂಡಗಳ ನಡುವೆ ನಡೆಯುವ ಈ ಟೂರ್ನಿಯ ಪಂದ್ಯಾವಳಿ ಸೆಪ್ಟೆಂಬರ್ 9 ರಿಂದ 28 ರವರೆಗೆ ದುಬೈ ಮತ್ತು ಅಬುಧಾಬಿಯಲ್ಲಿ ನಡೆಯಲಿದೆ. ಒಟ್ಟು 19 ಪಂದ್ಯಗಳು ನಡೆಯಲಿದೆ.
ಭಾರತ ಈ ಟೂರ್ನಿಯಲ್ಲಿ ತನ್ನ ಮೊದಲ ಪಂದ್ಯವನ್ನು ಸೆಪ್ಟಂಬರ್ 10 ರಂದು ಆಡಲಿದೆ. ಈ ಪಂದ್ಯದಲ್ಲಿ ಭಾರತ ಯುಎಇ ವಿರುದ್ಧ ಕಾದಾಟವನ್ನು ನಡೆಸಲಿದೆ. ಈ ಪಂದ್ಯಕ್ಕಾಗಿ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣ ಸಿದ್ಧವಾಗಲಿದೆ. ಭಾರತದ ಲೀಗ್ ಪಂದ್ಯಗಳು ಕ್ರಮವಾಗಿ ಸೆ. 10, 14 ಹಾಗೂ 19ರಂದು ನಿಗದಿಯಾಗಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


