Thursday, August 6, 2026
spot_img
More
    spot_img
    HomeStateDistrictವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಗಜಪಡೆ ಹಾಗೂ ಮಾವುತರಿಗೆ ಆರ್ಥಿಕ ಭದ್ರತೆ

    ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಗಜಪಡೆ ಹಾಗೂ ಮಾವುತರಿಗೆ ಆರ್ಥಿಕ ಭದ್ರತೆ

    ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಮೈಸೂರಿಗೆ ಆಗಮಿಸಿರುವ ಗಜಪಡೆ, ಮಾವುತರು ಹಾಗೂ ಕಾವಾಡಿಗರ ಜೊತೆಗೆ ಅರಣ್ಯಾಧಿಕಾರಿಗಳನ್ನು ಒಳಗೊಂಡಂತೆ ಅರಣ್ಯ ಇಲಾಖೆಯಿಂದ 2.04 ಕೋಟಿ ರೂಪಾಯಿ ವಿಮೆ ಮಾಡಿಸುವ ಮೂಲಕ ಆರ್ಥಿಕ ಭದ್ರತೆ ಒದಗಿಸಲಾಗಿದೆ.

    Advertisement

    ನಾಡಹಬ್ಬ ಮೈಸೂರು ದಸರಾ ಮಹೋತ್ಸವದ 14 ಆನೆಗಳು, ಅವುಗಳ ಮಾವುತರು ಮತ್ತು ಕಾವಾಡಿಗರು ತಲಾ 14 ಮಂದಿ, ಅರಣ್ಯ ಸಿಬ್ಬಂದಿ ಸೇರಿದಂತೆ ಒಟ್ಟು 43 ಜನರಿಗೆ ವಿಮೆ ಸೌಲಭ್ಯ ಕಲ್ಪಿಸಲಾಗಿದೆ.

    ಗಜಪಯಣದಿಂದ ಜಂಬೂಸವಾರಿ ಪೂರ್ಣಗೊಳಿಸಿ ಮತ್ತೆ ಕಾಡಿಗೆ ತೆರಳುವವರೆಗೆ ವಿಮೆ ಸೌಲಭ್ಯ ಜಾರಿಯಲ್ಲಿರುತ್ತದೆ. ಇದಕ್ಕಾಗಿ ಜಿಲ್ಲಾಡಳಿತ ವತಿಯಿಂದ ದಿ ನ್ಯೂ ಇಂಡಿಯಾ ಅಶ್ಯೂರೆನ್ಸ್‌ ಕಂಪನಿಗೆ 67,000 ರೂ ಪ್ರೀಮಿಯಂ ಪಾವತಿಸಲಾಗಿದೆ.

    ಅಂಬಾರಿ ಹೊರುವ ಕ್ಯಾಪ್ಟನ್‌ ಅಭಿಮನ್ಯು ಸೇರಿದಂತೆ ಎಲ್ಲಾ ಗಂಡಾನೆಗಳಿಗೆ ಒಟ್ಟು 50 ಲಕ್ಷ ವಿಮೆ ಮಾಡಿಸಲಾಗಿದ್ದು, ಹೆಣ್ಣಾನೆಗಳಿಗೆ 18 ಲಕ್ಷ ರೂಪಾಯಿ ವಿಮೆ ಮಾಡಿಸಲಾಗಿದೆ.

    ಸಿಬ್ಬಂದಿ, ಕಾವಾಡಿಗರು, ಮಾವುತರು, ವಿಶೇಷ ಮಾವುತರು, ಸಹಾಯಕರು, ಅರಣ್ಯ ಇಲಾಖೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯ ಅಧಿಕಾರಿ, ಪಶುವೈದ್ಯಾಧಿಕಾರಿ, ಸಹಾಯಕರು ಸೇರಿದಂತೆ ಒಟ್ಟು 43 ಮಂದಿಗೆ 86 ಲಕ್ಷ ರೂಪಾಯಿ ವಿಮೆ ಮಾಡಿಸಲಾಗಿದೆ.

    ಇನ್ನು ದಸರಾ ಆನೆಗಳಿಂದ ಸಾರ್ವಜನಿಕರಿಗೆ ತೊಂದರೆಯಾದಲ್ಲಿ, ಸಾರ್ವಜನಿಕರ ಆಸ್ತಿಪಾಸ್ತಿಗಳಿಗೆ ದಸರಾ ಆನೆಗಳಿಂದ ನಷ್ಟವಾದರೂ ಇದಕ್ಕೆ 50 ಲಕ್ಷ ರೂ ವಿಮೆ ಪರಿಹಾರ ಸಿಗಲಿದೆ.

    ಲಾಲ್‌ಬಾಗ್ ಫಲಪುಷ್ಪ ಮೇಳ ಆಗಸ್ಟ್ 7ರಿಂದ ಆರಂಭ: ಟಿಕೆಟ್ ದರ ಹಾಗೂ ಮುಂಗಡ ಬುಕ್ಕಿಂಗ್ ವಿವರಗಳು ಇಲ್ಲಿದೆ!

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading