ದಕ್ಷಿಣ ಕನ್ನಡ: ಧರ್ಮಸ್ಥಳ ಗ್ರಾಮದಲ್ಲಿ ಸರಣಿ ಕೊಲೆ, ಅತ್ಯಾಚಾರ ಕೊಲೆಗಳು ನಡೆದಿವೆ ಎಂದು ಅನಾಮಿಕ ನೀಡಿದ ದೂರಿನ ಆಧಾರದ ಮೇಲೆ ಎಸ್‌ಐಟಿ ತನಿಖೆ ನಡೆಯುತ್ತಿದ್ದು, ಸಾಕ್ಷಿ ದೂರುದಾರ ತಾನು ದೂರಿನಲ್ಲಿ ಉಲ್ಲೇಖಿಸಿದಂತೆ ಅಸ್ತಿಪಂಜರಗಳನ್ನು ತೋರಿಸುವಲ್ಲಿ ಯಶಸ್ವಿಯಾಗಿದ್ದಾನೆ.
ಒಂದೆಡೆ ಪ್ರಕರಣದ ಕುರಿತು ಎಸ್‌ಐಟಿ ತನಿಖೆ ಭರದಿಂದ ನಡೆಯುತ್ತಿದ್ದು, ತನಿಖೆಯ ವರದಿ ನೀಡಲು ಸ್ಥಳೀಯ ಮಾಧ್ಯಮಗಳಿಂದ ಹಿಡಿದು ರಾಷ್ಟ್ರೀಯ ಮಾಧ್ಯಮಗಳವರೆಗೂ ಜಮಾಯಿಸಿವೆ.
ಕರಾವಳಿ ಭಾಗದ ಜನಪ್ರಿಯ ಯಟ್ಯೂಬ್ ಚಾನೆಲ್‌ಗಳಾದ ಕುಡ್ಲ ರಾಂಪೇಜ್ ಹಾಗೂ ಯುನೈಟೆಡ್ ಮೀಡಿಯಾ ಕನ್ನಡ ಚಾನೆಲ್‌ಗಳ ಸಿಬ್ಬಂದಿ ಸಹ ಎಸ್‌ಐಟಿ ತನಿಖೆ ವರದಿಗೆಂದು ಧರ್ಮಸ್ಥಳಕ್ಕೆ ಆಗಮಿಸಿದ್ದರು. ಇಂದು ಕೆಲ ಸ್ಥಳೀಯರು ಮಾಡುತ್ತಿದ್ದ ಈ ನಾಲ್ವರ ಮೇಲೆ ಹಲ್ಲೆ ನಡೆಸಿದ್ದು, ಕ್ಯಾಮೆರಾಗೂ ಹಾನಿ ಮಾಡಿದ್ದಾರೆ. ಸದ್ಯ ಇಬ್ಬರು ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಹೀಗೆ ಯುಟ್ಯೂಬರ್ಸ್ ಮೇಲೆ ಹಲ್ಲೆ ನಡೆದ ಬೆನ್ನಲ್ಲೇ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಮಾಧ್ಯಮಗಳ ವಾಹನಗಳ ಮೇಲೆ ಕಲ್ಲು ತೂರಾಟ ನಡೆದಿದೆ. ಹೀಗೆ ಕಲ್ಲು ತೂರಿದ ಕಿಡಿಗೇಡಿಗಳ ಮೇಲೆ ಪೊಲೀಸರು ಲಾಠಿ ಬೀಸಿದ್ದು, ಪರಿಸ್ಥಿತಿ ನಿಯಂತ್ರಿಸುವ ಕೆಲಸ ಮಾಡಿದ್ದಾರೆ. ಈ ವಿಡಿಯೊ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮಳೆಗಾಲದ ಚಹಾ ಸಮಯಕ್ಕೆ ಪರ್ಫೆಕ್ಟ್ ಸ್ನ್ಯಾಕ್: ಹಿತಕಿದ ಅವರೆಕಾಳಿನ ಮಿಕ್ಸ್ಚರ್!
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


