ಬೆಂಗಳೂರು: ಸಿಎಂ ಸಿದ್ದರಾಮಯ್ಯನವರೇ ಇನ್ನೆಷ್ಟು ದಿನ ಈ ಭಂಡ ಬಾಳು, ರಾಜೀನಾಮೆ ಕೊಟ್ಟು ರಾಜ್ಯವನ್ನು ಉಳಿಸಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಟೀಕೆ ಮಾಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ರಾಜ್ಯ ಸರ್ಕಾರದ ಕೃಷಿ ಸಚಿವರು ನಾಲ್ಕನೇ ಬಾರಿಗೆ ಶಾಸಕರಾಗಿ ಆರಿಸಿ ಬಂದಿರುವವರು ತಮ್ಮ ಕ್ಷೇತ್ರದ ಪರಿಶಿಷ್ಟ ಪಂಗಡಗಳ ಕಾಲೋನಿ ಅಭಿವೃದ್ಧಿಗೆ ಕೇವಲ 2 ಕೋಟಿ ರೂಪಾಯಿ ಅನುದಾನ ಪಡೆಯಲು ಸಿಎಂ ಬಳಿ ಅಂಗಲಾಚಬೇಕು ಅಂದರೆ ಕರ್ನಾಟಕ ಸರ್ಕಾರ ಎಷ್ಟು ದಿವಾಳಿ ಆಗಿದೆ ಎನ್ನುವುದನ್ನು ನೀವೇ ಊಹಿಸಿಕೊಳ್ಳಿ ಎಂದು ಲೇವಡಿ ಮಾಡಿದರು.
ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ಅವರು ಅನುದಾನಕ್ಕಾಗಿ ಸಿಎಂ ಕಾಲಿಗೆ ಬೀಳಬೇಕು ಎನ್ನುತ್ತಾರೆ. ಪ್ರತಿಯೊಬ್ಬ ಶಾಸಕರು ಅನುದಾನ ವಿಚಾರವಾಗಿ ಒಂದಲ್ಲಾ ಒಂದು ಮಾತುಗಳನ್ನು ಹೇಳುತ್ತಿದ್ದಾರೆ.
ಇಷ್ಟೆಲ್ಲಾ ಆದರೂ ಸಿಎಂ ಸಿದ್ದರಾಮಯ್ಯನವರೇ ಈ ಭಂಡ ಬಾಳು. ರಾಜೀನಾಮೆ ಕೊಟ್ಟು ರಾಜ್ಯವನ್ನು ಉಳಿಸಿ ಎಂದು ಬರೆದುಕೊಂಡಿದ್ದಾರೆ.
ಜೈಲಿನಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಕೆಲಸ ವಹಿಸಿದ ಜೈಲಧಿಕಾರಿಗಳು; ಸಿಕ್ಕ ಕೆಲಸವೇನು?
ಎಐ ಅಡ್ವೋಕೇಟ್ ಅಸಿಸ್ಟೆಂಟ್ ವೆಬ್ಸೈಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


