ರಾಮನಗರ: ಕನಕಪುರ ತಾಲೂಕಿನಾದ್ಯಂತ ಗಣೇಶ ಮೂರ್ತಿಗಳ ವಿಸರ್ಜನೆ ಮಾಡುವ ವೇಳೆ ಶಾಂತಿ ಸೌಹಾರ್ದ ಕಾಪಾಡುವ ಹಿನ್ನೆಲೆಯಲ್ಲಿ ಸೆ.6 ರಿಂದ 7ರ ವರೆಗೆ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ಆ. 27 ರಿಂದ ಮುಂದುವರೆದಂತೆ ಸದ್ಯದ ಮಾಹಿತಿ ಪ್ರಕಾರ ಒಟ್ಟು 1,583 ಗಣೇಶ ಮೂರ್ತಿಗಳು, ಮುಂದಿನ ದಿನಗಳಲ್ಲೂ ಸಹ ಹೆಚ್ಚಿನ ಸಂಖ್ಯೆಯಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ವಿವಿಧ ದಿನಾಂಕಗಳಂದು ಮೆರವಣಿಗೆ ಮೂಲಕ ಸಾಗಿ ವಿವಿಧ ಕೆರೆಗಳಲ್ಲಿ ವಿಸರ್ಜನೆ ಮಾಡುವ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಕರ್ನಾಟಕ ಅಬಕಾರಿ ಕಾಯಿದೆ 1965ರ ಕಲಂ 21ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಕರ್ನಾಟಕ ಅಬಕಾರಿ (ಭಾರತೀಯ ಮತ್ತು ವಿದೇಶಿ ಮದ್ಯ ಮಾರಾಟ) ನಿಯಮಗಳು 1968ರ ನಿಯಮ 3ರನ್ವಯ ಬರುವ ಎಲ್ಲಾ ರೀತಿಯ ಮದ್ಯ ಸನ್ನದುಗಳನ್ನು ಸೆ. 6 ರಂದು ಕನಕಪುರ ತಾಲ್ಲೂಕಿನಾದ್ಯಂತ, ಸೆ. 7ರಂದು ಮಾಗಡಿ ಟೌನ್ನ ಪುರಸಭಾ ವ್ಯಾಪ್ತಿಯಾದ್ಯಂತ ಒಂದು ದಿನದ ಮಟ್ಟಿಗೆ ಮದ್ಯ ಮಾರಾಟವನ್ನು ನಿಷೇಧಿಸಬೇಕು ಎಂದು ಆದೇಶಿಸಿದ್ದಾರೆ.
ಧರ್ಮಸ್ಥಳ: ವಸಂತ್ ಗಿಳಿಯಾರ್ ವಿರುದ್ಧ ಒಡನಾಡಿ ಸ್ಟಾನ್ಲಿ ದೂರು
ಎಐ ಅಡ್ವೋಕೇಟ್ ಅಸಿಸ್ಟೆಂಟ್ ವೆಬ್ಸೈಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


