Tuesday, November 3, 2026
spot_img
More
    spot_img
    HomeLatest newsನಾಳೆ ಖಗ್ರಾಸ ಚಂದ್ರಗ್ರಹಣ: ರಾಜ್ಯದ ಬಹುತೇಕ ದೇವಸ್ಥಾನಗಳು ಬಂದ್‌

    ನಾಳೆ ಖಗ್ರಾಸ ಚಂದ್ರಗ್ರಹಣ: ರಾಜ್ಯದ ಬಹುತೇಕ ದೇವಸ್ಥಾನಗಳು ಬಂದ್‌

    ಬೆಂಗಳೂರು: ನಾಳೆ ಖಗ್ರಾಸ ಚಂದ್ರಗ್ರಹಣ ಸಂಭವಿಸಲಿರುವ ಹಿನ್ನೆಲೆಯಲ್ಲಿ ಭಾರತದಲ್ಲಿ ಕೂಡ ಚಂದ್ರಗ್ರಹಣ ಗೋಚರವಾಗಲಿದೆ. ಚಂದ್ರಗ್ರಹಣ ಇರುವ ಹಿನ್ನೆಲೆಯಲ್ಲಿ ರಾಜ್ಯದ ಬಹುತೇಕ ದೇವಸ್ಥಾನಗಳು ನಾಳೆ ಕ್ಲೋಸ್‌ ಆಗಲಿವೆ.

    ಬೆಂಗಳೂರು ನಗರದ ಇತಿಹಾಸ ಪ್ರಸಿದ್ಧ ಗವಿ ಗಂಗಾಧರೇಶ್ವರ ದೇವಾಲಯ ನಾಳೆ ಬೆಳಿಗ್ಗೆಯಿಂದಲೇ ಬಂದ್‌ ಆಗಲಿದೆ. ಶಿವನಿಗೆ ಅಭಿಷೇಕ ನೆರವೇರಿಸಿ ಬೆಳಿಗ್ಗೆ 11 ಗಂಟೆಗೆ ದೇವಾಲಯ ಕ್ಲೋಸ್‌ ಮಾಡಲಾಗುತ್ತದೆ.

    ಇನ್ನು ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಸೆಪ್ಟೆಂಬರ್.‌7ರಂದು ಚಂದ್ರಗ್ರಹಣ ಇರುವುದರಿಂದ ನಿತ್ಯದ ಸೇವೆ, ದರ್ಶನ ಸೇವಾ ಸಮಯದಲ್ಲಿ ವ್ಯತ್ಯಯ ಉಂಟಾಗಲಿದೆ. ಅಂದು ಮಧ್ಯಾಹ್ನದ ಮಹಾಪೂಜೆ ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ. ರಾತ್ರಿಯ ಮಹಾಪೂಜೆ ಸಂಜೆ 5 ಗಂಟೆಗೆ ನೆರವೇರಿಸಲಾಗುವುದು. ರಾತ್ರಿ ಭೋಜನ ಪ್ರಸಾದ ಇರುವುದಿಲ್ಲ. ಸಾಯಂಕಾಲದ ಆಶ್ಲೇಷ ಬಲಿ ಸೇವೆಯೂ ಇರುವುದಿಲ್ಲ. ಶನಿವಾರ ಆರಂಭವಾದ ಸರ್ಪ ಸಂಸ್ಕಾರ ಸೇವೆ ಭಾನುವಾರ ಕೊನೆಯಾಗಲಿದೆ. ಭಾನುವಾರ ಸೇವೆ ಆರಂಭವಾಗುವುದಿಲ್ಲ. ಸಂಜೆ 5 ರಿಂದ ದೇವರ ದರ್ಶನ ಇರುವುದಿಲ್ಲ. ಸೆಪ್ಟೆಂಬರ್.‌8ರಂದು ಪಂಚಾಮೃತ ಮಹಾಭಿಷೇಕ ಸೇವೆ ಇರುವುದಿಲ್ಲ ಎಂದು ದೇವಾಲಯದ ಪ್ರಕಟಣೆಯಲ್ಲಿ ತಿಳಿಸಿದೆ.

    ರಾಜ್ಯದ ಇನ್ನೂ ಅನೇಕ ದೇವಾಲಯಗಳು ಕೂಡ ನಾಳೆ ಬಂದ್‌ ಆಗಲಿದ್ದು, ಚಂದ್ರಗ್ರಹಣ ಮುಗಿದ ಬಳಿಕ ಬಾಗಿಲು ತೆರೆಯಲಿವೆ.

    8% ಕ್ಕಿಂತ ಹೆಚ್ಚು ಬಡ್ಡಿ ನೀಡುತ್ತಿರುವ ಟಾಪ್ ಬ್ಯಾಂಕುಗಳು ಹೂಡಿಕೆ ಮಾಡುವ ಮುನ್ನ ತಿಳಿದುಕೊಳ್ಳಿ

    ಎಐ ಅಡ್ವೋಕೇಟ್‌ ಅಸಿಸ್ಟೆಂಟ್‌ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search