ಕೆ.ಆರ್.ಪೇಟೆ: ಎಮೆ ಮೈ ತೊಳೆಯಲು ಹೋಗಿದ ಪತಿ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗುತ್ತಿರುವುದನ್ನು ಕಂಡು ರಕ್ಷಣೆ ಮಾಡಲು ಹೋದ ಪತಿ ಕೂಡ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ತಾಲ್ಲೂಕಿನ ಅರೆಬೊಪ್ಪನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಅರೆಬೊಪ್ಪನಹಳ್ಳಿ ಗ್ರಾಮದ ಕಾಳೇಗೌಡರ ಪತ್ನಿ ವಸಂತಮ್ಮ (65) ಮತ್ತು ಕಾಳೇಗೌಡ(70) ಮೃತರಾದವರು.
ಬುಧವಾರ ಸಂಜೆ 6 ಗಂಟೆಯ ಸಮಯದಲ್ಲಿ ತಮ್ಮ ಜಮೀನಿನಲ್ಲಿ ಇರುವ ತೆರೆದ ಬಾವಿಯಲ್ಲಿ ಎಮ್ಮೆ ಮೈ ತೊಳೆಯಲು ಹೋಗಿದ್ದ ವಸಂತಮ್ಮ ಅಕಸ್ಮಿಕವಾಗಿ ನೀರಿನಲ್ಲಿ ಮುಳುಗಿದರು. ಇದನ್ನು ಕಣ್ಣಾರೆ ನೋಡಿದ ಪತಿ ಕಾಳೇಗೌಡ ಇವರನ್ನು ರಕ್ಷಣೆ ಮಾಡಲು ಹೋಗಿ ತಾವೂ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಆಕಸಿಕವಾಗಿ ನಡೆದ ಈ ಘಟನೆಯಿಂದ ಇಡೀ ಅರೆಬೊಪ್ಪನಹಳ್ಳಿ ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿತ್ತು. ಮೃತರ ಅಂತ್ಯಕ್ರಿಯೆಯು ಅರೆಬೊಪ್ಪನಹಳ್ಳಿ ಗ್ರಾಮದಲ್ಲಿ ಗುರುವಾರ ಮಧ್ಯಾಹ್ನ ನೆರವೇರಿತು. ಮೃತರ ನಿಧನಕ್ಕೆ ತಾಲ್ಲೂಕಿನ ವಿವಿಧ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಧರ್ಮಸ್ಥಳ: ಗಿರೀಶ್ ಮಟ್ಟೆಣ್ಣವರ್ ವಿಚಾರಣೆ ನಡೆಸಿದ ಎಸ್ಐಟಿ ಅಧಿಕಾರಿಗಳು
ಎಐ ಅಡ್ವೋಕೇಟ್ ಅಸಿಸ್ಟೆಂಟ್ ವೆಬ್ಸೈಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


