2025ರ ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಇಂದು (ಗುರುವಾರ) ಬೆಳಿಗ್ಗೆ 7 ಗಂಟೆಗೆ ಆರಂಭವಾಗಿದೆ. ಒಟ್ಟು 243 ಸ್ಥಾನಗಳ ಪೈಕಿ 18 ಜಿಲ್ಲೆಗಳ 121 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.
ಸುಮಾರು 3.75 ಕೋಟಿ ಮತದಾರರು ತಮ್ಮ ಮತಹಕ್ಕು ಚಲಾಯಿಸಲು ಅರ್ಹರಾಗಿದ್ದಾರೆ. ಮತದಾನವು ಸಂಜೆ 6 ಗಂಟೆಗೆ ಮುಕ್ತಾಯಗೊಳ್ಳಲಿದ್ದು, ಭದ್ರತಾ ಕಾರಣಗಳಿಂದ ಕೆಲವು ಕ್ಷೇತ್ರಗಳಲ್ಲಿ ಸಂಜೆ 5 ಗಂಟೆಯವರೆಗೂ ಮಾತ್ರ ನಡೆಯಲಿದೆ.
ಈ ಹಂತದಲ್ಲಿ ಆರ್‌ಜೆಡಿಯ ತೇಜಸ್ವಿ ಪ್ರಸಾದ್ ಯಾದವ್ (ರಘೋಪುರ್), ಬಿಜೆಪಿ ನಾಯಕರಾದ ಸಮ್ರಾಟ್ ಚೌಧರಿ ಮತ್ತು ಮಂಗಳ ಪಾಂಡೆ, ಜೆಡಿ(ಯು) ನಾಯಕರಾದ ಶ್ರವಣ್ ಕುಮಾರ್ ಹಾಗೂ ವಿಜಯ್ ಕುಮಾರ್ ಚೌಧರಿ ಸೇರಿದಂತೆ ಹಲವು ಪ್ರಮುಖ ನಾಯಕರ ಭವಿಷ್ಯ ತೀರ್ಮಾನವಾಗಲಿದೆ.
ಮುಖ್ಯಮಂತ್ರಿಪದ ಅಭ್ಯರ್ಥಿ ತೇಜಸ್ವಿ ಯಾದವ್ ಅವರು ರಘೋಪುರ್‌ನಲ್ಲಿ ಬಿಜೆಪಿಯ ಸತೀಶ್ ಕುಮಾರ್ ಯಾದವ್ ಹಾಗೂ ಇತರೆ ಅಭ್ಯರ್ಥಿಗಳ ವಿರುದ್ಧ ಸ್ಪರ್ಧಿಸುತ್ತಿದ್ದಾರೆ.
ಕಣದಲ್ಲಿರುವ 25 ವರ್ಷದ ಜಾನಪದ ಗಾಯಕಿ ಹಾಗೂ ಬಿಜೆಪಿ ಅಭ್ಯರ್ಥಿ ಮೈಥಿಲಿ ಠಾಕೂರ್ (ದರ್ಭಾಂಗಾ) ಈ ಚುನಾವಣೆಯ ಕಿರಿಯ ಅಭ್ಯರ್ಥಿಯಾಗಿದ್ದಾರೆ. ಒಟ್ಟು 122 ಮಹಿಳಾ ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ.
NDA ಮೈತ್ರಿಕೂಟದಲ್ಲಿ ಜೆಡಿ(ಯು) 57 ಮತ್ತು ಬಿಜೆಪಿ 48 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದು, ಮಹಾಘಟಬಂಧನ್‌ನಲ್ಲಿ ಆರ್‌ಜೆಡಿ 73 ಹಾಗೂ ಕಾಂಗ್ರೆಸ್ 24 ಸ್ಥಾನಗಳಲ್ಲಿ ಕಣಕ್ಕಿಳಿದಿದೆ. ಶಾಂತಿಯುತ ಮತದಾನಕ್ಕಾಗಿ ಚುನಾವಣಾ ಆಯೋಗ ವ್ಯಾಪಕ ಭದ್ರತಾ ವ್ಯವಸ್ಥೆಗಳನ್ನು ಕೈಗೊಂಡಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


