Monday, August 3, 2026
spot_img
More
    spot_img
    HomeBreaking Newsಜಿಟಿಡಿ ಮುನಿಸು: ದೇವೇಗೌಡರ ದೆಹಲಿ ನಿವಾಸದಲ್ಲಿ ಜೆಡಿಎಸ್‌ ನಾಯಕರ ಸಭೆ

    ಜಿಟಿಡಿ ಮುನಿಸು: ದೇವೇಗೌಡರ ದೆಹಲಿ ನಿವಾಸದಲ್ಲಿ ಜೆಡಿಎಸ್‌ ನಾಯಕರ ಸಭೆ

    ಬೆಂಗಳೂರು: ಶಾಸಕ ಜಿಟಿ ದೇವೇಗೌಡ ಮುನಿಸಿಕೊಂಡಿರುವ ಬಗ್ಗೆ ದೆಹಲಿಯಲ್ಲಿರುವ ದೇವೇಗೌಡರ ನಿವಾಸದಲ್ಲಿ ಜೆಡಿಎಸ್ ನಾಯಕರು ಸಭೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

    Advertisement

    ಹೆಚ್ .ಡಿ.ದೇವೇಗೌಡ, ಕೇಂದ್ರ ಸಚಿವ ಕುಮಾರಸ್ವಾಮಿ, ಮಾಜಿ ಸಚಿವರಾದ ಹೆಚ್‍ಡಿ ರೇವಣ್ಣ, ಸಾರಾ ಮಹೇಶ್, ಸಿ ಎಸ್ ಪುಟ್ಟರಾಜು, ಬಂಡೆಪ್ಪ ಕಾಶೆಂಪೂರ್, ನಿಖಿಲ್ ಕುಮಾರಸ್ವಾಮಿ ಸಭೆಯಲ್ಲಿ ಭಾಗವಹಿಸಿದ್ದಾರೆ ಎನ್ನಲಾಗಿದೆ.
    ಇದೇ ವೇಳೆ ಜಿಟಿ ದೇವೇಗೌಡರ ಜೊತೆ ಮಾತನಾಡುವ ಬಗ್ಗೆ ಸಾರಾ ಮಹೇಶ್ ಪ್ರಸ್ತಾಪ ಮಾಡಿದ್ದಾರೆ. ದೇವೇಗೌಡ ಹಾಗೂ ಕುಮಾರಸ್ವಾಮಿ ಮನವೊಲಿಕೆಗೆ ಸಾರಾ ಮಹೇಶ್ ಹಾಗೂ ಸಿಎಸ್ ಪುಟ್ಟರಾಜು ಯತ್ನಿಸಿದ್ದಾರೆ ಎಂದು ಮೂಲಗಳು ಹೇಳಿವೆ. ಒಂದು ಅವಕಾಶ ಕೊಡಿ, ನಾವು ಜಿಟಿ ದೇವೇಗೌಡರ ಜೊತೆ ಮಾತನಾಡುತ್ತೇವೆ ಎಂದು ಉಭಯ ನಾಯಕರು ಮನವಿ ಮಾಡಿದ್ದಾರೆ ಎನ್ನಲಾಗಿದೆ.

    ರಾಜ್ಯದಲ್ಲಿ ಕೆಲವೇ ದಿನದಲ್ಲಿ ರಾಜಕೀಯ ಭೂಕಂಪ ಸಂಭವಿಸಲಿದೆ. ಕಾಂಗ್ರೆಸ್ ಸರ್ಕಾರವೇ ಬದಲಾದ್ರೂ ಅಚ್ಚರಿ ಇಲ್ಲ ಎಂದು ಮಂಡ್ಯದಲ್ಲಿ ಮಾಜಿ ಸಚಿವ ಸಿಎಸ್ ಪುಟ್ಟರಾಜು ಭವಿಷ್ಯ ನುಡಿದಿದ್ದಾರೆ. ಕಾಂಗ್ರೆಸ್ ನಾಯಕರು ಯಾವ ಒಪ್ಪಂದ ಮಾಡಿಕೊಂಡಿದ್ದಾರೋ ಗೊತ್ತಿಲ್ಲ. ಆದರೆ, ನೂರಕ್ಕೆ ನೂರರಷ್ಟು ಕಾಂಗ್ರೆಸ್ ಬಣ್ಣ ಬಯಲಾಗುತ್ತದೆ. ರಾಜ್ಯದಲ್ಲಿ ಯಾವುದೇ ಬದಲಾವಣೆ ಆದರೂ ಅಚ್ಚರಿ ಇಲ್ಲ. ಸರ್ಕಾರವೂ ಬದಲಾಗಬಹುದು ಎಂದು ಅವರು ಹೇಳಿದ್ದಾರೆ.
    ರಾಜ್ಯ ಕಾಂಗ್ರೆಸ್‍ನಲ್ಲಿ ದೊಡ್ಡ ರಾಜಕೀಯ ಭೂಕಂಪ ಆಗಲಿದೆ. ಒಡಂಬಡಿಕೆ ವಿಚಾರದಲ್ಲೆ ಭೂಕಂಪ ಆಗಲಿದೆ. ಅದನ್ನ ನಾವು-ನೀವು ಕಾದು ನೋಡೋಣ. ಭೂಕಂಪ ಆದಾಗ ಏನ್ ಇರುತ್ತದೆ, ಏನ್ ಇರುವುದಿಲ್ಲ ಎಂದು ಹೇಳಲಾಗದು ಎಂದ ಅವರು, ಪರೋಕ್ಷವಾಗಿ ಕಾಂಗ್ರೆಸ್ ಪಕ್ಷ ಛಿದ್ರ ಛಿದ್ರವಾಗುತ್ತದೆ ಎಂದಿದ್ದಾರೆ.

    ಮತ್ತೊಂದೆಡೆ, ಜೆಡಿಎಸ್ ಮಾಜಿ ಶಾಸಕ ಅನ್ನದಾನಿ ಕೂಡ ರಾಜ್ಯ ಸರ್ಕಾರ ಹೆಚ್ಚು ದಿನ ಉಳಿಯಲ್ಲ ಎಂದಿದ್ದಾರೆ. ಒಡಂಬಡಿಕೆಯಾಗಿದೆ ಎಂದು ಡಿಸಿಎಂ ಹೇಳುತ್ತಾರೆ . ಯಾವ ಒಡಂಬಡಿಕೆಯೂ ಆಗಿಲ್ಲ ಎಂದು ಸಿಎಂ ಹೇಳುತ್ತಾರೆ. ಸಿಎಂ ಹೇಳಿಕೆಗೆ ನಗುತ್ತಾ ಡಿಸಿಎಂ ವ್ಯಂಗ್ಯವಾಡಿದ್ದಾರೆ. ನಮಗೂ ಭಾಷೆ ಬರುತ್ತದೆ, ಕನ್ನಡ ಅರ್ಥವಾಗುತ್ತದೆ. ಯಾವ ಸಮಯದಲ್ಲಿ ಯಾವ ಪದ ಉಚ್ಛಾರಣೆ ಮಾಡುತ್ತಾರೆ ಎಂಬುದು ಗೊತ್ತಿದೆ. ಅದೆಲ್ಲವನ್ನೂ ನೋಡಿದರೆ ಸಾಮರಸ್ಯ ಇಲ್ಲ ಎನ್ನುವುದು ಗೊತ್ತಾಗುತ್ತದೆ ಎಂದು ಅನ್ನದಾನಿ ಹೇಳಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading