Friday, November 6, 2026
spot_img
More
    spot_img
    HomeNational/ Internationalದೆಹಲಿ ಚಲೋ: ರೈತರ ಮೇಲೆ ಅಶ್ರುವಾಯು ಪ್ರಯೋಗಿಸಿದ ಪೊಲೀಸರು

    ದೆಹಲಿ ಚಲೋ: ರೈತರ ಮೇಲೆ ಅಶ್ರುವಾಯು ಪ್ರಯೋಗಿಸಿದ ಪೊಲೀಸರು

    ಕೇಂದ್ರ ಸರ್ಕಾರ ನೀಡಿದ್ದ ಭರವಸೆಗಳಾದ ಕನಿಷ್ಠ ಬೆಂಬಲ ಬೆಲೆ(ಎಂಎಸ್‌ಪಿ) ಕೃಷಿ ಸಾಲ ಮನ್ನಾ ಸೇರಿದಂತೆ ಇನ್ನಿತರ ಭರವಸೆಗಳನ್ನು ಎರಡು ವರ್ಷದ ಮೇಲಾದರೂ ಈಡೇರಿಸದ ಕಾರಣ ರೈತರು ಪುನಃ ʼದೆಹಲಿ ಚಲೋʼ ಹೋರಾಟ ಕೈಗೊಂಡಿದ್ದಾರೆ.

    ಪಂಜಾಬ್‌ ಮತ್ತು ಹರಿಯಾಣ ರೈತರು ದೆಹಲಿ ಚಲೋಗೆ ಕರೆಕೊಟ್ಟಿದ್ದು, ದೆಹಲಿಯತ್ತ ಹೊರಟಿದ್ದರು. ಈ ವೇಳೆ ಪಂಜಾಬ್‌ ಮತ್ತು ಹರಿಯಾಣ ನಡುವಿನ ಶಂಭುಗಡಿಯಲ್ಲಿ ಪೊಲೀಸರು ರಸ್ತೆಗೆ ಬೃಹತ್‌ ಮುಳ್ಳು ಬೇಲಿಗಳನ್ನು ಹಾಕುವ ಮೂಲಕ ರೈತರನ್ನು ತಡೆದಿದ್ದಾರೆ. ಅದನ್ನು ಲೆಕ್ಕಿಸದೇ ಮುಳ್ಳುತಂತಿ ಭೇದಿಸಲು ಮುಂದಾದ ರೈತರುಗಳ ಮೇಲೆ ಪೊಲೀಸರು ಅಶ್ರುವಾಯು ಪ್ರಯೋಗಿಸುವ ಮೂಲಕ ದರ್ಪ ಮೆರೆದಿದ್ದಾರೆ.

    ಪ್ರತಿಭಟನೆ ನಿರತ ಹಲವಾರು ರೈತ ಮುಖಂಡರುಗಳನ್ನು ವಶಕ್ಕೆ ಪಡೆದಿದ್ದಾರೆ. ಆದರೆ ಕೇಂದ್ರ ಸರ್ಕಾರ ಇದರ ಬಗ್ಗೆ ಪ್ರತಿಕ್ರಿಯಿಸಿ ಸಂಧಾನದ ಬಾಗಿಲು ಮುಚ್ಚಿವೆ ಎಂದು ಹೇಳಿದೆ.

    ಕೇಂದ್ರ ಸರ್ಕಾರ ಜಾರಿ ಮಾಡಿದ್ದ ಮೂರು ಕೃಷಿ ಕಾನೂನುಗಳನ್ನು ರದ್ದುಮಾಡುವಂತೆ ಹಾಗೂ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ 2020 ರಲ್ಲಿ ಸುಮಾರು ಒಂದು ವರ್ಷಗಳ ಕಾಲ
    ರೈತರು ಸತತ ಹೋರಾಟ ಮಾಡಿದ್ದರು.ಇದರ ಫಲವಾಗಿ ಕೇಂದ್ರ ಸರ್ಕಾರ ಆ ಕಾಯ್ದೆಗಳನ್ನು ವಾಪಸ್‌ ಪಡೆಯುವುದರ ಜೊತೆಗೆ ಕೃಷಿ ಸಾಲ ಮನ್ನಾ, ಎಂಎಸ್‌ಪಿ ಯ ಭರವಸೆಗಳನ್ನು ನೀಡಿತ್ತು.

    ಈಗ ಮೂರು ವರ್ಷ ಕಳೆದರೂ ಕೇಂದ್ರ ಸರ್ಕಾರ ತಾನು ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿರುವುದರಿಂದ ರೈತರು ದೆಹಲಿ ಚಲೋಗೆ ಕರೆ ನೀಡಿದ್ದರು. ಆದರೆ ಈಗ ರೈತರನ್ನು ಶಂಭು ಗಡಿಯಲ್ಲಿ ಪೊಲೀಸರು ತಡೆದಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search