ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿರುವ ದರ್ಶನ್ ಅಂಡ್ ಗ್ಯಾಂಗ್ ಜಾಮೀನು ಅರ್ಜಿ ವಿಚಾರಣೆಯನ್ನು ಡಿಸೆಂಬರ್.9ಕ್ಕೆ ಮುಂದೂಡಿಕೆ ಮಾಡಿ ಹೈಕೋರ್ಟ್ ಏಕ ಸದಸ್ಯ ಪೀಠ ಆದೇಶ ಹೊರಡಿಸಿದೆ.
ಇಂದು ಹೈಕೋರ್ಟ್ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕ ಸದಸ್ಯ ಪೀಠವೂ ಜಾಮೀನು ಅರ್ಜಿ ವಿಚಾರಣೆ ನಡೆಸಿ, ಡಿಸೆಂಬರ್.9ರಂದು ಮಧ್ಯಾಹ್ನ 2.30ಕ್ಕೆ ಅರ್ಜಿ ವಿಚಾರಣೆಯನ್ನು ಮುಂದೂಡಿದೆ ಮಾಡಿದೆ.
ಇಂದು ದರ್ಶನ್ ಪರ ವಕೀಲ ಸಿ.ವಿ.ನಾಗೇಶ್ ಅವರು ಸುದೀರ್ಘವಾಗಿ ವಾದವನ್ನು ಮಂಡಿಸಿದ್ದರು. ಬಳಿಕ ಕರ್ನಾಟಕ ಪೊಲೀಸರ ಪರ ವಕೀಲ ಎಸ್‌ಪಿಪಿ ಪ್ರಸನ್ನಕುಮಾರ್ ವಾದ ಆಲಿಸುತ್ತಿದ್ದ ವೇಳೆ ಕೋರ್ಟ್‌ನ ಸಮಯ ಮೀರಿದ ಕಾರಣ ಎಸ್‌ಪಿಪಿ ಪ್ರಸನ್ನ ಕುಮಾರ್ ಅವರಿಗೆ ವಾದ ಮಂಡಿಸಲು ಕಾಲಾವಕಾಶವನ್ನು ನೀಡಿ ಸೋಮವಾರ ಅರ್ಜಿ ವಿಚಾರಣೆ ನಡೆಸಲಾಗುವುದು ಎಂದು ಆದೇಶ ನೀಡಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿದ್ದ ದರ್ಶನ್ ಅನಾರೋಗ್ಯದ ಕಾರಣ ಆರು ವಾರಗಳ ಕಾಲ ಮಧ್ಯಂತರ ಜಾಮೀನಿನ ಮೇಲೆ ಹೊರಬಂದು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ರೇಣುಕಾಸ್ವಾಮಿ ಹತ್ಯೆ ಪ್ರಕರಣವಾಗಿ ರೆಗ್ಯುಲರ್ ಜಾಮೀನಿಗಾಗಿ ಹೈಕೋರ್ಟ್‌ನಲ್ಲಿ ನಿರಂತರವಾಗಿ ಜಾಮೀನು ಅರ್ಜಿ ವಿಚಾರಣೆ ನಡೆಯುತ್ತಲೇ ಇದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


