Sunday, November 1, 2026
spot_img
More
    spot_img
    HomeBreaking Newsಸಿಎಂ ಡಿಕೆ ಶಿವಕುಮಾರ್ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ…!

    ಸಿಎಂ ಡಿಕೆ ಶಿವಕುಮಾರ್ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ…!

    ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆಯೇ?. ನಾಯಕತ್ವ ಬದಲಾವಣೆ ಚರ್ಚೆಗೆ ಬ್ರೇಕ್‌ಫಾಸ್ಟ್ ಮೀಟಿಂಗ್‌ ಬಳಿಕ ತೆರೆ ಬಿದ್ದಿಲ್ಲ. ಕಾಂಗ್ರೆಸ್‌ನ ಹಿರಿಯ ನಾಯಕ, ಮಾಜಿ ಸಚಿವರ ಹೇಳಿಕೆ ಮತ್ತೆ ಚರ್ಚೆಗೆ ಕಾರಣವಾಗಿದೆ.

    ಮಧುಗಿರಿ ಶಾಸಕ, ಮಾಜಿ ಸಚಿವ ಕೆ.ಎನ್.​ರಾಜಣ್ಣ, “ಒಂದು ವೇಳೆ ಡಿ.ಕೆ.ಶಿವಕುಮಾರ್​​ ಮುಖ್ಯಮಂತ್ರಿಯಾದರೆ ನನಗೆ ಸಚಿವ ಸ್ಥಾನ ಬೇಡ, ಮತ್ತೊಬ್ಬರಿಗೆ ಅವಕಾಶ ಕೊಡಲಿ” ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

    ಮುಖ್ಯಮಂತ್ರಿ ಸಿದ್ದರಾಮಯ್ಯ ಪರಮಾಪ್ತ, ಹೈಕಮಾಂಡ್ ಆದೇಶದಂತೆ ಸಹಕಾರ ಸಚಿವ ಸ್ಥಾನವನ್ನು ಕಳೆದುಕೊಂಡಿರುವ ಕೆ.ಎನ್.ರಾಜಣ್ಣ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿದೆ. ಅದರಲ್ಲೂ ಡಿ.ಕೆ.ಶಿವಕುಮಾರ್ ಸಂಪುಟ ಎಂದು ಹೇಳುವ ಮೂಲಕ ಅವರು ಡಿ.ಕೆ.ಶಿವಕುಮಾರ್‌ಗೆ ಸಿಎಂ ಪಟ್ಟದ ಸುದ್ದಿಯ ಬಿಸಿಯನ್ನು ಇನ್ನಷ್ಟು ಹೆಚ್ಚಿಸಿದ್ದಾರೆ.

    ಕೆ.ಎನ್.ರಾಜಣ್ಣ ಅವರು, “ನನಗೆ ಅಧಿಕಾರದ ದಾಹ ಇಲ್ಲ, ಯಾವ ಸ್ಥಾನವೂ ಬೇಕಾಗಿಲ್ಲ. ನಾನು ಮೊದಲೇ ಹೇಳಿದ್ದೇನೆ. ಹಾಗಂತ ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆಂದು ಹೇಳುತ್ತಿಲ್ಲ. ಸಿಎಂ ಆಗೇ ಬಿಡುತ್ತಾರೆ ಅಂದುಕೊಂಡಿದ್ದೀರಾ?” ಎಂದು ಪ್ರಶ್ನೆ ಮಾಡಿದರು.

    ಕೆ.ಎನ್.ರಾಜಣ್ಣ ಈಗಾಗಲೇ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಅವರು ಮುಂದಿನ ಚುನಾವಣೆಗೆ ನಿಲ್ಲುವುದಿಲ್ಲ ಎಂದು ಹೇಳಿದ್ದಾರೆ. ಈ ನಡುವೆ ಸಿದ್ದರಾಮಯ್ಯ ಸಂಪುಟ ಪುನಾರಚನೆಯಾದರೆ ರಾಜಣ್ಣ ಮತ್ತೆ ಸಚಿವರಾಗುತ್ತಾರೆ ಎಂಬ ಸುದ್ದಿಗಳು ಹಬ್ಬಿದ್ದವು.

    ಆದರೆ ಈಗ ಕೆ.ಎನ್.ರಾಜಣ್ಣ ಸಿದ್ದರಾಮಯ್ಯ ಸಂಪುಟ ವಿಸ್ತರಣೆ ಇರಲಿ. ಡಿಸಿಎಂ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆದರೆ ತಮಗೆ ಸಂಪುಟದಲ್ಲಿ ಸಚಿವ ಸ್ಥಾನ ಬೇಡ ಎಂದು ಹೇಳುವ ಮೂಲಕ ಬೇರೆ ಚರ್ಚೆಯನ್ನು ಹುಟ್ಟುಹಾಕಿದ್ದಾರೆ.

    ಈಗಾಗಲೇ ಎರಡು ಬ್ರೇಕ್‌ಫಾಸ್ಟ್ ಮೀಟಿಂಗ್ ಮೂಲಕ ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಾಯಕತ್ವ ಬದಲಾವಣೆ ಚರ್ಚೆಗೆ ಫುಲ್‌ಸ್ಟಾಪ್ ಹಾಕಿದ್ದಾರೆ. ಹೈಕಮಾಂಡ್ ನಾಯಕರು ಹೇಳಿದಂತೆ ನಾವು ಕೇಳುತ್ತೇವೆ ಎಂದು ಇಬ್ಬರು ನಾಯಕರು ಘೋಷಣೆ ಮಾಡಿದ್ದಾರೆ.

    ಡಿ.ಕೆ.ಶಿವಕುಮಾರ್ ನಿವಾಸದಲ್ಲಿ ಉಪಹಾರ ಸೇವಿಸಿದ ಬಳಿಕ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ, “ಹೈಕಮಾಂಡ್‌ನವರು ಭೇಟಿಗೆ ಅವಕಾಶ ನೀಡಿದರೆ ಅವರನ್ನು ಭೇಟಿ ಮಾಡಲಾಗುವುದು. ಹೈಕಮಾಂಡ್ ಸೂಚನೆಯಂತೆ ನಡೆದುಕೊಳ್ಳುವುದಾಗಿ ಮೊನ್ನೆಯೂ ಚರ್ಚಿಸಿ ನಿರ್ಧರಿಸಿದ್ದೆವು, ಇಂದೂ ಕೂಡ ಅದನ್ನೇ ಚರ್ಚಿಸಲಾಗಿದೆ” ಎಂದು ಹೇಳಿದ್ದರು.

    “ನಮ್ಮಲ್ಲಿ ಭಿನ್ನಾಭಿಪ್ರಾಯಗಳಿಲ್ಲ. ಒಗ್ಗಟ್ಟಿನಿಂದ ಇದ್ದೇವೆ. ಸಿಎಲ್.ಪಿ ಸಭೆ ಕರೆದಾಗ ಪಕ್ಷದ ಎಲ್ಲಾ ಶಾಸಕರೂ ಒಟ್ಟಿಗೆ ಊಟಕ್ಕೆ ಸೇರುತ್ತೇವೆ. ನಾನು ಹಾಗೂ ಉಪಮುಖ್ಯಮಂತ್ರಿಗಳು ಸಹೋದರರಿದ್ದಂತೆ, ಒಂದೇ ಪಕ್ಷದಲ್ಲಿದ್ದೇವೆ. ಒಂದೇ ಸಿದ್ಧಾಂತ ನಂಬಿಕೊಂಡಿದ್ದೇವೆ” ಎಂದು ತಿಳಿಸಿದ್ದರು.

    “ಪಕ್ಷದ ವರಿಷ್ಠರ ಸೂಚನೆಯಂತೆ ಡಿ.ಕೆ.ಶಿವಕುಮಾರ್ ಮತ್ತು ನಾನು ನಮ್ಮ ಮನೆಯಲ್ಲಿ ಒಟ್ಟಿಗೆ ಉಪಹಾರ ಸೇವಿಸಿದ್ದೇವೆ. ಇತ್ತೀಚಿನ ದಿನಗಳಲ್ಲಿ ಅನಗತ್ಯವಾಗಿ ಕೆಲವು ಗೊಂದಲಗಳು ನಿರ್ಮಾಣವಾಗಿವೆ. ಅಧಿವೇಶನ ಇರುವುದರಿಂದ ಇಬ್ಬರಿಗೂ ಗೊಂದಲಗಳನ್ನು ತಿಳಿಗೊಳಿಸುವಂತೆ ಹೈಕಮಾಂಡ್‌ನವರು ಸೂಚಿಸಿದ್ದಾರೆ. ಈಗಲೂ ಯಾವ ಗೊಂದಲ ಇಲ್ಲ, ನಾಳೆಯೂ ಯಾವುದೇ ಗೊಂದಲ ಇರುವುದಿಲ್ಲ. ನಮ್ಮ ನಡುವೆ ಆಗಿರುವ ಒಪ್ಪಂದದ ಬಗ್ಗೆ ಹೈಕಮಾಂಡಿಗೆ ಮಾಹಿತಿ ನೀಡಲಾಗುವುದು” ಎಂದ ಹೇಳಿದ್ದರು.

    “ಗೊಂದಲ ಸೃಷ್ಟಿಯಾಗಿರುವುದು ಕೆಲವು ಮಾಧ್ಯಮಗಳಿಂದ. ಕೆಲವು ಶಾಸಕರು ಸಚಿವ ಸಂಪುಟ ಪುನರ್ ರಚನೆಗೆ ಸಂಬಂಧಿಸಿದಂತೆ ದೆಹಲಿಗೆ ಭೇಟಿ ನೀಡಿರಬಹುದು. ಹಾಗೆಂದು ಬೇರೆ ಅರ್ಥ ಕಲ್ಪಿಸಬೇಕಿಲ್ಲ. ಕೆಲವರು ನನ್ನ ಬಳಿ ತಾವು ಇಂತಹ ಕಾರಣಕ್ಕೆ ದೆಹಲಿಗೆ ಭೇಟಿ ನೀಡಿರುವುದಾಗಿ ತಿಳಿಸಿದ್ದಾರೆ” ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದರು.

    “ಇತ್ತೀಚೆಗೆ ಮುಖ್ಯಮಂತ್ರಿ ಹುದ್ದೆಯ ಬಗ್ಗೆ ಉಂಟಾಗಿರುವ ಗೊಂದಲಗಳಿಗೆ ಮಾಧ್ಯಮಗಳೇ ಕಾರಣ. ಬಿಜೆಪಿ, ಜೆಡಿಎಸ್ ಪಕ್ಷಗಳು ಪತ್ರಿಕೆಗಳಲ್ಲಿ ಅವಿಶ್ವಾಸ ನಿರ್ಣಯ ತೆಗೆದುಕೊಳ್ಳುವುದಾಗಿ ಹೇಳಿಕೆ ನೀಡಿದ್ದಾರೆ. ಇದು ಅಸಂಭವವಾಗಿದ್ದು, ನಾವು 142 ಜನರಿದ್ದು, ಅವರು 64 ಜನ ಮಾತ್ರ, ಜೆಡಿಎಸ್ 18 ಇದ್ದಾರೆ. ಅವರಿಬ್ಬರೂ ಸೇರಿ 82 ಜನರಾಗುತ್ತಾರೆ. ಇದೊಂದು ವಿಫಲ ಪ್ರಯತ್ನ ಎಂದು ಭಾವಿಸಿದ್ದೇನೆ” ಎಂದು ಸಿದ್ದರಾಮಯ್ಯ ಹೇಳಿದ್ದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search