Saturday, March 28, 2026
spot_img
More
    spot_img
    HomeSportsCricketಭಾರತ vs ದಕ್ಷಿಣ ಆಫ್ರಿಕಾ 3ನೇ ಏಕದಿನ ಪಂದ್ಯ: ಬರೋಬ್ಬರಿ 2 ವರ್ಷಗಳ ಬಳಿಕ ಟಾಸ್...

    ಭಾರತ vs ದಕ್ಷಿಣ ಆಫ್ರಿಕಾ 3ನೇ ಏಕದಿನ ಪಂದ್ಯ: ಬರೋಬ್ಬರಿ 2 ವರ್ಷಗಳ ಬಳಿಕ ಟಾಸ್ ಗೆದ್ದ ಭಾರತ!

    ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ವಿಶಾಖಪಟ್ಟಣದ ಎಸಿಎ-ವಿಡಿಸಿಎ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೂರನೇ ಏಕದಿನ ಪಂದ್ಯದಲ್ಲಿ ಸೆಣಸಾಟ ನಡೆಸುತ್ತಿವೆ. ಪಂದ್ಯದಲ್ಲಿ ಟಾಸ್ ಗೆದ್ದ ಭಾರತದ ನಾಯಕ ಕೆಎಲ್ ರಾಹುಲ್ ಫೀಲ್ಡಿಂಗ್ ಆರಿಸಿಕೊಂಡು ದಕ್ಷಿಣ ಆಫ್ರಿಕಾ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದಾರೆ.

    ಈ ಮೂಲಕ ಭಾರತ ತಂಡ ಬರೋಬ್ಬರಿ ಎರಡು ವರ್ಷಗಳ ಬಳಿಕ ಟಾಸ್ ಗೆದ್ದಿದೆ. ಸತತ 20 ಏಕದಿನ ಪಂದ್ಯಗಳಲ್ಲಿ ಟಾಸ್ ಸೋತಿದ್ದ ಭಾರತ ಕೊನೆಯದಾಗಿ ಟಾಸ್ ಗೆದ್ದಿದ್ದು 2023ರ ಏಕದಿನ ವಿಶ್ವಕಪ್‌ನ ಸೆಮಿಫೈನಲ್ ಪಂದ್ಯದಲ್ಲಿ. ನವೆಂಬರ್ 15ರಂದು ವಾಂಖೆಡೆಯಲ್ಲಿ ನ್ಯೂಜಿಲೆಂಡ್ ವಿರುದ್ಧದ ಪಂದ್ಯ ಇದಾಗಿತ್ತು. ಹೀಗೆ ಎರಡು ವರ್ಷಗಳ ಬಳಿಕ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ಸರಣಿ ಟಾಸ್ ಸೋಲನ್ನು ಅಂತ್ಯಗೊಳಿಸಿದೆ.

    ಇನ್ನು ಮೂರು ಪಂದ್ಯಗಳ ಏಕದಿನ ಸರಣಿ ಇದಾಗಿದ್ದು, ಮೊದಲ ಪಂದ್ಯದಲ್ಲಿ ಭಾರತ ಗೆಲುವು ದಾಖಲಿಸಿದರೆ, ಎರಡನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಗೆಲುವನ್ನು ಕಂಡಿತ್ತು. ಹೀಗಾಗಿ ಸರಣಿಯಲ್ಲಿ ಎರಡೂ ತಂಡಗಳು ಸಮಬಲ ಸಾಧಿಸಿದ್ದು, ಇಂದಿನ ಪಂದ್ಯದಲ್ಲಿ ಗೆಲ್ಲುವ ತಂಡ ಸರಣಿಯನ್ನು ವಶಪಡಿಸಿಕೊಳ್ಳಲಿದೆ.

    ಭಾರತದ ಆಡುವ ಬಳಗ: ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ರುತುರಾಜ್ ಗಾಯಕ್ವಾಡ್, ತಿಲಕ್ ವರ್ಮಾ, ಕೆಎಲ್ ರಾಹುಲ್ (ನಾಯಕ) (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಕುಲದೀಪ್ ಯಾದವ್, ಅರ್ಶದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ

    ದಕ್ಷಿಣ ಆಫ್ರಿಕಾ ಆಡುವ ಬಳಗ: ರಯಾನ್ ರಿಕೆಲ್ಟನ್, ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಟೆಂಬಾ ಬವೂಮಾ (ನಾಯಕ), ಮ್ಯಾಥ್ಯೂ ಬ್ರೀಟ್ಜ್ಕೆ, ಏಡೆನ್ ಮಾರ್ಕ್ರಮ್, ಡಿವಾಲ್ಡ್ ಬ್ರೇವಿಸ್, ಮಾರ್ಕೋ ಜ್ಯಾನ್ಸೆನ್, ಕಾರ್ಬಿನ್ ಬಾಷ್, ಕೇಶವ್ ಮಹಾರಾಜ್, ಲುಂಗಿ ಎನ್ಗಿಡಿ, ಒಟ್ನೀಲ್ ಬಾರ್ಟ್ಮನ್

    ಶಿವಮೊಗ್ಗ: ಒಂದೇ ಮನೆಯಲ್ಲಿ ತಾಯಿ, ಮಗ ನೇಣಿಗೆ ಶರಣು; ಈ ಹಿಂದೆ ಮಾವ, ಸೊಸೆಯೂ ಇದೇ ಮನೆಯಲ್ಲಿ ಆತ್ಮಹತ್ಯೆ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಬ್ರೇಕಿಂಗ್ರಾ! ಮನವಮಿ ಹಬ್ಬಕ್ಕೆ ಮಾರುಕಟ್ಟೆ ಬಂದ್ ಆಗುತ್ತಾ? ಹೂಡಿಕೆದಾರರಿಗೆ ಕ್ಲಿಯರ್ ಮಾಹಿತಿ!

    “ಸ್ಟಾಕ್ ಮಾರ್ಕೆಟ್ ಹಾಲಿಡೇ 2026” ಇದೀಗ ಹೂಡಿಕೆದಾರರಲ್ಲಿ ದೊಡ್ಡ ಗೊಂದಲ ಮೂಡಿಸಿದೆ. ರಾಮನವಮಿ ಹಬ್ಬದ ಹಿನ್ನೆಲೆಯಲ್ಲಿ ಗುರುವಾರ ಅಥವಾ ಶುಕ್ರವಾರ ಷೇರು ಮಾರುಕಟ್ಟೆ ಬಂದ್ ಆಗುತ್ತದೆಯಾ? ಎಂಬ ಪ್ರಶ್ನೆ ಟ್ರೇಡರ್‌ಗಳ ನಡುವೆ ಭಾರೀ...

    ಬ್ರೇಕಿಂಗ್! ಮಾರುಕಟ್ಟೆ ರಾಕೆಟ್—ಸೆನ್ಸೆಕ್ಸ್ 1300 ಪಾಯಿಂಟ್ ಜಿಗಿತ! ರೂಪಾಯಿ ಕುಸಿತ, ಚಿನ್ನ ಏರಿಕೆ… ಏನಿದು ಮಿಶ್ರ ಸಿಗ್ನಲ್?

    “ಸ್ಟಾಕ್ ಮಾರ್ಕೆಟ್ 24 ಮಾರ್ಚ್ 2026” ಹೂಡಿಕೆದಾರರಿಗೆ ಒಂದೇ ದಿನದಲ್ಲಿ ರೋಲರ್ ಕೋಸ್ಟರ್ ಅನುಭವ ನೀಡಿದೆ! ಒಂದೆಡೆ ಷೇರು ಮಾರುಕಟ್ಟೆ ಭರ್ಜರಿ ಏರಿಕೆ ಕಂಡಿದ್ದರೆ, ಇನ್ನೊಂದೆಡೆ ರೂಪಾಯಿ ಕುಸಿತ ಮತ್ತು ಚಿನ್ನದ ಬೆಲೆ...

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading