Friday, September 18, 2026
spot_img
More
    spot_img
    HomeStateDistrictಏಕದಿನ ರ‍್ಯಾಂಕಿಂಗ್‌ನಲ್ಲಿ 4ನೇ ಸ್ಥಾನದಲ್ಲಿರುವ ಕೊಹ್ಲಿ ನಂಬರ್ 1 ಆಗಲು ಇಂದಿನ ಪಂದ್ಯದಲ್ಲಿ ಇಷ್ಟು ರನ್...

    ಏಕದಿನ ರ‍್ಯಾಂಕಿಂಗ್‌ನಲ್ಲಿ 4ನೇ ಸ್ಥಾನದಲ್ಲಿರುವ ಕೊಹ್ಲಿ ನಂಬರ್ 1 ಆಗಲು ಇಂದಿನ ಪಂದ್ಯದಲ್ಲಿ ಇಷ್ಟು ರನ್ ಬಾರಿಸಲೇಬೇಕಿತ್ತು

    ವಿಶಾಖಪಟ್ಟಣದಲ್ಲಿ ನಡೆದ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ಭಾರತ 9 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿ ಮೂರು ಪಂದ್ಯಗಳ ಸರಣಿಯನ್ನು 2-1 ಅಂತರದಿಂದ ವಶಪಡಿಸಿಕೊಂಡಿದೆ.

    Advertisement

    ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ 47.5 ಓವರ್‌ಗಳಲ್ಲಿ 270 ರನ್ ಕಲೆಹಾಕಿ ಆಲ್‌ಔಟ್ ಆಗಿ ಭಾರತಕ್ಕೆ 271 ರನ್‌ಗಳ ಸಾಧಾರಣ ಗುರಿ ನೀಡಿತು ಈ ಗುರಿಯನ್ನು ಸುಲಭವಾಗಿ ಬೆನ್ನಟ್ಟಿದ ಭಾರತ 39.5 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 271 ರನ್ ಕಲೆಹಾಕಿತು.

    ಭಾರತದ ಪರ ಆರಂಭಿಕರಾಗಿ ಕಣಕ್ಕಿಳಿದ ರೋಹಿತ್ ಶರ್ಮಾ ಹಾಗೂ ಯಶಸ್ವಿ ಜೈಸ್ವಾಲ್ ಜೋಡಿ 155 ರನ್‌ಗಳ ಜತೆಯಾಟವನ್ನಾಡಿ ತಂಡವನ್ನು ಗೆಲುವಿನೆಡೆಗೆ ಮುಖ ಮಾಡುವಂತೆ ಮಾಡಿದರು. ರೋಹಿತ್ 75 ರನ್ ಗಳಿಸಿ ಔಟ್ ಆದರೆ. ಜೈಸ್ವಾಲ್ ಅಜೇಯ 116 ರನ್ ಬಾರಿಸಿದರು ಹಾಗೂ ವಿರಾಟ್ ಕೊಹ್ಲಿ ಅಜೇಯ 65 ರನ್ ಬಾರಿಸಿದರು.

    ಮೊದಲೆರಡು ಪಂದ್ಯಗಳಲ್ಲಿ ಶತಕ ಬಾರಿಸಿ ಅಬ್ಬರಿಸಿದ್ದ ವಿರಾಟ್ ಕೊಹ್ಲಿ ಇಂದಿನ ಪಂದ್ಯದಲ್ಲೂ ಅರ್ಧಶತಕ ಬಾರಿಸಿ ಅಜೇಯರಾಗಿ ಉಳಿದು ಸತತ ಉತ್ತಮ ಫಾರ್ಮ್‌ನಲ್ಲಿರುವ ಕೊಹ್ಲಿ ಮತ್ತೆ ಏಕದಿನ ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನಕ್ಕೇರುವತ್ತ ಮುಖ ಮಾಡಿದ್ದಾರೆ. ಸದ್ಯ ಕೊಹ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ.

    ಮೊದಲ ಎರಡು ಪಂದ್ಯಗಳಲ್ಲಿ ಉತ್ತಮ ಆಟವನ್ನಾಡಿದ ಕೊಹ್ಲಿ ಮೊದಲ ಸ್ಥಾನಕ್ಕೇರಲು ಇಂದಿನ ಪಂದ್ಯದಲ್ಲಿ 65 ರನ್ ಬಾರಿಸಬೇಕಿತ್ತು. ಅದರಂತೆ ಕೊಹ್ಲಿ ಅಷ್ಟೇ ರನ್‌ಗಳನ್ನು ಗಳಿಸಿದ್ದು, ಬುಧವಾರ ( ಡಿಸೆಂಬರ್ 10 ) ಪ್ರಕಟಗೊಳ್ಳಲಿರುವ ಹೊಸ ಐಸಿಸಿ ಏಕದಿನ ಬ್ಯಾಟಿಂಗ್ ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನದಲ್ಲಿರಲಿದ್ದಾರೆ.

    ‘ರಾಜೀನಾಮೆ ನೀಡುತ್ತೇನೆ, ನೀವು ನೀಡ್ತೀರಾ?’; ಬಿಜೆಪಿಗರಿಗೆ ಸವಾಲೆಸೆದ ಡಿಕೆಶಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading