ಬೆಂಗಳೂರು: ಸ್ಯಾಂಡಲ್ವುಡ್ ನಟಿ ರಮ್ಯಾ ಅವರು ʼಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆʼ ಎಂಬ ಚಿತ್ರದ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕಮರ್ಷಿಯಲ್ ಕೋರ್ಟ್ಗೆ ಹಾಜರಾಗಿದ್ದಾರೆ.
2023ರ ಜುಲೈ.21ರಂದು ಬಿಡುಗಡೆಯಾಗಿದ್ದ ʼಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆʼ ಎಂಬ ಚಿತ್ರದಲ್ಲಿ ನನ್ನ ಅನುಮತಿಯಿಲ್ಲದೇ ಕೆಲ ದೃಶ್ಯಗಳನ್ನು ಬಳಸಿ ನನಗೆ ನೋವುಂಟು ಮಾಡಿದ್ದಾರೆ. ಆದ್ದರಿಂದ ಆದ ನಷ್ಟವನ್ನು ನಮಗೆ ಭರಿಸಬೇಕು ಎಂದು ಚಿತ್ರ ತಂಡದ ಮೇಲೆ ಕೇಸ್ ಹಾಕಿ 1 ಕೋಟಿ ರೂ. ಪರಿಹಾರ ಕೇಳಿ ಕೋರ್ಟ್ ಮೊರೆ ಹೋಗಿದ್ದರು.
ಇದರ ಜೊತೆಗೆ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಚಿತ್ರದ ರಿಲೀಸ್ ಆಗದಂತೆ ತಡೆ ಕೋರಿ ಅರ್ಜಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಕೊನೆಯ ಕ್ಷಣದಲ್ಲಿ ರಮ್ಯಾ ಅರ್ಜಿ ವಜಾ ಮಾಡಿತ್ತು. ಬಳಿಕ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ರಿಲೀಸ್ ಆಗಿತ್ತು.
ಇಂದು ಕಮರ್ಷಿಯಲ್ ಕೋರ್ಟ್ನಲ್ಲಿ ಪ್ರಕರಣದ ವಿಚಾರಣೆ ಬಂದಿರುವ ಹಿನ್ನೆಲೆಯಲ್ಲಿ ನಟಿ ರಮ್ಯಾ ಅವರು ಹಲವು ದಾಖಲೆಗಳೊಂದಿಗೆ ಕೋರ್ಟ್ಗೆ ಹಾಜರಾಗಿದ್ದಾರೆ.
ನಿತಿನ್ ಕೃಷ್ಣಮೂರ್ತಿ ನಿರ್ದೇಶನದಲ್ಲಿ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ಮೂಡಿಬಂದಿದ್ದು, ಈ ಸಿನಿಮಾದಲ್ಲಿ ನಟಿ ರಮ್ಯಾ ಅತಿಥಿ ಪಾತ್ರದಲ್ಲಿ ನಟಿಸಿದ್ದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


