Saturday, August 8, 2026
spot_img
More
    spot_img
    HomeTop Storyಚಿಕ್ಕಮಗಳೂರು: ನಾಳೆ 6 ನಕ್ಸಲರ ಶರಣಾಗತಿ

    ಚಿಕ್ಕಮಗಳೂರು: ನಾಳೆ 6 ನಕ್ಸಲರ ಶರಣಾಗತಿ

    ಬೆಂಗಳೂರು: ಶಸ್ತ್ರಾಸ್ತ್ರಗಳ ಮೂಲಕವೇ ಸಮಾಜದಲ್ಲಿ ಸಮಾನತೆ ತರಲು ಮುಂದಾಗಿ ಚಿಕ್ಕಮಗಳೂರು, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಕಳೆದ ಹಲವು ದಶಕಗಳಿಂದ ಹೋರಾಟ ನಡೆಸುತ್ತಿದ್ದ ನಕ್ಸಲೀಯರು ನಾಳೆ ಜಿಲ್ಲಾಡಳಿತದ ಮುಂದೆ ಶರಣಾಗಲಿದ್ದಾರೆ.

    Advertisement

    ಚಿಕ್ಕಮಗಳೂರು ಜಿಲ್ಲೆಯ ಮುಂಡಗಾರು ಲತಾ, ವನಜಾಕ್ಷಿ, ದಕ್ಷಿಣ ಕನ್ನಡ ಜಿಲ್ಲೆಯ ನಕ್ಸಲ್ ನಾಯಕಿ ಸುಂದರಿ, ಕೇರಳದ ಜೀಶ, ತಮಿಳುನಾಡಿನ ವಸಂತ ಕೆ.ಅಲಿಯಾಸ್ ರಮೇಶ ಮತ್ತು ಆಂದ್ರಪ್ರದೇಶದ ಮಾರೆಪ್ಪ ಅರೋಲಿ ಸೇರಿದಂತೆ ಒಟ್ಟು ಆರು ಜನ ನಕ್ಸಲ್‍ರು ಶರಣಾಗಲಿದ್ದಾರೆ.

    ನಕ್ಸಲ್ ಪುನರ್ವಸತಿ ಸಮಿತಿ ಮುಖಂಡರು ನಕ್ಸಲೀಯರನ್ನು ಸಮಾಜದ ಮುಖ್ಯ ವಾಹಿನಿಗೆ ತರಲು ಹಲವು ದಿನಗಳಿಂದ ಹೋರಾಟ ನಡೆಸುತ್ತಲೇ ಇದ್ದರು. ಬೇಡಿಕೆಗಳನ್ನು ಈಡೇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮತಿಸಿದ ಬೆನ್ನಲ್ಲೇ ಆರು ಮಂದಿ ನಕ್ಸಲೀಯರು ಶಸ್ತ್ರಾಸ್ತ್ರಗಳನ್ನು ತೊರೆದು ಶರಣಾಗತಿಗೆ ಸಮ್ಮತಿಸಿದ್ದಾರೆ.

    ಇಂದು ಬೆಳಗ್ಗೆ 8ರಿಂದ 10 ಗಂಟೆಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿ ಮುಂದೆ ಶರಣಾಗತಿ ಕಾರ್ಯಕ್ರಮ ನಡೆಯಲಿದೆ. ವಿಶೇಷವೆಂದರೆ ನಕ್ಸಲೀಯರಾದ ಚಿಕ್ಕಮಗಳೂರು ಜಿಲ್ಲೆ ಬುಕಡಿಬೈಲ್‍ನ ಲತಾ ಬಗ್ಗೆ ಮಾಹಿತಿ ನೀಡಿದವರಿಗೆ 5 ಲಕ್ಷ, ಅದೇ ರೀತಿ ದಕ್ಷಿಣ ಕನ್ನಡ ಜಿಲ್ಲೆಯ ಕುತ್ಲೂರಿನ ಸುಂದರಿ ಬಗ್ಗೆ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ನೀಡುವುದಾಗಿ ರಾಜ್ಯ ಸರ್ಕಾರ ಘೋಷಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

    ನಾಳೆ ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಈ ಆರು ಮಂದಿ ನಕ್ಸಲೀಯರು ಶರಣಾಗಲಿದ್ದಾರೆ. ಅವರನ್ನು ಕಾಡಿನಿಂದ ನಾಡಿಗೆ ಕರೆತರಲು ನಕ್ಸಲ್ ಪುನರ್ವಸತಿ ಸಮಿತಿಯ ಮುಖಂಡರು ವಿಶೇಷ ಕಾಳಜಿ ವಹಿಸಿದ್ದಾರೆ.


    ಎಲ್ಲಿಂದ ಬಂದು ಶರಣಾಗಲಿದ್ದಾರೆ ಎಂಬ ಮಾಹಿತಿಯನ್ನು ಗೌಪ್ಯವಾಗಿ ಇಡಲಾಗಿದ್ದು, ಮೂಲಗಳ ಪ್ರಕಾರ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲ್ಲೂಕಿನ ಮೆಣಸಿನ ಹಾಡ್ಯದ ಮೂಲಕ ಕರೆತರಲಾಗುತ್ತದೆ ಎಂದು ಹೇಳಲಾಗುತ್ತದೆ. ಸರ್ಕಾರದ ಮುಂದೆ ಶರಣಾಗುವ ಮೊದಲು ನಕ್ಸಲೀಯರು ಕೆಲವು ಬೇಡಿಕೆಗಳನ್ನು ಇಟ್ಟಿದ್ದು, ಕಾಲಮಿತಿಯೊಳಗೆ ಈಡೇರಿಸಬೇಕೆಂದು ಕೋರಿದ್ದಾರೆ.

    ಈ ಸಂಬಂಧ ನಕ್ಸಲ್ ಪುನರ್ವಸತಿ ಸಮಿತಿಗೆ ಗೌಪ್ಯಪತ್ರ ಬರೆದಿರುವ ನಕ್ಸಲೀಯರು ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದು, ಇವುಗಳನ್ನು ಈಡೇರಿಸಿದರೆ ಷರತ್ತುಬದ್ಧವಾಗಿ ತಾವು ಶಸ್ತ್ರಾಸ್ತ್ರಗಳನ್ನು ತೊರೆದು ಶರಣಾಗುತ್ತೇವೆ ಎಂದು ಹೇಳಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading