Friday, August 7, 2026
spot_img
More
    spot_img
    HomeTop Storyಪರಮೇಶ್ವರ್‌ ಗ್ಯಾಂಗ್‌ ಡಿನ್ನರ್‌ ಮೀಟಿಂಗ್‌ಗೆ ಹೈಕಮಾಂಡ್‌ ಬ್ರೇಕ್

    ಪರಮೇಶ್ವರ್‌ ಗ್ಯಾಂಗ್‌ ಡಿನ್ನರ್‌ ಮೀಟಿಂಗ್‌ಗೆ ಹೈಕಮಾಂಡ್‌ ಬ್ರೇಕ್

    ಬೆಂಗಳೂರು: ಗೃಹ ಸಚಿವ ಜಿ.ಪರಮೇಶ್ವರ್‌ ಅವರು ನಾಳೆಗೆ ಕರೆದಿದ್ದ ಡಿನ್ನರ್‌ ಮೀಟಿಂಗ್‌ ರದ್ದಾಗಿದೆ.

    Advertisement

    ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರ ಸೂಚನೆ ಮೇರೆಗೆ ನಾಳೆ ಕರೆದಿದ್ದ ಡಿನ್ನರ್‌ ಮೀಟಿಂಗ್‌ ರದ್ದಾಗಿದೆ.

    ಈ ಬಗ್ಗೆ ಸ್ವತಃ ಗೃಹ ಸಚಿವ ಜಿ.ಪರಮೇಶ್ವರ್‌ ಅವರೇ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಮುಂದಿನ ದಿನಗಳಲ್ಲಿ ಸಭೆಯ ದಿನಾಂಕವನ್ನು ತಿಳಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

    ರಾಜ್ಯದಲ್ಲಿ ಡಿನ್ನರ್‌ ಮೀಟಿಂಗ್‌ ಹವಾ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಬಿಜೆಪಿ ನಾಯಕರಿಗೆ ಒಳ್ಳೆಯ ಚರ್ಚೆಯ ವಿಷಯ ಸಿಕ್ಕಂತಾಗಿದೆ.

    ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ವಿದೇಶ ಪ್ರವಾಸಕ್ಕೆ ತೆರಳಿದ ಸಂದರ್ಭದಲ್ಲೇ ಸಚಿವ ಸತೀಶ್‌ ಜಾರಕಿಹೊಳಿ ನಿವಾಸದಲ್ಲಿ ಡಿನ್ನರ್‌ ಮೀಟಿಂಗ್‌ ನಡೆದಿತ್ತು

    ಈ ಬೆನ್ನಲ್ಲೇ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರು ಕೂಡ ತಮ್ಮ ಮನೆಯಲ್ಲಿ ಡಿನ್ನರ್‌ ಮೀಟಿಂಗ್‌ ಏರ್ಪಾಡು ಮಾಡಿದ್ದರು. ಆದರೆ ಈಗ ಹೈಕಮಾಂಡ್‌ ಸೂಚನೆ ಮೇರೆಗೆ ಡಿನ್ನರ್‌ ಮೀಟಿಂಗ್‌ ರದ್ದು ಮಾಡಿದ್ದಾರೆ.

    ಈ ಎಲ್ಲಾ ಬೆಳವಣಿಗೆಯ ನಡುವೆ ರಾಜ್ಯ ಕಾಂಗ್ರೆಸ್‌ನಲ್ಲಿ ಕೊಂಚ ಬಿರುಕು ಉಂಟಾಗಿದೆ ಎಂದು ಹೇಳಲಾಗುತ್ತಿದ್ದು, ಕಾಂಗ್ರೆಸ್‌ ಹೈಕಮಾಂಡ್‌ ಮಧ್ಯ ಪ್ರವೇಶ ಮಾಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

    ಇದಕ್ಕೆ ತಾಜಾ ಉದಾಹರಣೆ ಎಂದರೆ ನಾಳೆ ಕರೆದಿದ್ದ ಡಿನ್ನರ್‌ ಮೀಟಿಂಗ್‌ ರದ್ದಾಗಿರುವುದೇ ಕಾರಣ ಎಂದು ಹೇಳಲಾಗುತ್ತಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading