ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪಕ್ಕಾ 60 ಪರ್ಸೆಂಟ್ ಕಮಿಶನ್ ಸರ್ಕಾರ. ಈ ಸರ್ಕಾರದ ಆಡಳಿತದಿಂದಾಗಿ ರಾಜ್ಯ ದಿವಾಳಿಯ ಕಡೆಗೆ ಸಾಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹಿಮಾಚಲ ಪ್ರದೇಶ ಹಾಗೂ ಕೇರಳದಂತೆಯೇ ಕರ್ನಾಟಕ ಕೂಡ ದಿವಾಳಿಯ ಕಡೆಗೆ ಹೆಜ್ಜೆ ಇಡುತ್ತಿದೆ. ಕಾಂಗ್ರೆಸ್‌ನದ್ದು ಪಕ್ಕಾ 60 ಪರ್ಸೆಂಟ್ ಕಮಿಷನ್‌ನ ಸರ್ಕಾರ. ಗುತ್ತಿಗೆದಾರರಿಗೆ ಪಾವತಿಸಲು ಸರ್ಕಾರದ ಬಳಿ ಹಣವಿಲ್ಲ. ಬಿಜೆಪಿ ಸರ್ಕಾರಕ್ಕೆ 40 ಪರ್ಸೆಂಟ್ ಎಂದು ಆರೋಪಿಸಿದ ಗುತ್ತಿಗೆದಾರರು, ಈಗ ಕಾಂಗ್ರೆಸ್ ಸರ್ಕಾರ 60% ಕಮಿಷನ್ ಸರ್ಕಾರ ಎಂದು ಹೇಳಿ ದಯಾಮರಣಕ್ಕೆ ಅರ್ಜಿ ಸಲ್ಲಿಸಲು ನೋಡುತ್ತಿದ್ದಾರೆ. ಬೆಂಗಳೂರಿನಲ್ಲಿ 30-40 ನಿವೇಶನಕ್ಕೆ 10 ಲಕ್ಷ ರೂ. 40-60 ನಿವೇಶನಕ್ಕೆ 20 ಲಕ್ಷ ರೂ, ಇದಕ್ಕೂ ಹೆಚ್ಚಿನ ನಿವೇಶನಗಳಿಗೆ 40 ಲಕ್ಷ ರೂ. ಲಂಚ ಕಮಿಷನ್ ಕೊಡಬೇಕಿದೆ ಎಂದು ದೂರಿದರು.
ಗುತ್ತಿಗೆದಾರರಿಗೆ ಸರ್ಕಾರ 32 ಸಾವಿರ ಕೋಟಿ ರೂ. ನೀಡಬೇಕಿದೆ. ಈ ಹಣ ತರಲು ಎಲ್ಲದಕ್ಕೂ ಸರ್ಕಾರ ತೆರಿಗೆ ಹಾಕುತ್ತಿದೆ. ಇಲ್ಲವಾದರೆ ಗುತ್ತಿಗೆದಾರರಿಗೆ ಕೆಲಸ ಸ್ಥಗಿತಗೊಳಿಸುತ್ತಾರೆ. ಇದರ ನಡುವೆ ಆಶಾ ಕಾರ್ಯಕರ್ತೆಯರು ಧರಣಿ ಆರಂಭಿಸಿದ್ದಾರೆ. ಜೊತೆಗೆ ತೊಗರಿ ಖರೀದಿಗೆ ಸರ್ಕಾರದ ಬಳಿ ಸ್ವಲ್ಪವೂ ಹಣವಿಲ್ಲ ಎಂದರು.
ರಾಜ್ಯ ಬಜೆಟ್‌ನಲ್ಲಿ 3.22 ಲಕ್ಷ ಕೋಟಿ ರೂ.ನಲ್ಲಿ 1.79 ಲಕ್ಷ ಕೋಟಿ ರೂ, ಅಂದರೆ 55.69% ಖರ್ಚಾಗಿದೆ. ಇನ್ನೂ 45% ಅನ್ನು ಎರಡು ತಿಂಗಳಲ್ಲಿ ಖರ್ಚು ಮಾಡಬೇಕಿದೆ. ಎಸ್‌ಸಿಎಸ್‌ಪಿಯಲ್ಲಿ 28,527.02 ಕೋಟಿ ರೂ. ಇದ್ದರೆ, 13,923 ಕೋಟಿ ರೂ. ಅಂದರೆ 48.81% ಖರ್ಚು ಮಾಡಲಾಗಿದೆ. ಟಿಎಸ್‌ಪಿಯಲ್ಲಿ 11,515.39 ಕೋಟಿ ರೂ. ಇದ್ದರೆ, 4,937.59 ಕೋಟಿ ರೂ. ಅಂದರೆ 42.88% ಖರ್ಚಾಗಿದೆ. ವಿಶೇಷ ಅಭಿವೃದ್ಧಿ ಯೋಜನೆಯಡಿ, 3,077 ಕೋಟಿ ರೂ. ಇದ್ದರೆ 1,076 ಕೋಟಿ ರೂ. ಅಂದರೆ 34% ಖರ್ಚಾಗಿದೆ. ನುಡಿದಂತೆ ನಡೆದ ಎಂದು ಹೇಳಿ ಯಾವುದೇ ಅನುದಾನ ಖರ್ಚು ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


