Monday, November 9, 2026
spot_img
More
    spot_img
    HomeStateಔತಣಕೂಟ ಏರ್ಪಾಡು ಮಾಡುತ್ತಿರುವುದೇ ಸಿದ್ದರಾಮಯ್ಯ: ಎಂಎಲ್‌ಸಿ ಎಚ್.ವಿಶ್ವನಾಥ್‌ ಹೊಸ ಬಾಂಬ್‌

    ಔತಣಕೂಟ ಏರ್ಪಾಡು ಮಾಡುತ್ತಿರುವುದೇ ಸಿದ್ದರಾಮಯ್ಯ: ಎಂಎಲ್‌ಸಿ ಎಚ್.ವಿಶ್ವನಾಥ್‌ ಹೊಸ ಬಾಂಬ್‌

    ಬೆಂಗಳೂರು: ಡಿನ್ನರ್‌ ಮೀಟಿಂಗ್‌ ರುವಾರಿಯೇ ಸಿಎಂ ಸಿದ್ದರಾಮಯ್ಯ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಹೊಸ ಬಾಂಬ್ ಸಿಡಿಸಿದ್ದಾರೆ.

    ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ವಿದೇಶ ಪ್ರವಾಸದಲ್ಲಿರುವಾಗಲೇ ಬೆಳಗಾವಿಯಲ್ಲಿ ಸಿಎಂ ಸಿದ್ದರಾಮಯ್ಯ ಡಿನ್ನರ್‌ ಮೀಟಿಂಗ್‌ ನಡೆಸಿದ್ದರು.

    ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಅವರು, ಡಿನ್ನರ್‌ ಮೀಟಿಂಗ್ ರುವಾರಿ ಸಿಎಂ ಸಿದ್ದರಾಮಯ್ಯ ಅವರೇ ಆಗಿದ್ದಾರೆ. ಔತಣಕೂಟ ಏರ್ಪಾಡು ಮಾಡುತ್ತಿರುವುದೇ ಸಿಎಂ ಸಿದ್ದರಾಮಯ್ಯ. 30 ತಿಂಗಳಿ ಆದ ಮೇಲೆ ಅಧಿಕಾರದಿಂದ ಕೆಳಗೆ ಇಳಿಯಬೇಕಲ್ಲಾ, ಅದಕ್ಕೆ ಏನೇನೋ ಆಟ ಆಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.

    ಇನ್ನು ಮುಂದುವರಿದು ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್‌ ಅವರಿಗೆ ಯಾವುದೇ ಕಾರಣಕ್ಕೂ ಸಿಎಂ ಸ್ಥಾನ ತಪ್ಪಿಸಲು ಆಗಲ್ಲ. ಡಿಕೆಶಿ ಕಾಂಗ್ರೆಸ್‌ನಲ್ಲಿ 40 ವರ್ಷದಿಂದ ಇದ್ದಾಋೆ. ಅವರು ಯಾವುದೇ ಊರಿಗೆ ಹೋದರೂ ಕಾರ್ಯಕರ್ತರನ್ನು ಗುರುತಿಸುತ್ತಾರೆ. ಆ ಕಾರ್ಯಕರ್ತರು ಈ ಸಿದ್ದರಾಮಯ್ಯಗೆ ಗೊತ್ತೇ ಇಲ್ಲ. ಸಿದ್ದರಾಮಯ್ಯ ಚಮಚ, ಚೇಲಾಗಳನ್ನು ಜೊತೆಯಲ್ಲಿ ಇಟ್ಟುಕೊಂಡು ಆಟವಾಡುತ್ತಿದ್ದಾರೆ ಎಂದು ಕಿಡಿಕಾರಿದರು.

    ಈ ಮೂಲಕ ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಅವರು, ಡಿಸಿಎಂ ಡಿ.ಕೆ.ಶಿವಕುಮಾರ್‌ ಪರ ಬ್ಯಾಟ್‌ ಬೀಸಿದ್ದು, ಮುಂದಿನ ದಿನಗಳಲ್ಲಿ ಡಿಕೆಶಿ ಸಿಎಂ ಆಗೇ ಆಗುತ್ತಾರೆ ಎಂಬ ಸುಳಿವು ನೀಡಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search