Thursday, September 3, 2026
spot_img
More
    spot_img
    HomeTop Storyಪೋಕ್ಸೋ ಪ್ರಕರಣ: ಯಡಿಯೂರಪ್ಪಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್

    ಪೋಕ್ಸೋ ಪ್ರಕರಣ: ಯಡಿಯೂರಪ್ಪಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್

    ಧಾರವಾಡ: ಅಪ್ರಾಪ್ತ ಬಾಲಕಿಗೆ ಲೈಗಿಂಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಬಿಗ್‌ ರಿಲೀಫ್‌ ನೀಡಿದೆ.

    Advertisement

    ಧಾರಾವಾಡ ಹೈಕೋರ್ಟ್‌ನಲ್ಲಿ ಜನವರಿ.17 ರಂದು ಕಾಯ್ದಿರಿಸಿದ್ದ ತೀರ್ಪನ್ನು ಇಂದು(ಫೆಬ್ರವರಿ.7) ಹೈಕೋರ್ಟ್‌ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವೂ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಜಾಮೀನು ಮಂಜೂರು ಮಾಡಲಾಗಿದೆ ಆದೇಶ ಹೊಡಿಸಿದೆ.

    ಪ್ರಕರಣದ ಹಿನ್ನೆಲೆ ಏನು?

    ಬೆಂಗಳೂರಿನ ಸದಾಶಿವನಗರದ ಪೊಲೀಸ್‌ ಠಾಣೆಯಲ್ಲಿ ಅಪ್ರಾಪ್ತ ಬಾಲಕಿಗೆ ಲೈಗಿಂಕ ಕಿರುಕುಳ ನೀಡಿದ ಆರೋಪ ಹಿನ್ನೆಲೆಯಲ್ಲಿ 2024 ಮಾಚ್‌.14 ರಂದು ಎಫ್‌ಐಆರ್‌ ದಾಖಲಿಸಿದ್ದರು. ಈ ಎಫ್‌ಐಆರ್‌ ಅನ್ನು ರದ್ದುಗೊಳಿಸುವಂತೆ ಜೂನ್‌.13 ರಂದು ಹೈಕೋರ್ಟ್‌ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಜೂನ್‌.14 ರಂದು ವಿಚಾರಣೆ ನಡೆಸಿದ್ದ ಹೈಕೋರ್ಟ್‌ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವೂ ಸಿಐಡಿ ಅಧಿಕಾರಿಗಳಿಗೆ ಬಿಎಸ್‌ವೈ ಅವರನ್ನು ಬಂಧಿಸದಂತೆ ಸೂಚಿಸಿತ್ತು.

    ಇನ್ನೂ ಈ ವಿಚಾರಕ್ಕೆ ಸಂಬಂಧಿಸಿದಂತೆ 2025ರ ಜನವರಿ.17 ರಂದು ಅಂತಿಮವಾಗಿ ವಿಚಾರಣೆ ನಡೆಸಿದ ಹೈಕೋರ್ಟ್‌ ವಾದ-ಪ್ರತಿವಾದಗಳನ್ನು ಆಲಿಸಿದ ಬಳಿಕ ತೀರ್ಪನ್ನು ಕಾಯ್ದಿರಿಸಲಾಗಿತ್ತು. ಆದರೆ ಇದೀಗ ಈ ವಿಚಾರದಲ್ಲಿ ಅಂತಿಮಗೊಳಿಸಿ ಬಿಎಸ್‌ವೈಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಬಿಗ್‌ ರಿಲೀಫ್‌ ನೀಡಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading