ಬೆಂಗಳೂರು: ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಸಿಬಿಐ ತನಿಖೆ ಅರ್ಜಿ ನಿರಾಕರಿಸಿ ಹೈಕೋರ್ಟ್ ನೀಡಿರುವ ತೀರ್ಪು ಸ್ವಾಗತಾರ್ಹವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಸತಗೊಂಡಿದ್ದಾರೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರೂ ಆಗಿರುವ ಶಾಸಕ ಎ.ಎಸ್.ಪೊನ್ನಣ್ಣ ತಿಳಿಸಿದ್ದಾರೆ.
ಗೃಹಕಚೇರಿ ಕಾವೇರಿಯಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೂರುದಾರ ಸ್ನೇಹಮಯಿ ಕೃಷ್ಣ ಹೈಕೋರ್ಟ್‍ಗೆ ಸಲ್ಲಿಸಿದ್ದ ಅರ್ಜಿಯಲ್ಲಿ ಮೂರು ವಿಚಾರಗಳನ್ನು ಪ್ರಸ್ತಾಪಿಸಿದ್ದರು. ಲೋಕಾಯುಕ್ತ ಸಂಸ್ಥೆಯ ಸ್ವಾತಂತ್ರ್ಯದ ಬಗ್ಗೆ , ಲೋಕಾಯುಕ್ತ ತನಿಖೆಯ ಬಗ್ಗೆ ಹಾಗೂ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕಾದ ಅನಿವಾರ್ಯತೆ ಬಗ್ಗೆ ವಿವರಿಸಿದರು. ಅವೆಲ್ಲದಕ್ಕೂ ನ್ಯಾಯಮೂರ್ತಿಗಳು ಉತ್ತರ ನೀಡಿದ್ದಾರೆ ಎಂದು ಹೇಳಿದರು.
ಲೋಕಾಯುಕ್ತ ಸ್ವತಂತ್ರ ತನಿಖಾ ಸಂಸ್ಥೆ ಎಂದು ನ್ಯಾಯಮೂರ್ತಿಗಳು ಬಲವಾಗಿ ಪ್ರತಿಪಾದಿಸಿದ್ದಾರೆ. ಈಗ ನಡೆದಿರುವ ತನಿಖೆಯು ತೃಪ್ತಿಕರವಾಗಿದೆ ಹಾಗೂ ಸಿಬಿಐಗೆ ವಹಿಸಲು ಪೂರಕ ಅಂಶಗಳಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಈ ತೀರ್ಪು ಸ್ವಾಗತಾರ್ಹ ಎಂದು ಪೆÇನ್ನಣ್ಣ ಅಭಿಪ್ರಾಯಪಟ್ಟರು.
ಕಾನೂನಾತ್ಮಕ ಪ್ರಕ್ರಿಯೆಗಳಲ್ಲಿ ಎಲ್ಲರಿಗೂ ಭಾಗವಹಿಸಲು ಅವಕಾಶವಿದೆ. ಸಿಬಿಐ, ಜಾರಿನಿರ್ದೇಶನಾಲಯದಂತಹ ತನಿಖಾ ಸಂಸ್ಥೆಗಳನ್ನು ರಾಜಕೀಯಕ್ಕೆ ಬಳಸುವುದನ್ನು ನಾವು ಮೊದಲಿನಿಂದಲೂ ಖಂಡಿಸುತ್ತಾ ಬಂದಿದ್ದೇವೆ. ಉಳಿದಂತೆ ಯಾವುದೇ ತನಿಖೆಯಲ್ಲಿ ಅಥವಾ ಕಾನೂನು ಪ್ರಕ್ರಿಯೆಯಲ್ಲಿ ಯಾರು ಹಸ್ತಕ್ಷೇಪ ಮಾಡುತ್ತಿಲ್ಲ ಎಂದರು.
ಮುಡಾ ಪ್ರಕರಣದಲ್ಲಿ ತನಿಖೆಗೆ ರಾಜ್ಯಪಾಲರು ನೀಡಿರುವ ಪೂರ್ವಾನುಮತಿಯನ್ನು ಪ್ರಶ್ನಿಸಿ, ಸಲ್ಲಿಸಲಾಗಿರುವ ಮೇಲ್ಮನವಿ ಕುರಿತು ಹೈಕೋರ್ಟ್ ವಿಭಾಗೀಯ ಪೀಠ ಇನ್ನು ತೀರ್ಪು ನೀಡಿಲ್ಲ. ಸಿಬಿಐ ತನಿಖೆಗೆ ಕೋರಿದ್ದ ಅರ್ಜಿಗೆ ಸಂಬಂಧಪಟ್ಟಂತೆ ಮಾತ್ರ ಹೈಕೋರ್ಟ್ ಏಕಸದಸ್ಯ ಪೀಠ ಇಂದು ತೀರ್ಪು ನೀಡಿದೆ. ಲೋಕಾಯುಕ್ತ ತನಿಖೆ ಕೂಡ ಇನ್ನು ಪೂರ್ಣಗೊಂಡಿಲ್ಲ ಎಂದು ಅವರು ವಿವರಿಸಿದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


