ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ಮಹಿಳೆಯರ ಸಬಲೀಕರಣಕ್ಕೆ ವಿವಿಧ ಯೋಜನೆಗಳನ್ನು ಘೋಷಿಸಿದ್ದಾರೆ. ಮಹಿಳಾ ಸಬಲೀಕರಣಕ್ಕೆ ಬಜೆಟ್‌ನಲ್ಲಿ ಕೆಲ ಯೋಜನೆಗಳನ್ನು ಘೋಷಿಸಲಾಗಿದೆ. ಇದರಲ್ಲಿ ಅಕ್ಕ ಕೋ ಆಪರೇಟಿವ್ ಸೊಸೈಟಿ, ಅಕ್ಕ ಕ್ಯಾಂಟೀನ್ ಗಳನ್ನು ಸ್ಥಾಪಿಸಲಾಗುವುದು ಎಂದು ಸಿದ್ದರಾಮಯ್ಯ ತಮ್ಮ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ.ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ 28,608 ಕೋಟಿ ರೂ ಹಾಗೂ ₹10,100 ಕೋಟಿ ಅನುದಾನ ನೀಡಲಾಗಿದೆ. 2025-26ರ ಸಾಲಿನ ವರ್ಷಕ್ಕೆ ಮೀಸಲಿರಿಸಲಾಗಿದೆ.ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಕಚೇರಿಗಳಲ್ಲಿ ಅಕ್ಕ ಕೆಫೆಗಳನ್ನು ತೆರೆಯಲು ಸರ್ಕಾರ ಯೋಜನೆ ರೂಪಿಸಿದೆ.’ಗೃಹಲಕ್ಷ್ಮಿ’ ಯೋಜನೆಯ ಯಜಮಾನಿಯರನ್ನು ಸ್ವಸಹಾಯ ಗುಂಪುಗಳ ಸದಸ್ಯರುಗಳನ್ನಾಗಿಸಿ ರಾಜ್ಯಮಟ್ಟದ ‘ಅಕ್ಕ ಕೋ-ಆಪರೇಟಿವ್ ಸೊಸೈಟಿ’ ವ್ಯಾಪ್ತಿಗೆ ತರಲಾಗುವುದು.ರಾಜ್ಯದ ವಿವಿಧೆಡೆ 16 ಹೊಸ ಮಹಿಳಾ ಕಾಲೇಜುಗಳನ್ನು ಸ್ಥಾಪಿಸಲಾಗುವುದು ಎಂದು ಬಜೆಟ್‌ನಲ್ಲಿ ಘೋಷಿಲಾಗಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


