Tuesday, August 11, 2026
spot_img
More
    spot_img
    HomeLatest newsಪತ್ರಕರ್ತರಿಗಾಗಿ ‘ಮಾಧ್ಯಮ ಸಂಜೀವಿನಿ’ ಆರೋಗ್ಯ ಯೋಜನೆ ಘೋಷಿಸಿದ ಸಿಎಂ!

    ಪತ್ರಕರ್ತರಿಗಾಗಿ ‘ಮಾಧ್ಯಮ ಸಂಜೀವಿನಿ’ ಆರೋಗ್ಯ ಯೋಜನೆ ಘೋಷಿಸಿದ ಸಿಎಂ!

    ತುಮಕೂರಿನಲ್ಲಿ ನಡೆದ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ನೀಡಿದ್ದ ಭರವಸೆಯಂತೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ಮಾಧ್ಯಮ ಸಂಜೀವಿನಿ ಆರೋಗ್ಯ ಯೋಜನೆ ಘೋಷಿಸಿದ್ದಕ್ಕೆ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಧನ್ಯವಾದ ತಿಳಿಸಿದ್ದಾರೆ.ಈ ಸಂದರ್ಭದಲ್ಲಿ, ನಿವೃತ್ತ ಪತ್ರಕರ್ತರ ಮಾಸಾಶನವನ್ನು ₹12,000 ರಿಂದ ₹15,000ಕ್ಕೆ ಮತ್ತು ಅವಲಂಬಿತರ ಭತ್ಯೆಯನ್ನು ₹6,000 ರಿಂದ ₹7,500ಕ್ಕೆ ಹೆಚ್ಚಿಸಿರುವುದು ಹರ್ಷದಾಯಕ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.ಸಂಘದ ಹಕ್ಕೊತ್ತಾಯಕ್ಕೆ ಸ್ಪಂದಿಸಿ ಈ ನಿರ್ಧಾರಗಳನ್ನು ಕೈಗೊಂಡ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಹಾಗೂ ವಾರ್ತಾ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರಿಗೆ ತಗಡೂರು ಕೃತಜ್ಞತೆ ಸಲ್ಲಿಸಿದರು.ಈ ಆರೋಗ್ಯ ಯೋಜನೆಯನ್ನು ಕೇವಲ ಮಾಧ್ಯಮ ಮಾನ್ಯತೆ ಪಡೆದ ಪತ್ರಕರ್ತರಿಗೆ ಮಾತ್ರ ಸೀಮಿತ ಮಾಡದೆ, ರಾಜ್ಯದ ಎಲ್ಲಾ ಪತ್ರಕರ್ತರಿಗೆ ವಿಸ್ತರಿಸಲು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಒತ್ತಾಯಿಸಿದೆ.

    Advertisement

    ಪತ್ರಕರ್ತರಿಗಾಗಿ ವಿಮಾ ಯೋಜನೆ: ರಾಜ್ಯದ ಮಾಧ್ಯಮ ಮಾನ್ಯತೆ ಪಡೆದ ಒಟ್ಟು 2,500 ಪತ್ರಕರ್ತರು ಹಾಗೂ ಅವರ ಅವಲಂಬಿತ ಕುಟುಂಬ ಸದಸ್ಯರಿಗೆ 5 ಲಕ್ಷ ರೂ.ವರೆಗೆ ನಗದುರಹಿತ ಚಿಕಿತ್ಸೆ ನೀಡುವ ‘ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ’ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading