Saturday, September 19, 2026
spot_img
More
    spot_img
    HomeLatest newsಅಧಿಕಾರ ಇದ್ದಾಗ ನವರಂಗಿ ಆಟ; ಬಿಎಸ್‌ವೈ ವಿಡಿಯೊ ಹಂಚಿಕೊಂಡು‌ ಸಿದ್ದು ಕುಟುಕಿದ ಅಶೋಕ್

    ಅಧಿಕಾರ ಇದ್ದಾಗ ನವರಂಗಿ ಆಟ; ಬಿಎಸ್‌ವೈ ವಿಡಿಯೊ ಹಂಚಿಕೊಂಡು‌ ಸಿದ್ದು ಕುಟುಕಿದ ಅಶೋಕ್

    ಬೆಂಗಳೂರು: ಅಧಿಕಾರ ಇದ್ದಾಗ ನವರಂಗಿ ಆಟ, ವಿರೋಧ ಪಕ್ಷದಲ್ಲಿದ್ದಾಗ ಗೋಸುಂಬೆ ನಾಟಕ, ಅಧಿಕಾರ ಇದ್ದಾಗ ಹಗಲುವೇಷ, ವಿರೋಧ ಪಕ್ಷದಲ್ಲಿದ್ದಾಗ ರೋಷಾವೇಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

    Advertisement

    2019ರಲ್ಲಿ ರಾಜ್ಯ ಸಾರಿಗೆ ಸಂಸ್ಥೆಗಳ ನೌಕರರು ವೇತನ ಪರಿಷ್ಕರಣೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ ವೇಳೆ ಅಂದಿನ ಪ್ರತಿಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ ಅವರು ಅಂದಿನ ಸಿಎಂ ಬಿ. ಎಸ್. ಯಡಿಯೂರಪ್ಪ ವಿರುದ್ಧ ಟೀಕಾಪ್ರಹಾರ ನಡೆಸಿದ ವಿಡಿಯೋ ಹಂಚಿಕೊಂಡಿರುವ ಆರ್. ಅಶೋಕ್, ಸಾರಿಗೆ ನೌಕರರ ಸಮಸ್ಯೆ ಇತ್ಯರ್ಥಪಡಿಸುವುದಾಗಿ ಪುಂಖಾನುಪುಂಖ ಹೇಳಿಕೆ ಕೊಟ್ಟಿದ್ದ ಸಿದ್ದರಾಮಯ್ಯನವರ ಬದ್ಧತೆ ಈಗೆಲ್ಲಿ ಹೋಯಿತು ಎಂದು ಪ್ರಶ್ನಿಸಿದ್ದಾರೆ.

    ಅಧಿಕಾರ ಯಾರಿಗೂ ಶಾಶ್ವತ ಅಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ. ನಿಮ್ಮ ದಿವಾಳಿತನಕ್ಕೆ ಸಾರಿಗೆ ನೌಕರರು ಎಷ್ಟು ದಿನ ನಷ್ಟ ಅನುಭವಿಸಬೇಕು? ನಿಮ್ಮ ದುರಾಡಳಿತಕ್ಕೆ ಜನಸಾಮಾನ್ಯರು ಯಾಕೆ ದಿನನಿತ್ಯ, ಪರದಾಡಬೇಕು? ಸಾಕು ಮಾಡಿ ಈ ನಾಟಕ, ರಾಜೀನಾಮೆ ಕೊಟ್ಟು ಕರ್ನಾಟಕವನ್ನು ಉಳಿಸಿ, ಕನ್ನಡಿಗರನ್ನು ನೆಮ್ಮದಿಯಾಗಿರಲು ಬಿಡಿ.’ ಎಂದು ಟೀಕಿಸಿದ್ದಾರೆ. ಹಿಂದಿನ ಸಾರಿಗೆ ನೌಕರರ ಮುಷ್ಕರ ವೇಳೆ ಸಿದ್ದರಾಮಯ್ಯ ಅವರು ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಅಧಿಕಾರ ಯಾರಿಗೂ ಶಾಶ್ವತ ಅಲ್ಲ ಎಂದು ಕುಟುಕಿದ್ದರು.

    ಧರ್ಮಸ್ಥಳ: ಮತ್ತೆ ಎಸ್‌ಐಟಿ ಅಧಿಕಾರಿಗಳನ್ನು ಗುಡ್ಡ ಹತ್ತಿಸಿದ ಅನಾಮಿಕ; ಇಂದು ಎಷ್ಟು ಅಸ್ತಿಪಂಜರ?

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading