ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆಯು (ಐಬಿಪಿಎಸ್) ಕ್ಲರಿಕಲ್ ಕೇಡರ್ ಹುದ್ದೆಗಳ ನೇಮಕಾತಿಗಾಗಿ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಅಧಿಸೂಚನೆ ಹೊರಡಿಸಿದೆ. ಈ ಬಾರಿ ಬರೋಬ್ಬರಿ 10,227 ಹುದ್ದೆಗಳಿಗೆ ಅಧಿಸೂಚನೆ ಪ್ರಕಟಿಸಿದೆ. ಕರ್ನಾಟಕಕ್ಕೆ 1,170 ಹುದ್ದೆಗಳನ್ನು ಮೀಸಲಿಡಲಾಗಿದೆ.
ರಾಜ್ಯದಲ್ಲಿ ಅತೀ ಹೆಚ್ಚು ಎಂದರೆ 625 ಹುದ್ದೆಗಳಿಗೆ ಕೆನರಾ ಬ್ಯಾಂಕ್ ನೇಮಕಾತಿ ಮಾಡಿಕೊಂಡರೆ, ಬ್ಯಾಂಕ್ ಆಫ್ ಬರೋಡಾ 253 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಿವೆ. ಅಲ್ಲದೇ ಇಂಡಿಯನ್ ಓವರ್ ಸೀಸ್ ಬ್ಯಾಂಕ್, ಯುಕೋ ಬ್ಯಾಂಕ್, ಬ್ಯಾಂಕ್ ಆಫ್ ಇಂಡಿಯಾ, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಬ್ಯಾಂಕ್ ಆಫ್ ಮಹಾರಾಷ್ಟ್ರ, ಇಂಡಿಯನ್ ಬ್ಯಾಂಕ್, ಪಂಜಾಬ್ ಮತ್ತು ಸಿಂದ್ ಬ್ಯಾಂಕ್ ಗಳಿಗೆ ನೇಮಕಾತಿ ನಡೆಯಲಿದೆ.
ಆ.1 ರಿಂದಲೇ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆ.21ರಂದು ಕೊನೆಯ ದಿನಾಂಕ. ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ ಕ್ರಮವಾಗಿ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆ ನಡೆಯ ಲಿದ್ದು, ಕನ್ನಡ ಸೇರಿದಂತೆ ವಿವಿಧ ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ
ಬರೆಯಲು ಅವಕಾಶ ನೀಡಲಾಗಿದೆ. ಎಸ್‌ಸಿ, ಎಸ್‌ಟಿ ಮತ್ತು ಮೀಸಲು ವ್ಯಾಪ್ತಿಗೆ ಒಳಪಡುವ ಅಭ್ಯರ್ಥಿಗಳಿಗೆ ಐಬಿಪಿಎಸ್ ವತಿಯಿಂದ ಪರೀಕ್ಷಾ ಪೂರ್ವ ತರಬೇತಿ ಯನ್ನೂ ನೀಡಲಾಗುತ್ತದೆ. ಯಾವುದೇ ವಿಷಯದ ಪದವೀಧರರು 20ರಿಂದ 28 ವರ್ಷ ವಯಸ್ಸಿನ ಒಳಗಿರುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ವೆಬ್‌ಸೈಟ್ http://www.ibps.in.
ಧರ್ಮಸ್ಥಳದಲ್ಲಿ ಯುಟ್ಯೂಬರ್ಸ್ ಮೇಲೆ ಹಲ್ಲೆ ಪ್ರಕರಣ; ಓರ್ವ ಆರೋಪಿಯ ಬಂಧನ
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


