ನವದೆಹಲಿ: ಬಿಹಾರದಲ್ಲಿನ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವೇಳೆ 65 ಲಕ್ಷ ಮತದಾರರ ಹೆಸರನ್ನು ತೆಗೆದಿರುವ ಸಂಬಂಧ ಪ್ರತಿಕ್ರಿಯೆ ನೀಡುವಂತೆ ಭಾರತೀಯ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.
ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಸಲ್ಲಿಸಿದ್ದ ಸಲ್ಲಿಸಿದ್ದ ಅರ್ಜಿ ಹಿನ್ನೆಲೆಯಲ್ಲಿ ಆಯೋಗಕ್ಕೆ ಸುಪ್ರೀಂಕೋರ್ಟ್ ಈ ನಿರ್ದೇಶನ ನೀಡಿದೆ.
ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿ ಉಜ್ಜಲ್ ಭುಯಾನ್, ನ್ಯಾಯಮೂರ್ತಿ ಎನ್.ಕೆ.ಸಿಂಗ್ ಅವರನ್ನು ಒಳಗೊಂಡ ಪೀಠವು ಈ ನಿರ್ದೇಶನ ನೀಡಿದೆ. ಬಿಹಾರದಲ್ಲಿ ಎಸ್‌ಐಟಿ ತನಿಖೆ ನಡೆಸಿದ ಬಳಿಕ ಮತದಾರರ ಪಟ್ಟಿಯಿಂದ ತೆಗೆಯಲಾದ 65 ಲಕ್ಷ ಹೆಸರುಗಳಲ್ಲಿ ಮೃತರು ಯಾರು, ವಲಸೆ ಹೋದವರು ಯಾರು ಎಂಬುದನ್ನು ಚುನಾವಣಾ ಆಯೋಗ ತಿಳಿಸಬೇಕು ಎಂಬುದಾಗಿ ಎಡಿಆರ್ ತನ್ನ ಅರ್ಜಿಯಲ್ಲಿ ಉಲ್ಲೇಖಿಸಿದೆ.
ಚೀನಾದಲ್ಲಿ ಉಲ್ಬಣಗೊಂಡ ಚಿಕುನ್ ಗುನ್ಯಾ
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


