ಬೆಂಗಳೂರು: ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಒಂದೂವರೆ ಲಕ್ಷ ಮೆಟ್ರಿಕ್ ಟನ್ ಗೊಬ್ಬರ ಪೂರೈಕೆಯಾಗಬೇಕಿದೆ. ಗೊಬ್ಬರ ಪೂರೈಕೆ ಮಾಡುವವರೆಗೂ ರಾಜ್ಯದಲ್ಲಿನ ರಸಗೊಬ್ಬರದ ಸಮಸ್ಯೆ ನೀಗುವುದಿಲ್ಲ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಹೇಳಿದರು.
ಈ ಕುರಿತು ವಿಧಾನಸೌಧದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೊಬ್ಬರದ ಸಮಸ್ಯೆ ಇದ್ದರೂ ರೈತರಿಗೆ ತೊಂದರೆಯಾಗದಂತೆ ನೋಡಿಕೊಳ್ಳುತ್ತಿದ್ದೇನೆ. ಕೇಂದ್ರದಿಂದ ರಾಜ್ಯಕ್ಕೆ ಒಂದೂವರೆ ಲಕ್ಷ ಮೆಟ್ರಿಕ್ ಟನ್ ಗೊಬ್ಬರ ಬರಬೇಕಿದೆ. ಇದಕ್ಕೆ ಯಾರ ಜವಾಬ್ದಾರರು? ಎಂದು ಪ್ರಶ್ನಿಸಿದರು.
ರಾಜ್ಯದ ರಸಗೊಬ್ಬರದ ಸಮಸ್ಯೆ ಬಗೆಹರಿಸಲು ಜೆ.ಪಿ.ನಡ್ಡಾ ಅವರಲ್ಲಿ ಸಮಯಾವಕಾಶ ಕೇಳಿದ್ದೆ. ಆದರೆ ಮೊನ್ನೆ ಅವರು ಖಾಸಗಿ ಕಾರ್ಯಕ್ರಮದ ನಿಮಿತ್ತ ರಾಜ್ಯಕ್ಕೆ ಬಂದರೂ ಅವಕಾಶ ಕೊಟ್ಟಿಲ್ಲ. ಎರಡು ನಿಮಿಷ ಸಮಯ ಕೊಡಬಹುದಿತ್ತು. ಏರ್‌ಪೋರ್ಟ್‌ನಲ್ಲಾದರೂ ಅವಕಾಶ ಕೊಡಬಹುದಿತ್ತು. ದೆಹಲಿಯಲ್ಲಿ ಅಧಿಕೃತ ಭೇಟಿಗೂ ಅವಕಾಶ ಕೊಡುತ್ತಿಲ್ಲ ಎಂದು ದೂರಿದರು.
ಈಗ ಬಿಜೆಪಿಯವರು ನನ್ನ ರಾಜೀನಾಮೆಯನ್ನು ಕೇಳುತ್ತಿದ್ದಾರೆ. ಗೊಬ್ಬರ ಕೊಡದಿರುವ ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರಿಂದ ರಾಜೀನಾಮೆ ಕೊಡಿಸ್ತಾರಾ? ವಿಪಕ್ಷ ನಾಯಕ ಅಶೋಕ್ ಅವರಿಗೆ ಆ ತಾಕತ್ತು ಇದೆಯೇ ಎಂದು ಪ್ರಶ್ನಿಸಿದರು.
ಇನ್ನು ಚಿಕ್ಕಬಳ್ಳಾಪುರದಲ್ಲಿ ಗುತ್ತಿಗೆ ಚಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ಸಂಪೂರ್ಣ ಮಾಹಿತಿ ಗೊತ್ತಿಲ್ಲದೇ ಮಾತಾಡಬಾರದು. ಗೃಹ ಸಚಿವರು ಇದ್ದಾರೆ. ಅವರು ಅದನ್ನು ನೋಡಿಕೊಳ್ಳುತ್ತಾರೆ ಎಂದು ಹೇಳಿದರು.
ಮಂಡ್ಯ: ದೇವಸ್ಥಾನದಲ್ಲಿ ಕಳ್ಳತನ ಮಾಡಿ ಅನ್ಯಧರ್ಮದ ಚಿಹ್ನೆ ಬರೆದು ಪರಾರಯಾದ ಕಿಡಿಗೇಡಿಗಳು
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


