ಬೆಂಗಳೂರು: ನಗರದ ಹೆಬ್ಬಾಳ ಮೇಲೇತುವೆ ಕಾಮಗಾರಿ ಪರಿಶೀಲನೆ ವೇಳೆ ಡಿಸಿಎಂ ಡಿ.ಕೆ. ಶಿವಕುಮಾರ್ ಸವಾರಿ ಮಾಡಿದ್ದ ದ್ವಿಚಕ್ರ ವಾಹನದ ಮಾಲೀಕರ ಮೇಲೆ 18,500 ರೂ. ದಂಡ ಬಾಕಿ ಇರುವುದು ಬೆಳಕಿಗೆ ಬಂದಿದೆ.
ಕೆಎ04ಜೆಜಡ್2087 ಸಂಖ್ಯೆಯ ವಾಹನದ ಸವಾರ 2020ರಿಂದ 34 ಬಾರಿ ಸಂಚಾರ ನಿಯಮ ಉಲ್ಲಂಘನೆ ಮಾಡಿರುವುದು ಸಂಚಾರ ಪೊಲೀಸ್ ಇಲಾಖೆಯ ದತ್ತಾಂಶಗಳಿಂದ ತಿಳಿದುಬಂದಿದೆ.
ಬಿಡಿಎ ವತಿಯಿಂದ ಹೆಬ್ಬಾಳ ಜಂಕ್ಷನ್ ನಲ್ಲಿ ನಿರ್ಮಿಸುತ್ತಿರುವ ಹೊಸ ಮೇಲೇತುವೆ ಕಾಮಗಾರಿ ವೀಕ್ಷಿಸಲು ಮಂಗಳವಾರ ಬೆಳಗ್ಗೆ ಶಿವಕುಮಾರ್ ಅವರು ಅಧಿಕಾರಿಗಳೊಂದಿಗೆ ಬಂದಿದ್ದರು. ಅರ್ಧ ಹೆಲೈಟ್ ಹಾಕಿಕೊಂಡು ಡಿಯೋ ಸ್ಕೂಟರ್‌ನಲ್ಲಿ ಒಂದು ಸುತ್ತು ಹಾಕಿದ್ದರು. ಈ ವೇಳೆ ಸಚಿವ ಬೈರತಿ ಸುರೇಶ್ ಕೂಡ ಹಾಫ್ ಹೆಮ್ಮೆಟ್ ಧರಿಸಿದ್ದರು.
ಐಎಸ್‌ಐ ಗುರುತು ಇಲ್ಲದ, ಗುಣಮಟ್ಟವಲ್ಲದ ಹೆಮ್ಮೆಟ್ ಧರಿಸಿ ಡಿಸಿಎಂ ನಿಯಮ ಉಲ್ಲಂಘಿಸಿದ್ದಾರೆ. ಅಲ್ಲದೆ ಅವರ ಹಿಂದೆಯೇ ಮತ್ತೊಂದು ಸ್ಕೂಟರ್‌ನಲ್ಲಿ ಬರುತ್ತಿದ್ದ ಶಾಸಕ ಎನ್.ಎ. ಹ್ಯಾರೀಸ್ ಅವರು ಹೆಮ್ಮೆಟ್ ಧರಿಸದಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.
ಬೆಂಗಳೂರಿನಲ್ಲಿ ನಾಳೆ ರಾಹುಲ್ ಗಾಂಧಿ ಪ್ರತಿಭಟನೆ
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


