ಬೆಂಗಳೂರು: ಚುನಾವಣೆ ವೇಳೆ ಮತ ಕಳ್ಳತನ ಆರೋಪ ಮಾಡಿರುವ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಸಲು ಉದ್ದೇಶಿಸಿರುವ ಪ್ರತಿಭಟನಾ ಸಭೆಯನ್ನು ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ರಾಜ್ಯ ಕಾಂಗ್ರೆಸ್ ಬರದ ಸಿದ್ಧತೆ ನಡೆಸಿದೆ.
ಬುಧವಾರ ಸ್ವೀನ್ಸ್ ರಸ್ತೆಯ ಕಾಂಗ್ರೆಸ್ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಸೇರಿ ದಂತೆ ಸಚಿವರು, ಶಾಸಕರು ಪೂರ್ವಭಾವಿ ಸಭೆ ನಡೆಸಿದರು.
ಶುಕ್ರವಾರ ಫ್ರೀಡಂ ಪಾರ್ಕ್ ನಲ್ಲಿ ಬೆಳಗ್ಗೆ 10.30ಕ್ಕೆ ಪ್ರತಿಭಟನಾ ಸಭೆ ಶುರುವಾಗಲಿದೆ.
ಸಚಿವರು, ಶಾಸಕರು ಕಾರ್ಯಕರ್ತರನ್ನು ಕರೆತರಬೇಕು. ಉಳಿದ ಜಿಲ್ಲೆಯ ಶಾಸಕರು, ಸಚಿವರು, ಡಿಸಿಸಿ ಪದಾಧಿಕಾರಿಗಳು, ವಿವಿಧ ಘಟಕ ಮುಖಂಡರು ಕಡ್ಡಾಯವಾಗಿ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಪಣತೊಟ್ಟಿದ್ದಾರೆ.
ಈ ವೇಳೆ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಡಿ.ಕೆ. ಶಿವಕುಮಾರ್, ಮತಗಳ್ಳತನ ವಿಚಾರವನ್ನು ರಾಹುಲ್ ಗಾಂಧಿ ಗಂಭೀರವಾಗಿ ಪರಿಗಣಿಸಿದ್ದು, ಮತದಾರರ ಹಕ್ಕಿನ ರಕ್ಷಣೆ ಮಾಡುವುದು ರಾಜಕೀಯ ಪಕ್ಷಗಳ ಕರ್ತವ್ಯವಾಗಿದೆ. ಚುನಾವಣೆ ವೇಳೆ ಆಗಿರುವ ಅಕ್ರಮಗಳ ಬಗ್ಗೆ ದಾಖಲೆಗಳ ಸಮೇತ ಆಯೋಗಕ್ಕೆ ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡಲಾಗುತ್ತದೆ. ಈ ಬಗ್ಗೆ ರಾಹುಲ್ ಗಾಂಧಿ ಅವರೇ ಮಾಹಿತಿ ನೀಡಲಿದ್ದಾರೆ.ಸ್ವಾತಂತ್ರ್ಯ ಉದ್ಯಾನದಲ್ಲಿ ಕಾನೂನು ಚೌಕಟ್ಟಿನಲ್ಲಿ ಪ್ರತಿಭಟನೆ ನಡೆಸಲು ಎಲ್ಲರು ಸಹಕರಿಸಬೇಕೆಂದು ಡಿ.ಕೆ.ಶಿವಕುಮಾರ್ ಕರೆ ನೀಡಿದರು.
ರಾಜ್ಯ ಮುಖ್ಯ ಚುನಾವಣಾ ಆಯೋಗಕ್ಕೆ ಸಲ್ಲಿಸುವ ದಾಖಲೆ ವಿಜಯವಾಣಿಗೆ ಲಭ್ಯವಾಗಿದೆ. ಬೆಂಗಳೂರಿನ ಎರಡು ವಿಧಾನಸಭಾ ಕ್ಷೇತ್ರ ಮತ್ತು ಮಹಾರಾಷ್ಟ್ರದ ಕೆಲ ಕ್ಷೇತ್ರದ ಮತದಾರರ ಪಟ್ಟಿ ಬಿಡುಗಡೆ ಮಾಡಲಿದ್ದಾರೆ. ವಿಧಾನಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಹೆಚ್ಚಿನ ಮತಗಳು ಬಂದಿದ್ದು, ಲೋಕಸಭಾ ಚುನಾವಣೆಯಲ್ಲಿ ಅಲ್ಪಮತಗಳು ಬಂದಿವೆ. ಒಂದೇ ಮನೆಯಲ್ಲಿ 50-100 ಮತಗಳು ಇರುವ ಬಗ್ಗೆ ರಾಹುಲ್ ಗಾಂಧಿ ದಾಖಲೆ ಬಿಡುಗಡೆ ಮಾಡಲಿದ್ದಾರೆ. ಒಬ್ಬನೇ ವ್ಯಕ್ತಿಯ ಹೆಸರು ಹತ್ತಾರು ಕಡೆ ಇರುವುದನ್ನು ಗುರುತಿಸಲಾಗಿದೆ.
ಖಾಲಿ ಇವೆ 10,227 ಬ್ಯಾಂಕ್ ಹುದ್ದೆಗಳು
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


