ಲೋಕಸಭಾ ಚುನಾವಣೆಯಲ್ಲಿ ಚುನಾವಣಾ ಆಯೋಗ ಬಿಜೆಪಿ ಜತೆ ಕೈಜೋಡಿಸಿ ಮತಗಳ್ಳತನ ಮಾಡಲು ಅನುವು ಮಾಡಿಕೊಟ್ಟಿದೆ ಎಂದು ಆರೋಪಿಸಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸಾಕ್ಷಿ ಸಮೇತ ಜನರ ಮುಂದೆ ಬಿಚ್ಚಿಡುತ್ತೇನೆ ಎಂದು ತಿಳಿಸಿದ್ದರು.
ಅದರಂತೆ ಇಂದು ( ಆಗಸ್ಟ್ 7 ) ವಿಶೇಷ ಸುದ್ದಿಗೋಷ್ಟಿ ನಡೆಸಿದ ರಾಹುಲ್ ಗಾಂಧಿ ದೇಶದ ವಿವಿಧ ಲೋಕಸಭಾ ಕ್ಷೇತ್ರಗಳಲ್ಲಿ ಮತಗಳ ಅಕ್ರಮ ನಡೆದಿದೆ ಎಂದು ಆರೋಪಿಸಿದ್ದಾರೆ.
ರಾಜ್ಯದ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಬಗ್ಗೆ ಮಾತನಾಡಿದ ರಾಹುಲ್ ಗಾಂಧಿ ಮಹದೇವಪುರ ಮತಗಟ್ಟೆಗಳ ವೋಟ್‌ಗಳ ಮೇಲೆ ಅನುಮಾನ ಹೊರಹಾಕಿದರು.
ಈ ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ಪಿ.ಸಿ. ಮೋಹನ್ 32707 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು ಎಂದು ಘೋಷಿಸಲಾಯಿತು. ಮಹದೇವಪುರ ಒಂದರಲ್ಲೇ ಬಿಜೆಪಿ 114046 ಮತಗಳಿಂದ ಮುನ್ನಡೆ ಸಾಧಿಸಿತ್ತು ಎಂದು ಹೇಳಿದ ರಾಹುಲ್ ಗಾಂಧಿ ಈ ಪೈಕಿ 100250 ಮತಗಳು ನಕಲಿ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಇಲ್ಲಿ ಅಕ್ರಮ ನಡೆಯದೇ ಇದ್ದಿದ್ದರೆ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ಮಹದೇವಪುರದಲ್ಲಿ 80000 ಮತಗಳ ಮುನ್ನಡೆ ಕಾಯ್ದುಕೊಳ್ಳುತ್ತಿದ್ದರು ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.
ಧರ್ಮಸ್ಥಳದಲ್ಲಿ ಯುಟ್ಯೂಬರ್ಸ್ ಮೇಲೆ ಹಲ್ಲೆ; ವಿಜಯೇಂದ್ರ ಪ್ರತಿಕ್ರಿಯೆ
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


