ನವದೆಹಲಿ: ಲೋಕಸಭೆ ಚುನಾವಣೆ ಕರ್ನಾಟಕದ ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ ವ್ಯಾಪ್ತಿಯ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಕಲಿ ಮತದಾನ ನಡೆದಿರುವುದನ್ನು ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಸಾಕ್ಷಿ ಸಮೇತ ಬಹಿರಂಗಪಡಿಸಿದ್ದು. ಚುನಾವಣಾ ಕಾರ್ಯವೈಖರಿ ಮೇಲೆ ಸಂಶಯದ ನೆರಳು ಮೂಡಿದೆ.
ಈ ಹಿಂದೆ ಕರ್ನಾಟಕದಲ್ಲಿ ನಕಲಿ ಮತದಾನ ನಡೆದಿದೆ ಎಂಬ ಆರೋಪಕ್ಕೆ ದಾಖಲೆ ಸಮೇತ ವಿವರ ನೀಡಿರುವ ಅವರು ಬಿಹಾರದಲ್ಲೂ ಚುನಾವಣಾ ಆಯೋಗದೊಂದಿಗೆ ಬಿಜೆಪಿ ಕಾಮೀಲಾಗಿ ಗೆಲಲು ಹೊರದಿದೆ ಎಂದು ಆರೋಪಿಸಿದ್ದಾರೆ.
ಶುಕ್ರವಾರ ನವದೆಹಲಿಯ ನೂತನ ಕಾಂಗ್ರೆಸ್ ಕಚೇರಿ ಇಂದಿರಾಗಾಂಧಿ ಭವನದಲ್ಲಿ ವಿಡಿಯೋ ಸಾಕ್ಷಿ ಮೂಲಕ ನಕಲಿ ಮತದಾರರ ಸೇರ್ವಣೆ ಹಾಗೂ ಕೆಲವು ಕಡೆ ಅಸಲಿ ಮತದಾರರನ್ನು ತೆಗೆದು ಹಾಕಿರುವುದನ್ನು ದಾಖಲೆಗಳ ಮೂಲಕ ಬಹಿರಂಗಪಡಿಸಿ ಆಯೋಗದ ವಿರುದ್ಧ ಕಿಡಿಕಾರಿದರು.
ತಮ್ಮ ಪಕ್ಷವು ಸಂಶೋಧನೆ ನಡೆಸಿ ಮಹದೇವಪುರದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ನಕಲಿ ಮತದಾರರು, ಅಮಾನ್ಯ ವಿಳಾಸಗಳು, ಬೃಹತ್ ಮತದಾರರು ಕಂಡುಬಂದಿದ್ದಾರೆ.
ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ, ಲೋಕಸಭೆಯ ವಿರೋಧ ಪಕ್ಷದ ನಾಯಕ 6.5 ಲಕ್ಷ ಮತಗಳಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಮತಗಳ ಮತ ಚೋರಿ ಇತ್ತು ಎಂದು ಹೇಳಿದರು.
ಕರ್ನಾಟಕದ ಮತದಾರರ ಪಟ್ಟಿಗಳಲ್ಲಿ ವಂಚನೆ ನಡೆದಿದೆ ಎಂದು ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದು, ಕರ್ನಾಟಕದಲ್ಲಿ 40,009 ನಕಲಿ ಮತದಾರರ ವಿಳಾಸಗಳಿವೆ ಎಂದಿದ್ದಾರೆ. ಕಾಂಗ್ರೆಸ್ ನಡೆಸಿದ¿ವೋಟ್ ಚೋರಿ ತನಿಖೆಯಲ್ಲಿ ಮನೆ ಸಂಖ್ಯೆ 0ಎಂದು ಉಲ್ಲೇಖಿಸಿರುವುದಾಗಿ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಚುನಾವಣಾ ಆಯೋಗವು ಮತಗಳನ್ನು ಕದಿಯಲು ಬಿಜೆಪಿಯೊಂದಿಗೆ ಕೈಜೋಡಿಸಿದೆ. ಮತದಾರರ ಪಟ್ಟಿಗಳಿಗೆ ನಕಲಿ ಜನರನ್ನು ಸೇರಿಸಲಾಗುತ್ತಿದೆ ಎಂದಿದ್ದಾರೆ. ಕರ್ನಾಟಕ ಮತದಾರರ ಪಟ್ಟಿಯನ್ನು ತೋರಿಸುವ ಮೂಲಕ ಅವರು ತಮ್ಮ ಆರೋಪಕ್ಕೆ ಸಾಕ್ಷಿ ಒದಗಿಸಿದ್ದಾರೆ.
ನನಗೆ ರೈತರ ಹಿತವೇ ಮುಖ್ಯ; ಟ್ರಂಪ್‌ಗೆ ನರೇಂದ್ರ ಮೋದಿ ತಿರುಗೇಟು
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


